< ಕೀರ್ತನೆಗಳು 65 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ, ಹಾಡು. ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ.
To him that excelleth. A Psalme or song of David. O God, praise waiteth for thee in Zion, and vnto thee shall the vowe be perfourmed.
2 ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.
Because thou hearest the prayer, vnto thee shall all flesh come.
3 ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.
Wicked deedes haue preuailed against me: but thou wilt be mercifull vnto our transgressions.
4 ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.
Blessed is he, whom thou chusest and causest to come to thee: he shall dwell in thy courtes, and we shall be satisfied with the pleasures of thine House, euen of thine holy Temple.
5 ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.
O God of our saluation, thou wilt answere vs with fearefull signes in thy righteousnes, O thou the hope of all the ends of the earth, and of them that are farre off in the sea.
6 ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.
He stablisheth the mountaines by his power: and is girded about with strength.
7 ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.
He appeaseth the noyse of the seas and the noyse of the waues thereof, and the tumults of the people.
8 ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.
They also, that dwell in the vttermost parts of the earth, shalbe afraide of thy signes: thou shalt make the East and the West to reioyce.
9 ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.
Thou visitest the earth, and waterest it: thou makest it very riche: the Riuer of God is full of water: thou preparest them corne: for so thou appointest it.
10 ೧೦ ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ.
Thou waterest abundantly the furrowes thereof: thou causest the raine to descende into the valleies thereof: thou makest it soft with showres, and blessest the bud thereof.
11 ೧೧ ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು.
Thou crownest ye yeere with thy goodnesse, and thy steppes droppe fatnesse.
12 ೧೨ ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.
They drop vpon the pastures of the wildernesse: and the hils shalbe compassed with gladnes.
13 ೧೩ ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.
The pastures are clad with sheepe: the valleis also shalbe couered with corne: therefore they shoute for ioye, and sing.

< ಕೀರ್ತನೆಗಳು 65 >