< ಕೀರ್ತನೆಗಳು 77 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ. ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು.
برای سالار مغنیان بر یدوتون. مزمور آساف آواز من بسوی خداست و فریادمی کنم. آواز من بسوی خداست گوش خود را به من فرا خواهد گرفت.۱
2 ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.
در روز تنگی خود خداوند را طلب کردم. در شب، دست من دراز شده، بازکشیده نگشت و جان من تسلی نپذیرفت.۲
3 ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.
خدا را یاد می‌کنم و پریشان می‌شوم. تفکر می‌نمایم و روح من متحیر می‌گردد، سلاه.۳
4 ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು.
چشمانم را بیدار می‌داشتی. بی‌تاب می‌شدم وسخن نمی توانستم گفت.۴
5 ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು.
درباره ایام قدیم تفکرکرده‌ام. درباره سالهای زمانهای سلف.۵
6 ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ,
سرودشبانه خود را بخاطر می‌آورم و در دل خود تفکرمی کنم و روح من تفتیش نموده است.۶
7 “ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ?
مگر خداتا به ابد ترک خواهد کرد و دیگر هرگز راضی نخواهد شد.۷
8 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?
آیا رحمت او تا به ابد زایل شده است؟ و قول او باطل گردیده تا ابدالاباد؟۸
9 ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು (ಸೆಲಾ)
آیاخدا رافت را فراموش کرده؟ و رحمت های خودرا در غضب مسدود ساخته است؟ سلاه.۹
10 ೧೦ ಪುನಃ ನಾನು, “ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು.
پس گفتم این ضعف من است. زهی سالهای دست راست حضرت اعلی!۱۰
11 ೧೧ ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.
کارهای خداوند را ذکرخواهم نمود زیرا کار عجیب تو را که از قدیم است به یاد خواهم آورد.۱۱
12 ೧೨ ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು.
و در جمیع کارهای تو تامل خواهم کرد و در صنعتهای تو تفکرخواهم نمود.۱۲
13 ೧೩ ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?
‌ای خدا، طریق تو در قدوسیت است. کیست خدای بزرگ مثل خدا؟۱۳
14 ೧೪ ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.
تو خدایی هستی که کارهای عجیب می‌کنی و قوت خویش را بر قوم‌ها معروف گردانیده‌ای.۱۴
15 ೧೫ ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, ಭುಜಬಲದಿಂದ ಬಿಡುಗಡೆಮಾಡಿದಿ. (ಸೆಲಾ)
قوم خود را به بازوی خویش رهانیده‌ای یعنی بنی یعقوب وبنی یوسف را. سلاه.۱۵
16 ೧೬ ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.
آبها تو را دید، ای خداآبها تو را دیده، متزلزل شد. لجه‌ها نیز سخت مضطرب گردید.۱۶
17 ೧೭ ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.
ابرها آب بریخت و افلاک رعد بداد. تیرهای تو نیز به هر طرف روان گردید.۱۷
18 ೧೮ ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.
صدای رعد تو در گردباد بود و برقها ربع مسکون را روشن کرد. پس زمین مرتعش و متزلزل گردید.۱۸
19 ೧೯ ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.
طریق تو در دریاست و راههای تو درآبهای فراوان و آثار تو را نتوان دانست.۱۹
20 ೨೦ ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.
قوم خود را مثل گوسفندان راهنمایی نمودی، به‌دست موسی و هارون.۲۰

< ಕೀರ್ತನೆಗಳು 77 >