< ಕೀರ್ತನೆಗಳು 74 >

1 ಆಸಾಫನ ಪದ್ಯ. ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?
Oh Bog, zakaj nas zavračaš za vedno? Zakaj se tvoja jeza kadi proti ovcam tvoje paše?
2 ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.
Spomni se svoje skupnosti, ki si jo odkupil od davnine, palico svoje dediščine, ki si jo odkupil, to goro Sion, kjer prebivaš.
3 ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು. ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ.
Dvigni svoja stopala k neprestanim opustošenjem, celó vsemu kar je sovražnik zlobnega storil v svetišču.
4 ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.
Tvoji sovražniki rjovijo v sredi tvojih skupnosti, svoje zastave so postavili za znamenja.
5 ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ.
Človek je bil slaven, če je nad debela drevesa dvigoval sekire.
6 ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ, ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ.
Toda sedaj so s sekirami in kladivi takoj zlomili rezljano delo le-tega.
7 ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.
Ogenj so vrgli v tvoje svetišče, s podrtjem do tal so omadeževali bivališče tvojega imena.
8 “ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ” ಅಂದುಕೊಂಡಿದ್ದಾರೆ; ದೇಶದಲ್ಲಿರುವ ನಿನ್ನ ಎಲ್ಲಾ ಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ.
V svojih srcih so rekli: »Skupaj jih uničimo.« V deželi so požgali vse Božje sinagoge.
9 ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.
Ne vidimo svojih znamenj. Nobenega preroka ni več niti tukaj med nami ni nobenega, ki ve doklej.
10 ೧೦ ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?
Oh Bog, doklej bo nasprotnik grajal? Mar bo sovražnik na veke preklinjal tvoje ime?
11 ೧೧ ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು.
Zakaj umikaš svojo roko, celó svojo desnico? Iztrgaj jo iz svojega naročja.
12 ೧೨ ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ?
Kajti Bog je moj Kralj od davnine, ki dela rešitev duš v sredi zemlje.
13 ೧೩ ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.
S svojo močjo si razdelil morje. Razbijaš glave zmajem v vodah.
14 ೧೪ ಲಿವ್ಯಾತಾನನ ಶಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ ಆಹಾರ ಕೊಟ್ಟವನು ನೀನು.
Razbijaš glave leviatána na koščke in ga daješ, da postane hrana ljudstvu, ki prebiva v divjini.
15 ೧೫ ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.
Združil si studenec in morje, osušuješ mogočne reke.
16 ೧೬ ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.
Dan je tvoj, tudi noč je tvoja, pripravil si svetlobo in sonce.
17 ೧೭ ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು.
Določil si vse meje zemlje. Naredil si poletje in zimo.
18 ೧೮ ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.
Spomni se, da je sovražnik grajal, oh Gospod in da je nespametno ljudstvo izrekalo bogokletje proti tvojemu imenu.
19 ೧೯ ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ; ನಿನ್ನ ದೀನಮಂಡಲಿಯನ್ನು ಸದಾ ಮರೆಯಬೇಡ.
Oh ne izročaj duše svoje grlice množici zlobnih. Ne pozabi skupnosti svojih ubogih na veke.
20 ೨೦ ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರ ಸ್ಥಾನಗಳಲ್ಲಿ ಬಲತ್ಕಾರವು ತುಂಬಿ ವಾಸಿಸುತ್ತದಲ್ಲಾ.
Ozri se k zavezi, kajti temni kraji zemlje so polni prebivališč krutosti.
21 ೨೧ ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ; ದುಃಖಿತರೂ, ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ.
Oh naj se zatirani ne vrne osramočen. Naj ubog in pomoči potreben hvalita tvoje ime.
22 ೨೨ ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ.
Vstani, oh Bog, zagovarjaj svojo lastno pravdo. Spomni se, kako te nespameten človek dnevno graja.
23 ೨೩ ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ, ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು.
Ne pozabi glasu svojih sovražnikov. Hrup teh, ki vstajajo zoper tebe, se nenehno povečuje.

< ಕೀರ್ತನೆಗಳು 74 >