< ಕೀರ್ತನೆಗಳು 83 >

1 ಆಸಾಫನ ಕೀರ್ತನೆ; ಗೀತೆ. ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.
Песнь. Псалом Асафа. Боже! Не премолчи, не безмолвствуй и не оставайся в покое, Боже,
2 ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.
ибо вот, враги Твои шумят, и ненавидящие Тебя подняли голову;
3 ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ,
против народа Твоего составили коварный умысел и совещаются против хранимых Тобою;
4 “ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ.
сказали: “пойдем и истребим их из народов, чтобы не вспоминалось более имя Израиля.”
5 ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು,
Сговорились единодушно, заключили против Тебя союз:
6 ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು,
селения Едомовы и Измаильтяне, Моав и Агаряне,
7 ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;
Гевал и Аммон и Амалик, Филистимляне с жителями Тира.
8 ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. (ಸೆಲಾ)
И Ассур пристал к ним: они стали мышцею для сынов Лотовых.
9 ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು.
Сделай им то же, что Мадиаму, что Сисаре, что Иавину у потока Киссона,
10 ೧೦ ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.
которые истреблены в Аендоре, сделались навозом для земли.
11 ೧೧ ಓರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.
Поступи с ними, с князьями их, как с Оривом и Зивом и со всеми вождями их, как с Зевеем и Салманом,
12 ೧೨ ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ.
которые говорили: “возьмем себе во владение селения Божии”.
13 ೧೩ ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು.
Боже мой! Да будут они, как пыль в вихре, как солома перед ветром.
14 ೧೪ ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು,
Как огонь сжигает лес, и как пламя опаляет горы,
15 ೧೫ ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.
так погони их бурею Твоею и вихрем Твоим приведи их в смятение;
16 ೧೬ ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು.
исполни лица их бесчестием, чтобы они взыскали имя Твое, Господи!
17 ೧೭ ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ.
Да постыдятся и смятутся на веки, да посрамятся и погибнут,
18 ೧೮ ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.
и да познают, что Ты, Которого одного имя Господь, Всевышний над всею землею.

< ಕೀರ್ತನೆಗಳು 83 >