< ಕೀರ್ತನೆಗಳು 80 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಶೋಶನ್ನೀಮ್ ಎದೂತೆಂಬ ರಾಗ. ಆಸಾಫನ ಕೀರ್ತನೆ. ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.
Usikie, Mchungaji wa Israel, wewe uliye muongoza Yusufu kama kundi; wewe uketiye juu ya makerubi, utuangazie!
2 ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ, ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು.
Machoni pa Efraimu na Benjamini na Manase, uziinue nguvu zako; njoo na utuokoe.
3 ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
Mungu, uturejeshe sisi; uangaze uso wako juu yetu, nasi tutaokolewa.
4 ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ?
Yahwe Mungu wa majeshi, mpaka lini utawakasirikia watu wako wanapoomba?
5 ರೋದನವೇ ಅವರ ಆಹಾರವಾಗುವಂತೆಯೂ, ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ.
Umewalisha wa mkate wa machozi na umewapa machozi ili wanywe katika kiasi kikubwa.
6 ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ.
Umetufanya kitu kwa ajili ya majirani zetu kubishania, na maadui zetu hucheka kuhusu sisi kati yao.
7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
Mungu wa majeshi, uturejeshe sisi; nasi tutaokolewa.
8 ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.
Wewe ulileta mzabibu kutoka Misri; ukawafukuza mataifa na ukaupanda.
9 ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.
Uliisafisha ardhi kwa ajil yake; nao ulipata mzizi na kuijaza nchi.
10 ೧೦ ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು.
Milima ilifunikwa kwa kivuli chake, mierezi ya Mungu kwa matawi yake.
11 ೧೧ ಅದರ ಕೊಂಬೆಗಳು ಸಮುದ್ರದವರೆಗೂ, ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು.
Ilieneza matawi yake mbali kama bahari na mashina yake mpaka kwenye Mto Euphrates.
12 ೧೨ ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ.
Kwa nini umezibomoa kuta zake hata wapitao karibu huyachuma matunda yake.
13 ೧೩ ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.
Ngurue wa msituni wanauharibu, na wanyama wa kondeni wanaula.
14 ೧೪ ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು.
Urudi, Ee Mungu wa majeshi; kutoka mbinguni utazame chini na uuangalie na kuujali huu mzabibu.
15 ೧೫ ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.
Huu ni mzizi ambao mkono wako wa kuume umeupanda, mashina ambayo wewe uliyafanya yakue.
16 ೧೬ ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.
Yamekatwa na kuchomwa; yameangamia kwa sababu ya kukemea kwako.
17 ೧೭ ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು.
Mkono wako na uwe juu ya mtu aliye mkono wako wa kuume, kwa mwana wa mtu uliyemfanya imara kwa ajili yako mwenyewe.
18 ೧೮ ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.
Ndipo hatuta kuacha wewe; utuhuishe, nasi tutaliita jina lako.
19 ೧೯ ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
Yahwe, Mungu wa majeshi, uturejeshe sisi; utuangazie nuru ya uso wako, nasi tutaokolewa.

< ಕೀರ್ತನೆಗಳು 80 >