< ರೋಮಾಪುರದವರಿಗೆ 5 >

1 ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.
Będąc tedy usprawiedliwieni z wiary, pokój mamy z Bogiem przez Pana naszego Jezusa Chrystusa;
2 ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
Przez któregośmy też przystęp otrzymali wiarą ku łasce, w której stoimy i chlubimy się nadzieją chwały Bożej.
3 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.
A nie tylko to, ale się też chlubimy z ucisków, wiedząc, iż ucisk cierpliwość sprawuje,
4 ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.
A cierpliwość doświadczenie, a doświadczenie nadzieję,
5 ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
A nadzieja nie pohańbia, przeto iż miłość Boża rozlana jest w sercach naszych przez Ducha Świętego, który nam jest dany.
6 ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
Albowiem Chrystus, gdy jeszcze byliśmy mdłymi, według czasu umarł za niepobożne.
7 ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.
Choć ledwie by kto umarł za sprawiedliwego; wszakże za dobrego snaćby się kto umrzeć ważył.
8 ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
Lecz zaleca Bóg miłość swoję ku nam, że gdy jeszcze byliśmy grzesznymi, Chrystus za nas umarł.
9 ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
Daleko tedy więcej teraz usprawiedliwieni będąc krwią jego, zachowani będziemy przez niego od gniewu.
10 ೧೦ ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
Bo jeźliże będąc nieprzyjaciołmi, pojednaniśmy z Bogiem przez śmierć Syna jego; daleko więcej będąc pojednani, zachowani będziemy przez żywot jego.
11 ೧೧ ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.
A nie tylko to, ale się też chlubimy Bogiem przez Pana naszego Jezusa Chrystusa, przez któregośmy teraz pojednanie otrzymali.
12 ೧೨ ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.
Przetoż jako przez jednego człowieka grzech wszedł na świat, a przez grzech śmierć; tak też na wszystkich ludzi śmierć przyszła, ponieważ wszyscy zgrzeszyli.
13 ೧೩ ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.
Albowiem aż do zakonu grzech był na świecie; ale grzech nie bywa przyczytany, gdy zakonu nie masz.
14 ೧೪ ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ.
Lecz śmierć królowała od Adama aż do Mojżesza i nad tymi, którzy nie zgrzeszyli, na podobieństwo przestępstwa Adamowego, który jest wzorem onego, który miał przyjść.
15 ೧೫ ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.
Ale nie jako upadek, tak i dar z łaski; albowiem jeźli przez upadek jednego wiele ich pomarło, daleko więcej łaska Boża i dar z łaski onego jednego człowieka Jezusa Chrystusa na wiele ich opływała.
16 ೧೬ ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು.
A dar nie jest taki, jako to, co przyszło przez jednego, który zgrzeszył. Albowiem wina jest z jednego upadku ku potępieniu, ale dar z łaski z wielu upadków ku usprawiedliwieniu.
17 ೧೭ ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.
Albowiem jeźli dla jednego upadku śmierć królowała przez jednego, daleko więcej, którzy obfitość onej łaski i dar sprawiedliwości przyjmują, w żywocie królować będą przez tegoż jednego Jezusa Chrystusa.
18 ೧೮ ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.
Przetoż tedy jako przez jednego upadek na wszystkich ludzi przyszła wina ku potępieniu; tak też przez jednego usprawiedliwienie na wszystkich ludzi przyszedł dar ku usprawiedliwieniu żywota.
19 ೧೯ ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.
Bo jako przez nieposłuszeństwo jednego człowieka wiele się ich stało grzesznymi; tak przez posłuszeństwo jednego człowieka wiele się ich stało sprawiedliwymi.
20 ೨೦ ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
A zakon przytem nastąpił, aby obfitował grzech; lecz gdzie się grzech rozmnożył, tam łaska tem więcej obfitowała.
21 ೨೧ ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು. (aiōnios g166)
Aby jako grzech królował ku śmierci, tak też aby łaska królowała przez sprawiedliwość ku żywotowi wiecznemu przez Jezusa Chrystusa, Pana naszego. (aiōnios g166)

< ರೋಮಾಪುರದವರಿಗೆ 5 >