< ಕೀರ್ತನೆಗಳು 67 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. (ಸೆಲಾ)
一篇詩歌,交與伶長。用絲弦的樂器。 願上帝憐憫我們,賜福與我們, 用臉光照我們, (細拉)
2 ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.
好叫世界得知你的道路, 萬國得知你的救恩。
3 ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
上帝啊,願列邦稱讚你! 願萬民都稱讚你!
4 ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. (ಸೆಲಾ)
願萬國都快樂歡呼; 因為你必按公正審判萬民, 引導世上的萬國。 (細拉)
5 ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
上帝啊,願列邦稱讚你! 願萬民都稱讚你!
6 ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;
地已經出了土產; 上帝-就是我們的上帝要賜福與我們。
7 ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.
上帝要賜福與我們; 地的四極都要敬畏他!

< ಕೀರ್ತನೆಗಳು 67 >