< ಕೀರ್ತನೆಗಳು 94 >

1 ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.
אֵל־נְקָמ֥וֹת יְהוָ֑ה אֵ֖ל נְקָמ֣וֹת הוֹפִֽיַע׃
2 ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು.
הִ֭נָּשֵׂא שֹׁפֵ֣ט הָאָ֑רֶץ הָשֵׁ֥ב גְּ֝מ֗וּל עַל־גֵּאִֽים׃
3 ಯೆಹೋವನೇ, ದುಷ್ಟರು ಎಲ್ಲಿಯವರೆಗೆ, ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು?
עַד־מָתַ֖י רְשָׁעִ֥ים ׀ יְהוָ֑ה עַד־מָ֝תַ֗י רְשָׁעִ֥ים יַעֲלֹֽזוּ׃
4 ಕೆಡುಕರೆಲ್ಲರು ಉಬ್ಬಿಕೊಂಡು, ಅಹಂಕಾರವನ್ನು ಕಕ್ಕುತ್ತಾರೆ.
יַבִּ֣יעוּ יְדַבְּר֣וּ עָתָ֑ק יִֽ֝תְאַמְּר֗וּ כָּל־פֹּ֥עֲלֵי אָֽוֶן׃
5 ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;
עַמְּךָ֣ יְהוָ֣ה יְדַכְּא֑וּ וְֽנַחֲלָתְךָ֥ יְעַנּֽוּ׃
6 ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.
אַ֭לְמָנָה וְגֵ֣ר יַהֲרֹ֑גוּ וִֽיתוֹמִ֣ים יְרַצֵּֽחוּ׃
7 ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.
וַ֭יֹּ֣אמְרוּ לֹ֣א יִרְאֶה־יָּ֑הּ וְלֹא־יָ֝בִ֗ין אֱלֹהֵ֥י יַעֲקֹֽב׃
8 ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?
בִּ֭ינוּ בֹּעֲרִ֣ים בָּעָ֑ם וּ֝כְסִילִ֗ים מָתַ֥י תַּשְׂכִּֽילוּ׃
9 ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ?
הֲנֹ֣טַֽע אֹ֭זֶן הֲלֹ֣א יִשְׁמָ֑ע אִֽם־יֹ֥צֵֽר עַ֝֗יִן הֲלֹ֣א יַבִּֽיט׃
10 ೧೦ ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?
הֲיֹסֵ֣ר גּ֭וֹיִם הֲלֹ֣א יוֹכִ֑יחַ הַֽמְלַמֵּ֖ד אָדָ֣ם דָּֽעַת׃
11 ೧೧ ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.
יְֽהוָ֗ה יֹ֭דֵעַ מַחְשְׁב֣וֹת אָדָ֑ם כִּי־הֵ֥מָּה הָֽבֶל׃
12 ೧೨ ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.
אַשְׁרֵ֤י ׀ הַגֶּ֣בֶר אֲשֶׁר־תְּיַסְּרֶ֣נּוּ יָּ֑הּ וּֽמִתּוֹרָתְךָ֥ תְלַמְּדֶֽנּוּ׃
13 ೧೩ ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.
לְהַשְׁקִ֣יט ל֭וֹ מִ֣ימֵי רָ֑ע עַ֤ד יִכָּרֶ֖ה לָרָשָׁ֣ע שָֽׁחַת׃
14 ೧೪ ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.
כִּ֤י ׀ לֹא־יִטֹּ֣שׁ יְהוָ֣ה עַמּ֑וֹ וְ֝נַחֲלָת֗וֹ לֹ֣א יַעֲזֹֽב׃
15 ೧೫ ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.
כִּֽי־עַד־צֶ֭דֶק יָשׁ֣וּב מִשְׁפָּ֑ט וְ֝אַחֲרָ֗יו כָּל־יִשְׁרֵי־ לֵֽב׃
16 ೧೬ ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?
מִֽי־יָק֣וּם לִ֭י עִם־מְרֵעִ֑ים מִֽי־יִתְיַצֵּ֥ב לִ֝י עִם־פֹּ֥עֲלֵי אָֽוֶן׃
17 ೧೭ ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.
לוּלֵ֣י יְ֭הוָה עֶזְרָ֣תָה לִּ֑י כִּמְעַ֓ט ׀ שָֽׁכְנָ֖ה דוּמָ֣ה נַפְשִֽׁי׃
18 ೧೮ ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು.
אִם־אָ֭מַרְתִּי מָ֣טָה רַגְלִ֑י חַסְדְּךָ֥ יְ֝הוָ֗ה יִסְעָדֵֽנִי׃
19 ೧೯ ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.
בְּרֹ֣ב שַׂרְעַפַּ֣י בְּקִרְבִּ֑י תַּ֝נְחוּמֶ֗יךָ יְֽשַׁעַשְׁע֥וּ נַפְשִֽׁי׃
20 ೨೦ ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು?
הַֽ֭יְחָבְרְךָ כִּסֵּ֣א הַוּ֑וֹת יֹצֵ֖ר עָמָ֣ל עֲלֵי־חֹֽק׃
21 ೨೧ ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.
יָ֭גוֹדּוּ עַל־נֶ֣פֶשׁ צַדִּ֑יק וְדָ֖ם נָקִ֣י יַרְשִֽׁיעוּ׃
22 ೨೨ ಆದರೆ ಯೆಹೋವನು ನನ್ನ ದುರ್ಗವೂ, ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ.
וַיְהִ֬י יְהוָ֣ה לִ֣י לְמִשְׂגָּ֑ב וֵ֝אלֹהַ֗י לְצ֣וּר מַחְסִֽי׃
23 ೨೩ ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು.
וַיָּ֤שֶׁב עֲלֵיהֶ֨ם ׀ אֶת־אוֹנָ֗ם וּבְרָעָתָ֥ם יַצְמִיתֵ֑ם יַ֝צְמִיתֵ֗ם יְהוָ֥ה אֱלֹהֵֽינוּ׃

< ಕೀರ್ತನೆಗಳು 94 >