< ಪ್ರಕಟಣೆ 5 >

1 ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
And I saw on the right hand of him that sat upon the throne a book, written within and on the back, sealed with seven seals.
2 ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.
And I saw a strong angel proclaiming with a loud voice, Who [is] worthy to open the book, and to break its seals?
3 ಆದರೆ ಆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ.
And no one was able in the heaven, or upon the earth, or underneath the earth, to open the book, or to regard it.
4 ಸುರುಳಿಯನ್ನು ತೆರೆಯುವುದಕ್ಕಾಗಲಿ ಅದನ್ನು ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವೆಂದು ನಾನು ಬಹಳವಾಗಿ ದುಃಖಿಸುತ್ತಿರುವಾಗ.
And I wept much because no one had been found worthy to open the book nor to regard it.
5 ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.
And one of the elders says to me, Do not weep. Behold, the lion which [is] of the tribe of Juda, the root of David, has overcome [so as] to open the book, and its seven seals.
6 ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.
And I saw in the midst of the throne and of the four living creatures, and in the midst of the elders, a Lamb standing, as slain, having seven horns and seven eyes, which are the seven Spirits of God [which are] sent into all the earth:
7 ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು.
and it came and took [it] out of the right hand of him that sat upon the throne.
8 ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.
And when it took the book, the four living creatures and the twenty-four elders fell before the Lamb, having each a harp and golden bowls full of incenses, which are the prayers of the saints.
9 ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.
And they sing a new song, saying, Thou art worthy to take the book, and to open its seals; because thou hast been slain, and hast redeemed to God, by thy blood, out of every tribe, and tongue, and people, and nation,
10 ೧೦ ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”
and made them to our God kings and priests; and they shall reign over the earth.
11 ೧೧ ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.
And I saw, and I heard [the] voice of many angels around the throne and the living creatures and the elders; and their number was ten thousands of ten thousands and thousands of thousands;
12 ೧೨ ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.
saying with a loud voice, Worthy is the Lamb that has been slain, to receive power, and riches, and wisdom, and strength, and honour, and glory, and blessing.
13 ೧೩ ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು. (aiōn g165)
And every creature which is in the heaven and upon the earth and under the earth, and [those that are] upon the sea, and all things in them, heard I saying, To him that sits upon the throne, and to the Lamb, blessing, and honour, and glory, and might, to the ages of ages. (aiōn g165)
14 ೧೪ ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.
And the four living creatures said, Amen; and the elders fell down and did homage.

< ಪ್ರಕಟಣೆ 5 >