< ಪ್ರಕಟಣೆ 20 >

1 ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. (Abyssos g12)
In videl sem angela, idočega dol z nebes, imajočega od brezna ključ, in verigo veliko na roki svoji. (Abyssos g12)
2 ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.
In zgrabi zmaja, staro kačo, katera je hudič in satan, in zveže ga tisoč let,
3 ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು. (Abyssos g12)
In vrže ga v brezno, in zapre ga in zapečati nad njim, da ne slepi več narodov, dokler se ne izpolni tisoč let; in potem se mora rešiti nekaj časa. (Abyssos g12)
4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
In videl sem prestole, in sedli so nanje in sodba se je dala njim, in duše obglavljenih zaradi pričanja Jezusa in zaradi besede Božje, in kateri niso molili zveri, ne podobe njene, in niso sprejeli znamenja na čelo svoje in na roko svojo; in živeli so ter kraljevali s Kristusom tisoč let.
5 ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು.
Drugi pa mrtvi niso oživeli, dokler se ne izpolni tisoč let. To je vstajenje prvo.
6 ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.
Srečen in svet, kdor ima del v prvem vstajenji; do teh druga smrt nima oblasti; nego duhovniki bodo Božji in Kristusovi, in kraljevali bodo z njim tisoč let.
7 ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು.
In ko se bode izpolnilo tisoč let, reši se satan iz ječe svoje,
8 ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.
In izide slepit narode na četverih voglih zemlje, Goga in Magoga, zbirat jih na vojsko, katerih število je kakor pesek morski.
9 ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.
In šli so gor na zemlje širjavo, in obdali so šatorišče svetnikov in mesto ljubljeno; in padel je ogenj od Boga z néba, in požrl jih je;
10 ೧೦ ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. (aiōn g165, Limnē Pyr g3041 g4442)
In hudič, ki jih je slepil, bil je vržen v jezero ognjeno in žvepljeno, kjer je zver in lažiprerok; in mučili se bodo noč in dan na vekov veke. (aiōn g165, Limnē Pyr g3041 g4442)
11 ೧೧ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.
In videl sem bél prestol, velik, in sedečega na njem, kateremu izpred obličja je bežala zemlja in nebo, in ni se jima našlo mesto.
12 ೧೨ ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
In videl sem mrtve, majhne in velike, stoječe pred Bogom, in odprle so se knjige; in odprla se je druga knjiga, katera je knjiga življenja; in sodili so se mrtvi po tem, kar je pisano v knjigah, po delih svojih.
13 ೧೩ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. (Hadēs g86)
In dalo je morje mrtve iz sebe; in smrt in pekel dala sta mrtve iz sebe; in sodili so se vsak po delih svojih. (Hadēs g86)
14 ೧೪ ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. (Hadēs g86, Limnē Pyr g3041 g4442)
In smrt in pekel sta bila vržena v jezero ognjeno; ta je druga smrt. (Hadēs g86, Limnē Pyr g3041 g4442)
15 ೧೫ ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. (Limnē Pyr g3041 g4442)
In če se kdo ni našel zapisan v knjigi življenja, vržen je bil v jezero ognjeno. (Limnē Pyr g3041 g4442)

< ಪ್ರಕಟಣೆ 20 >