< ಕೀರ್ತನೆಗಳು 78 >

1 ಆಸಾಫನ ಪದ್ಯ. ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ; ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ.
Intelligence d’Asaph.
2 ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.
J’ouvrirai ma bouche en paraboles: je dirai des choses cachées dès le commencement;
3 ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ,
Combien de grandes choses nous avons entendu et connues, et que nos pères nous ont racontées.
4 ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.
Elles n’ont pas été cachées à leurs fils dans une autre génération. Ils ont raconté les louanges du Seigneur, ses œuvres puissantes, et ses merveilles qu’il a faites;
5 ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು, ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು, ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;
Et a suscité un témoignage dans Jacob; et a établi une loi dans Israël: Combien de grandes choses il a commandé à nos pères de faire connaître à leurs fils,
6 ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.
Afin qu’une autre génération les connaisse. Les fils qui naîtront et s’élèveront après eux les raconteront à leurs fils,
7 ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,
Afin qu’ils mettent en Dieu leur espérance, qu’ils n’oublient pas ses œuvres, et qu’ils recherchent ses commandements.
8 ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.
De peur qu’ils ne deviennent comme leurs pères une génération perverse et exaspérant Dieu; Une génération qui n’a point dirigé son cœur, et dont l’esprit ne s’est point confié en Dieu.
9 ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು.
Les fils d’Ephraïm, habiles à tendre l’arc et à en tirer, ont tourné le dos au jour du combat.
10 ೧೦ ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.
Ils n’ont pas gardé l’alliance de Dieu, et ils n’ont pas voulu marcher dans sa loi.
11 ೧೧ ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು.
Ils ont oublié ses bienfaits et les merveilles qu’il leur a montrées.
12 ೧೨ ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.
Devant leurs pères il a fait des merveilles, dans la terre d’Égypte, dans la plaine de Tanis.
13 ೧೩ ಆತನು ಸಮುದ್ರವನ್ನು ವಿಭಾಗಿಸಿ, ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು.
Il divisa la mer, et il les fit passer: et il fixa les eaux comme dans une outre.
14 ೧೪ ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, ಆತನು ಅವರನ್ನು ಕರೆದೊಯ್ದನು.
Il les conduisit, le jour, au moyen d’une nuée, et toute la nuit à la clarté d’un feu.
15 ೧೫ ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.
Il fendit une pierre dans le désert, et les fit boire comme à un abîme abondant.
16 ೧೬ ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ, ನದಿಗಳಾಗಿ ಹರಿಯಮಾಡಿದನು.
Car il fit sortir de l’eau de la pierre, et il en fit sortir des eaux comme des fleuves.
17 ೧೭ ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.
Mais ils péchèrent encore de nouveau contre lui, ils excitèrent à la colère le Très-Haut dans un lieu sans eau.
18 ೧೮ ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು.
Et ils tentèrent Dieu dans leurs cœurs, au point qu’ils demandèrent une nourriture pour leurs âmes.
19 ೧೯ ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?
Et ils parlèrent mal de Dieu, ils dirent: Est-ce que Dieu pourra préparer une table dans le désert?
20 ೨೦ ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ.
Parce qu’il a frappé une pierre, et que des eaux ont coulé; et que des torrents ont débordé. Est-ce qu’il pourra aussi donner du pain et préparer une table pour son peuple?
21 ೨೧ ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,
C’est pour cela que le Seigneur entendit et différa; mais un feu s’alluma contre Jacob, et sa colère monta contre Israël;
22 ೨೨ ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.
Parce qu’ils ne crurent pas en Dieu, et qu’ils n’espérèrent pas en son salut;
23 ೨೩ ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು,
Et il commanda aux nuées d’en haut, et il ouvrit les portes du ciel.
24 ೨೪ ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು.
Et il leur fit pleuvoir de la manne pour manger, et il leur donna du pain du ciel.
25 ೨೫ ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು.
L’homme mangea le pain des anges, Dieu leur envoya une nourriture en abondance.
