< ಕೀರ್ತನೆಗಳು 76 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಆಸಾಫನ ಹಾಡು. ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.
למנצח בנגינת מזמור לאסף שיר ב נודע ביהודה אלהים בישראל גדול שמו
2 ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.
ויהי בשלם סוכו ומעונתו בציון
3 ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. (ಸೆಲಾ)
שמה שבר רשפי-קשת מגן וחרב ומלחמה סלה
4 ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು.
נאור אתה אדיר-- מהררי-טרף
5 ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು.
אשתוללו אבירי לב-- נמו שנתם ולא-מצאו כל-אנשי-חיל ידיהם
6 ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.
מגערתך אלהי יעקב נרדם ורכב וסוס
7 ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?
אתה נורא אתה--ומי-יעמד לפניך מאז אפך
8 ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,
משמים השמעת דין ארץ יראה ושקטה
9 ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. (ಸೆಲಾ)
בקום-למשפט אלהים-- להושיע כל-ענוי-ארץ סלה
10 ೧೦ ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.
כי-חמת אדם תודך שארית חמת תחגר
11 ೧೧ ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.
נדרו ושלמו ליהוה אלהיכם כל-סביביו--יבילו שי למורא
12 ೧೨ ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.
יבצר רוח נגידים נורא למלכי-ארץ

< ಕೀರ್ತನೆಗಳು 76 >