< ಪ್ರಕಟಣೆ 22 +

1 ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,
Kisha malaika akanionesha mto wa maji ya uzima, maji yalikuwa ya mng'ao kama wa bilauri. Yalikuwa yakitiririka kutoka katika kiti cha enzi cha Mungu na cha Mwana Kondoo
2 ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.
Kupitia katikati ya mtaa wa mji. Katika kila pembe ya mto palikuwa na mti wa uzima, unaozaa aina kumi na mbili za matunda, na huzaa matunda kila mwezi. Majani ya mti ni kwa ajili ya uponyaji wa mataifa.
3 ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು.
Wala hapatakuwa na laana yoyote tena. Kiti cha enzi cha Mungu na cha Mwana Kondoo kitakuwemo ndani ya mji, na watumishi wake watamtumikia.
4 ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.
Watamuona uso wake, na jina lake litakuwa juu ya vipaji vya nyuso zao.
5 ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು. (aiōn g165)
Hapatakuwa na usiku tena; wala hapatakuwa na hitaji la mwanga wa taa au jua kwa sababu Bwana Mungu ataangaza juu yao. Nao watatawala milele na milele. (aiōn g165)
6 ಆ ಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.
Malaika akaniambia, “Maneno haya ni ya kuaminika na kweli. Bwana Mungu wa roho za manabii alimtuma malaika wake kuwaonesha watumishi wake kitakachotokea hivi karibuni.”
7 “ಇಗೋ ನೋಡು! ನಾನುಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು.
“Tazama! Ninakuja upesi! Amebarikiwa yeye anayeyatii maneno ya unabii wa kitabu hiki.”
8 ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
Mimi, Yohana, ndiye niliyesikia na kuona mambo haya. Nilipoyasikia na kuyaona, nilianguka chini mwenyewe mbele ya miguu ya malaika kumwabudu, malaika aliyenionesha mambo haya.
9 ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.
Akaniambia, “Usifanye hivyo! Mimi ni mtumishi mwenzako, pamoja na ndugu zako manabii, pamoja na wale wanaotii maneno ya kitabu hiki. Mwabudu Mungu!”
10 ೧೦ ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.
Akaniambia, “Usiyatie muhuri maneno ya unabii wa kitabu hiki, maana wakati umekaribia.
11 ೧೧ ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”
Asiye mwenye haki, aendelee kutokuwa mwenye haki. Ambaye ni mchafu kimaadili, na aendelee kuwa mchafu kimaadili. Mwenye haki, na aendelee kuwa mwenye haki. Aliye mtakatifu, na aendelee kuwa mtakatifu.”
12 ೧೨ “ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕಪ್ರತಿಫಲವು ನನ್ನಲ್ಲಿದೆ.
“Tazama! Naja upesi. Ujira wangu uko pamoja nami, kumlipa kila mmoja kulingana na alichokifanya.
13 ೧೩ ನಾನೇಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.
Mimi ni Alfa na Omega, wa Kwanza na wa Mwisho, Mwanzo na Mwisho.
14 ೧೪ “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.
Wamebarikiwa wale waoshao mavazi yao ili kwamba wapate haki ya kula kutoka katika mti wa uzima na kuuingia mji kupitia malangoni.
15 ೧೫ ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂಹೊರಗಿರುವರು” ಎಂದು ಹೇಳಿದನು.
Nje kuna mbwa, wachawi, wazinzi, wauwaji, waabudu sanamu, na kila apendaye na ashuhudiaye ushahidi wa uongo.
16 ೧೬ “ಯೇಸುವೆಂಬ ನಾನುನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನುದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂಅವನ ಸಂತತಿಯೂಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”
Mimi, Yesu, nimemtuma malaika wangu kuwashuhudia kuhusu mambo haya kwa makanisa. Mimi ni mzizi wa uzao wa Daudi, Nyota ya Asubuhi ing'aayo.”
17 ೧೭ ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.
Roho na Bibi harusi asema, “Njoo!” Na yeye asikiaye aseme, “Njoo!” Yeyote aliye na kiu, na aje, na yeyote anayetamani, na apate maji ya uzima bure.
18 ೧೮ ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.
Namshuhudia kila mtu asikiaye maneno ya unabii wa kitabu hiki: Kama yeyote ataongeza katika hayo, Mungu atamuongezea mapigo yaliyoandikwa katika kitabu hiki.
19 ೧೯ ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.
Kama mtu yeyote atayaondoa maneno ya kitabu hiki cha unabii, Mungu ataondoa sehemu yake katika mti wa uzima na katika mji mtakatifu, ambayo habari zake zimeandikwa ndani ya kitabu hiki.
20 ೨೦ ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.
Yeye ashuhudiaye mambo haya asema, “Ndiyo! Naja upesi.” Amina! Njoo, Bwana Yesu!
21 ೨೧ ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!
Neema ya Bwana Yesu iwe na kila mtu. Amina.

< ಪ್ರಕಟಣೆ 22 +