26 ೨೬ ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು,
Il fit disparaître du ciel le vent du midi, et il amena par sa puissance le vent d’Afrique.
27 ೨೭ ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.
Il fit pleuvoir sur eux des viandes comme la poussière, et des oiseaux comme le sable de la mer.
28 ೨೮ ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.
Et ils tombèrent au milieu de leur camp, autour de leurs tabernacles.
29 ೨೯ ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು.
Ils mangèrent et ils furent rassasiés à l’excès, et Dieu leur accorda selon leur désir;
30 ೩೦ ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ,
Ils ne furent point frustrés dans leur désir. Leurs viandes étaient encore dans leur bouche,
31 ೩೧ ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, ಅವರಲ್ಲಿ ಕೊಬ್ಬಿದವರನ್ನು ವಧಿಸಿ, ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು.
Quand la colère de Dieu tomba sur eux. Et il tua les gras d’entre eux, et rejeta l’élite d’Israël.
32 ೩೨ ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.
Au milieu de tous ces prodiges ils péchèrent encore, et ne crurent pas à ses merveilles.
33 ೩೩ ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.
Et leurs jours se terminèrent vainement, et leurs années avec rapidité.
34 ೩೪ ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,
Lorsqu’il les tuait, ils le cherchaient, et ils revenaient, et, dès le point du jour, ils venaient à lui.
35 ೩೫ ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.
Et ils se souvinrent que Dieu était leur aide, et que le Dieu très haut était leur rédempteur.
36 ೩೬ ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು.
Mais ils l’aimèrent de bouche seulement, et ils lui mentirent par leur langue;
37 ೩೭ ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.
Car leur cœur n’était pas droit avec lui, et ils ne furent pas trouvés fidèles à son alliance.
38 ೩೮ ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
Mais lui est miséricordieux, il pardonnera leurs péchés, et ne les perdra pas entièrement. Et souvent il détourna sa colère, et il n’alluma pas toute sa colère.
39 ೩೯ ಅವರು ಮಾಂಸಮಾತ್ರದವರೂ, ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು.
Il se rappela qu’ils étaient chair, un souffle qui va et qui ne revient pas.
40 ೪೦ ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.
Combien de fois l’ont-ils irrité dans le désert, et l’ont-ils excité à la colère dans un lieu sans eau?
41 ೪೧ ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.
Et de nouveau ils tentèrent Dieu, et ils ont aigri le saint d’Israël.
42 ೪೨ ಅವರು ಆತನ ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ,
Ils ne se sont pas rappelé sa main, au jour où il les retira de la main d’un oppresseur,
43 ೪೩ ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.
Comment il fit en Égypte ses miracles, et ses prodiges dans la plaine de Tanis.
44 ೪೪ ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು.
Et il changea en sang leurs fleuves et leurs pluies, pour qu’ils ne bussent point.
45 ೪೫ ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು.
Il envoya contre eux une multitude de mouches qui les dévorèrent, et la grenouille qui les ravagea.
46 ೪೬ ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ, ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು.
Et il donna à la rouille leurs fruits, et leurs travaux à la sauterelle.
47 ೪೭ ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ, ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.
Et il fit périr par la grêle leurs vignes, et leurs mûriers par la gelée.
48 ೪೮ ಅವರ ದನಗಳನ್ನು ಕಲ್ಮಳೆಗೂ, ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.
Et il livra à la grêle leurs bêtes, et leurs possessions au feu.
49 ೪೯ ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.
Il envoya contre eux la colère de son indignation: l’indignation, et la colère, et la tribulation envoyées par des anges mauvais.
50 ೫೦ ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ, ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.
Il fit une voie au sentier de sa colère, et il n’épargna pas la mort à leurs âmes; et leurs bêtes, il les renferma dans la mort.
51 ೫೧ ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.
Et il frappa tout premier-né d’Égypte, les prémices de tout travail dans les tabernacles de Cham.
52 ೫೨ ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.
Et il en retira, comme des brebis, son peuple; et il les conduisit comme un troupeau dans le désert.
