< ಕೀರ್ತನೆಗಳು 89 >

1 ಜೇರಹ ಕುಲದವನಾದ ಏತಾನನ ಪದ್ಯ. ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.
A psalm (maskil) of Ethan the Ezraite I will sing of the Lord's trustworthy love forever; I will tell all generations of your faithfulness.
2 ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.
For I have said, “Your unfailing love lasts forever; your faithfulness endures as long as the heavens.”
3 ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು,
You said, “I have made an agreement with my chosen one, I gave a binding promise to my servant David:
4 ‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ. (ಸೆಲಾ)
I will make sure your lineage lasts forever; I will keep your throne secure for all generations.” (Selah)
5 ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.
All the heavenly beings will sing of the wonderful things you have done, Lord; angels will gather to sing of your faithfulness.
6 ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?
For who in heaven can compare to the Lord? Who is like the Lord even among the angels?
7 ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
The heavenly council are in awe of God; all who surround him are overwhelmed by him.
8 ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.
Lord God Almighty, who is as powerful as you? In all this, Lord, you are completely trustworthy.
9 ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.
You rule the restless seas; you calm their stormy waves.
10 ೧೦ ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.
You crushed Rahab the sea-monster to death; by your power you scattered your enemies.
11 ೧೧ ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.
The heavens belong to you, and the earth too; you made the world and everything in it.
12 ೧೨ ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.
You created north and south; Mount Tabor and Mount Hermon celebrate you.
13 ೧೩ ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.
Your arm is powerful. Your hand is strong. Your right hand is held up high in command.
14 ೧೪ ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.
Your character of goodness and fairness is the basis for the way you rule; dependable love and trustworthiness are always with you.
15 ೧೫ ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.
How happy are those who know how to shout your praises, Lord. They live in the light of your presence.
16 ೧೬ ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.
They celebrate the person you are all day long, so glad that you do what's right.
17 ೧೭ ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು.
They rely on you, their glory and strength; by your grace you lift us up.
18 ೧೮ ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.
Yes, the Lord is the one who shields us, and our king belongs to the Holy One of Israel.
19 ೧೯ ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.
Once you spoke in a vision to your faithful servant and said, “I have given strength to the warrior I have chosen from the people to become king.
20 ೨೦ ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.
I have selected David my servant, and I have anointed him with the oil of my holiness.
21 ೨೧ ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.
I have placed my hand on him to steady him; and I have made him strong by my powerful arm.
22 ೨೨ ವೈರಿಯ ಕುತಂತ್ರವು ಅವನಲ್ಲಿ ಸಾಗದು; ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು.
His enemies will not deceive him; the wicked will not bring him down.
23 ೨೩ ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು; ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು.
I will wipe out his enemies before him; I will strike down those who hate him.
24 ೨೪ ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.
My trustworthiness and unfailing love will be with him, and through me he will be victorious.
25 ೨೫ ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು.
I will extend his rule from the Mediterranean Sea to the Euphrates River.
26 ೨೬ ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.
He will call out to me, ‘You are my Father, my God, and the rock of my salvation.’
27 ೨೭ ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.
I will also make him my first-born son, the highest of the kings of the earth.
28 ೨೮ ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.
I will love him faithfully forever; my agreement with him shall never come to an end.
29 ೨೯ ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.
I will make sure his royal line lasts forever; his dynasty will continue as long as the heavens endure.
30 ೩೦ ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, ನನ್ನ ಆಜ್ಞೆಗಳಲ್ಲಿ ನಡೆಯದೆ,
But if his descendants abandon my laws, if they do not follow my rules,
31 ೩೧ ನನ್ನ ವಿಧಿಗಳನ್ನು ಮೀರಿ, ನನ್ನ ನೇಮಗಳನ್ನು ಪಾಲಿಸದೆ ಹೋದರೆ,
if they break my decrees, and do not keep my commandments,
32 ೩೨ ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.
I will punish their rebellion by beating them with a rod, and their sin by lashing them with a whip.
33 ೩೩ ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ; ನನ್ನ ನಂಬಿಗಸ್ತಿಕೆಯಿಂದ ಜಾರುವುದಿಲ್ಲ.
However, I will not take away my love from him; I will not break my promise to him.
34 ೩೪ ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; ನನ್ನ ಮಾತನ್ನು ಬದಲಿಸುವುದಿಲ್ಲ.
I will not annul the agreement I have with him; I will not alter a single word I've said.
35 ೩೫ ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.
By my holy character I have made a vow to David that I will not lie to him.
36 ೩೬ ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,
His royal line will last forever, and his dynasty will continue before me as long as the sun endures.
37 ೩೭ ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು. ಪರಲೋಕದ ಸಾಕ್ಷಿ ಸತ್ಯವೇ ಸರಿ.” (ಸೆಲಾ)
It will continue forever like the moon, an enduring witness in the heavens.” (Selah)
38 ೩೮ ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ, ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.
But you have rejected and abandoned him! You are angry with your chosen king!
39 ೩೯ ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.
You have broken the agreement you had with him; you have thrown his crown to the ground!
40 ೪೦ ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ.
You have torn down his defensive walls; you have ruined his fortresses.
41 ೪೧ ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.
Everyone who passes by has robbed him; he has become an object of mockery to the nations nearby.
42 ೪೨ ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.
You have made his enemies strong; you have made them celebrate their victory.
43 ೪೩ ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.
You have repelled his sharp sword; you have not helped him in battle.
44 ೪೪ ಅವನ ವೈಭವವನ್ನು ತಡೆದುಬಿಟ್ಟಿದ್ದೀ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.
You took away his glory; you threw his throne to the ground.
45 ೪೫ ಅವನ ಯೌವನದ ದಿನಗಳನ್ನು ಬೇಗ ಮುಗಿಸಿ, ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ. (ಸೆಲಾ)
You have made him grow old before his time; you have totally humiliated him. (Selah)
46 ೪೬ ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?
How long, Lord? Will you hide yourself from us forever, your anger burning like fire?
47 ೪೭ ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.
Remember me—my life is so short! Why did you bother creating futile humanity?
48 ೪೮ ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? (ಸೆಲಾ) (Sheol h7585)
There's no one who doesn't die—no one can save themselves from the power of the grave. (Selah) (Sheol h7585)
49 ೪೯ ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು, ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ?
Where is the trustworthy love you used to have, Lord, that you faithfully promised to David?
50 ೫೦ ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ.
Don't forget, Lord, how your servants are being humiliated! I'm burdened down with the insults of so many nations!
51 ೫೧ ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ, ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೋ.
Your enemies taunt me, Lord, mocking your king wherever he goes.
52 ೫೨ ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.
May the Lord be blessed for ever. Amen and amen.

< ಕೀರ್ತನೆಗಳು 89 >