< ಪ್ರಕಟಣೆ 18 >

1 ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.
След това видях друг ангел, който слизаше от небето, имайки голяма власт; и земята се просвети от неговата слава.
2 ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.
Той извика със силен глас, казвайки: Падна, падна великия Вавилон и стана жилище на бесовете, свърталище на всякакъв нечист дух и свърталище на всякаква нечиста и омразна птица;
3 ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.
защото всички народи пиха от виното на нейното разпалено блудствуване, и земните царе блудствуваха с нея, земните търговци се обогатиха от безмерния й разкош.
4 ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.
И чух друг глас от небето, който казваше: Излезте от нея, люде Мои, за да не участвувате в греховете й и да не споделяте язвите й;
5 ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ.
защото греховете й стигнаха дори до небето, и Бог си спомни нейните неправди.
6 ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.
Въздайте й, както и тя е въздала, да! платете й двойно според делата й; с чашата, с която е черпила, почерпете я двойно.
7 ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.
Колкото е прославила себе си и е живяла разкошно, толкоз мъка и печал й дайте; защото казва в сърдцето си: Седя като царица, не съм вдовица, и печал никак няма да видя.
8 ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.
Затова в един ден ще дойдат язвите й, мор, печал и глад, и тя ще изгори на огън; защото могъществен е Господ Бог, Който я съди.
9 “ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.
И земните царе, които са блудствували и живели разкошно с нея ще заплачат и заридаят за нея, когато видят дима от изгарянето й.
10 ೧೦
Отдалеч ще стоят поради страх от мъките й и ще казват: Горко, горко на тебе, велики граде Вавилоне, крепки граде, понеже в един час дойде съдбата ти!
11 ೧೧ “ಇದಲ್ಲದೆ ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ,
И земните търговци плачат и жалеят за нея, защото никой вече не купува стоките им,
12 ೧೨ ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಷ್ಮೆ, ಕಡುಗೆಂಪು ಉಡುಪು ಸಕಲ ವಿಧವಾದ ಮರಮುಟ್ಟು ಮತ್ತು ದಂತದ ಸಾಮಾನುಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ. ಸುಗಂಧ ಸರಕುಗಳಾದ
стоки от злато и сребро, скъпоценни камъни и бисери, от висон и багреница, коприна и червено; и всякакво благоуханно дърво и всякакви изделия от слонова кост и всякакви изделия от скъпоценно дърво и от мед: от желязо и от мрамор;
13 ೧೩ ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.
и канела, аромати, темян, миро и ливан; вино и дървено масло; чисто брашно и пшеница; добитък и овце; коне, колесници и роби; и човешки души.
14 ೧೪ ‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’
Овощията, за които душата ти копнееше, изчезнаха от тебе, и всичко изящно и разкошно загина от тебе, и няма вече да се намерят.
15 ೧೫ ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ದೂರದಲ್ಲಿ ನಿಂತು ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದುಃಖಿಸಿ ಗೋಳಾಡುತ್ತಾ,
Търгуващите са тия неща, които се обогатиха от нея, ще застанат отдалеч поради страх от мъките й, ще плачат и ще жалеят, казвайки:
16 ೧೬ ‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’
Горко, горко, граде велики, облечен във висон, багреница и червено и украсен със злато, със скъпоценни камъни и с бисери;
17 ೧೭ ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು,
защото в един час запустя толкова богатство! И всеки корабоначалник, всеки пътник по море, моряците и всички, които се препиват от морето, застанаха отдалеч,
18 ೧೮ ಅವಳ ದಹನದ ಹೊಗೆಯನ್ನು ನೋಡಿ ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು.
и викаха като гледаха дима от неговото изгаряне, казвайки: Кой град приличаше на великия град?
19 ೧೯ ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು.
И посипаха пръст на главите си и викаха с плач и жалеене, като думаха: Горко, горко на великия град, в който всички, които имаха кораби по морето, се обогатиха от скъпоценностите му; защото в един час запустя!
20 ೨೦ ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.
Веселете се за него, небеса и вие светии, вие апостоли и пророци, защото съда, с който вие бяхте осъдени, Бог отсъди над него.
21 ೨೧ ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.
И един силен ангел взе един камък голям като воденичен, та го хвърли в морето и рече: Така стремително ще бъде тръшнат Вавилон, великият град, и няма вече да се намери.
22 ೨೨ ಬಾಬೆಲೇ ನಿನ್ನಲ್ಲಿ ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.
Глас от ония, които свирят на арфи, и от певци, от свирачи и от тръбачи няма вече да се чува в тебе; и никакъв художник от каквото и да било художество няма вече да се намери в тебе; и шум от воденица няма вече да се чува в тебе;
23 ೨೩ ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.
светлина от светило няма вече да свети в тебе; и глас от младоженец и от невеста няма вече да се чува в тебе; защото твоите търговци станаха големците на земята, понеже чрез твоето чародеяние бяха измамени всичките народи.
24 ೨೪ “ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.
И в него се намериха кърви от пророци и от светии и от всичките заклани на земята.

< ಪ್ರಕಟಣೆ 18 >