53 ೫೩ ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು;
Et il les fit sortir pleins d’espérance, et ils ne craignirent point; quant à leurs ennemis, la mer les couvrit.
54 ೫೪ ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರೆದುಕೊಂಡು ಬಂದನು.
Et il les amena sur la montagne de sa sanctification; montagne qu’a acquise sa droite. Et il chassa de leur face des nations; et il leur divisa au sort une terre avec un cordeau de partage.
55 ೫೫ ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.
Et il fit habiter dans leurs tabernacles les tribus d’Israël.
56 ೫೬ ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಗೊಳ್ಳದೆ,
Mais ils tentèrent et aigrirent le Dieu très haut; et ne gardèrent pas ses témoignages.
57 ೫೭ ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.
Et ils se détournèrent de lui et n’observèrent pas l’alliance; de la même manière que leurs pères, ils devinrent comme un arc qui porte à faux.
58 ೫೮ ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.
Ils l’ont excité à la colère sur leurs collines; et par leurs images taillées au ciseau, ils l’ont provoqué à la jalousie.
59 ೫೯ ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು.
Dieu entendit, et il méprisa, et il réduisit entièrement au néant Israël.
60 ೬೦ ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು,
Et il repoussa le tabernacle de Silo, son tabernacle où il avait habité parmi les hommes.
61 ೬೧ ತನ್ನ ಪ್ರತಾಪವನ್ನು ಸೆರೆಯಾಗುವುದಕ್ಕೂ, ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು.
Il livra à la captivité l’arche, leur force; et leur beauté entre les mains de l’ennemi.
62 ೬೨ ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ, ತನ್ನ ಬಾಧ್ಯತೆಯ ಮೇಲೆ ಉಗ್ರನಾದನು.
Il renferma son peuple entre les glaives; et son héritage, il le méprisa.
63 ೬೩ ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರು ವಿವಾಹವಾಗಲಿಲ್ಲ.
Un feu dévora leurs jeunes hommes; et leurs vierges ne furent pas pleurées.
64 ೬೪ ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.
Leurs prêtres tombèrent sous le glaive, et on ne pleurait pas leurs veuves.
65 ೬೫ ಆ ವರೆಗೆ ನಿದ್ರಿಸುವವನಂತೆಯೂ, ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು,
Mais le Seigneur se réveilla comme un homme endormi, comme un héros qui a été ivre de vin.
66 ೬೬ ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.
Il frappa ses ennemis par derrière; il leur infligea un opprobre éternel.
67 ೬೭ ಯೋಸೇಫನ ಕುಲದ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮ್ ಕುಲವನ್ನು ತ್ಯಜಿಸಿ,
Et il repoussa le tabernacle de Joseph, et ne choisit point la tribu d’Éphraïm;
68 ೬೮ ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.
Mais il choisit la tribu de Juda, la montagne de Sion qu’il a aimée.
69 ೬೯ ಆತನು ತನ್ನ ಆಲಯವನ್ನು ಪರ್ವತದಂತೆಯೂ, ತಾನು ಸ್ಥಾಪಿಸಿದ ಭೂಮಿಯಂತೆಯೂ ಶಾಶ್ವತವಾಗಿ ಕಟ್ಟಿದನು.
Et il bâtit comme une corne de licornes son sanctuaire, dans la terre qu’il a fondée pour les siècles.
70 ೭೦ ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು,
Il choisit David son serviteur, et il le tira du milieu des troupeaux de brebis: il le prit à la suite de celles qui étaient pleines,
71 ೭೧ ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.
Pour être le pasteur de Jacob son serviteur, et d’Israël son héritage.
72 ೭೨ ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ, ತನ್ನ ಹಸ್ತಕೌಶಲ್ಯದಿಂದ ನಡೆಸಿದನು.
Et David les fit paître dans l’innocence de son cœur, et avec ses mains habiles, il les conduisit.

< ಕೀರ್ತನೆಗಳು 78 >