< ಕೀರ್ತನೆಗಳು 58 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ದಾವೀದನ ಕಾವ್ಯ. ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?
למנצח אל-תשחת לדוד מכתם ב האמנם--אלם צדק תדברון מישרים תשפטו בני אדם
2 ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.
אף-בלב עולת תפעלון בארץ--חמס ידיכם תפלסון
3 ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.
זרו רשעים מרחם תעו מבטן דברי כזב
4 ಅವರು ಸರ್ಪದಂತೆ ವಿಷಭರಿತರು.
חמת-למו כדמות חמת-נחש כמו-פתן חרש יאטם אזנו
5 ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
אשר לא-ישמע לקול מלחשים חובר חברים מחכם
6 ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.
אלהים--הרס שנימו בפימו מלתעות כפירים נתץ יהוה
7 ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.
ימאסו כמו-מים יתהלכו-למו ידרך חצו כמו יתמללו
8 ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.
כמו שבלול תמס יהלך נפל אשת בל-חזו שמש
9 ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.
בטרם יבינו סירתכם אטד כמו-חי כמו-חרון ישערנו
10 ೧೦ ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.
ישמח צדיק כי-חזה נקם פעמיו ירחץ בדם הרשע
11 ೧೧ ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.
ויאמר אדם אך-פרי לצדיק אך יש-אלהים שפטים בארץ

< ಕೀರ್ತನೆಗಳು 58 >