< ಕೀರ್ತನೆಗಳು 81 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಆಸಾಫನ ಕೀರ್ತನೆ. ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.
Radujte se Bogu, koji nam daje krjepost; poklikujte Bogu Jakovljevu.
2 ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.
Podignite pjesme, dajte bubanj, slatke gusle sa psaltirom.
3 ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.
Trubite o mijeni u trubu, o uštapu radi praznika našega.
4 ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು.
Jer je taki zakon u Izrailja, naredba od Boga Jakovljeva.
5 ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ,
Za svjedoèanstvo postavi Josifu ovo, kad iðaše na zemlju Misirsku. Jezik, kojega ne znah, èuh:
6 “ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.
“Uklonio sam ramena njegova od bremena, ruke njegove oprostiše se kotarica.
7 ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. (ಸೆಲಾ)
U nevolji si me zazvao, i izbavih te, usliših te usred groma, na vodi Merivi iskušah te.
8 ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,
Slušaj, narode moj, i zasvjedoèiæu ti, Izrailju, o kad bi me poslušao:
9 ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;
Da ne bude u tebe tuðega Boga, i Bogu stranome nemoj se klanjati.
10 ೧೦ ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
Ja sam Gospod, Bog tvoj, koji sam te izveo iz zemlje Misirske; otvori usta svoja, i ja æu ih napuniti.
11 ೧೧ ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.
Ali ne posluša narod moj glasa mojega, Izrailj ne mari za me.
12 ೧೨ ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.
I ja ih pustih na volju srca njihova, neka hode po svojim mislima.
13 ೧೩ ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!
O kad bi narod moj slušao mene, i sinovi Izrailjevi hodili putovima mojim!
14 ೧೪ ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು.
Brzo bih pokorio neprijatelje njihove, i na protivnike njihove digao bih ruku svoju;
15 ೧೫ ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.
Koji mrze na Gospoda, bili bi im pokorni, i dobri dani njihovi bili bi dovijeka;
16 ೧೬ ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.
Najboljom bi pšenicom hranio njih, i medom bih iz kamena sitio ih.”

< ಕೀರ್ತನೆಗಳು 81 >