< ಕೀರ್ತನೆಗಳು 90 >

1 ಪಾಪಾತ್ಮರಿಗೆ ದೇವರ ದಯವೇ ಆಶ್ರಯ ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.
Gospode! ti si nam utoèište od koljena do koljena.
2 ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.
Prije nego se gore rodiše i sazda se zemlja i vasiljena, i od vijeka i do vijeka ti si Bog.
3 “ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.
Ti povraæaš èovjeka u truhlež, i govoriš: vratite se sinovi ljudski!
4 ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ.
Jer je tisuæa godina pred oèima tvojima kao dan juèerašnji, kad mine, i kao straža noæna.
5 ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
Ti ih kao povodnjem odnosiš; oni su kao san, kao trava, koja rano vene,
6 ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.
Ujutru cvjeta i uvene, uveèe se pokosi i sasuši.
7 ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.
Jer nas nestaje od gnjeva tvojega, i od jarosti tvoje u smetnji smo.
8 ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
Stavio si bezakonja naša preda se, i tajne naše na svjetlost lica svojega.
9 ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.
Svi se dani naši prekraæuju od srdnje tvoje, godine naše prolaze kao glas.
10 ೧೦ ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.
Dana godina naših svega ima do sedamdeset godina, a u jaèega do osamdeset godina: i sam je cvijet njihov muka i nevolja; jer teku brzo, i mi odlijeæemo.
11 ೧೧ ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?
Ko zna silu gnjeva tvojega i tvoju jarost, da bi te se kao što treba bojao?
12 ೧೨ ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.
Nauèi nas tako brojiti dane naše, da bismo stekli srce mudro.
13 ೧೩ ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.
Povrati se, Gospode! Dokle æeš? Smiluj se na sluge svoje.
14 ೧೪ ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
Ujutru nas nasiti dobrote svoje, i radovaæemo se i veseliti u sve dane svoje.
15 ೧೫ ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ, ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.
Obraduj nas prema danima, u koje si nas muèio, i prema godinama, u koje smo gledali nevolju.
16 ೧೬ ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ, ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ.
Neka se pokaže na slugama tvojim djelo tvoje, i slava tvoja na sinovima njihovijem.
17 ೧೭ ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.
Neka bude dobra volja Gospoda Boga našega s nama, i djelo ruku naših dovrši nam, i djelo ruku naših dovrši.

< ಕೀರ್ತನೆಗಳು 90 >