< ರೋಮಾಪುರದವರಿಗೆ 6 >

1 ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.
Kaj torej porečemo? bomo li ostali v grehu, da se milost pomnoži?
2 ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?
Bog ne daj! Kteri smo umrli grehu, kako bomo še živeli v njem?
3 ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
Ne veste li, kterikoli smo se pokrstili v Kristusa Jezusa, da smo se v njegovo smrt pokrstili?
4 ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
Torej smo se vkup ž njim pokopali po krstu v smrt, da bi, kakor je vstal Kristus iz mrtvih po očetovej slavi, tako tudi mi hodili v novem življenji.
5 ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
Kajti če smo ž njim enaki po podobnosti njegove smrti, tudi bomo po podobnosti vstajenja,
6 ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.
Vedoč to, da je bil stari naš človek ž njim na križ razpet, da se grešno telo zatare, da bi več ne služili grehu.
7 ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
Kajti kteri je umrl, opravičen je od greha.
8 ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.
Če smo pa umrli s Kristusom, verujemo, da bomo tudi živeli ž njim,
9 ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.
Vedoč, da Kristus, vstavši iz mrtvih, več ne umira; smrt nad njim več ne gospoduje.
10 ೧೦ ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
Ker da je umrl, grehu je umrl na enkrat, a da živi, živi Bogu.
11 ೧೧ ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
Tako tudi vi za se mislite, da ste mrtvi grehu, a živi Bogu v Kristusu Jezusu Gospodu našem.
12 ೧೨ ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.
Ne kraljuje naj torej greh v vašem smrtnem telesu, da ga poslušate v poželenjih njegovih.
13 ೧೩ ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
Tudi ne dajte svojih udov grehu za orožje krivice, nego dajte sebe Bogu kakor kteri ste živi iz mrtvih, in ude svoje Bogu za orožje pravice.
14 ೧೪ ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
Kajti greh ne bo nad vami gospodoval, ker niste pod postavo, nego pod milostjo.
15 ೧೫ ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
Kaj torej? bomo li grešili, ker nismo pod postavo, nego pod milostjo? Bog ne daj!
16 ೧೬ ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ
Ne veste li, komur dajete sebe za sluge v poslušnost, da ste tistega sluge, kogar poslušate; ali greha za smrt, ali pa poslušnosti za pravico?
17 ೧೭ ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,
A hvala Bogu, da ste bili sužnji grehu, pa ste iz srca posluhnili podobo nauka, v ktero ste se izročili.
18 ೧೮ ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.
Osvobodivši se pa greha postali ste služabniki pravice.
19 ೧೯ ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
Po človeški govorim za voljo slabosti vašega mesa. Kajti kakor ste dali svoje ude za sužnje nečistosti in nepostavnosti na nepostavnost, tako dajte sedaj svoje ude za sluge pravici na posvečenje.
20 ೨೦ ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ.
Kajti kedar ste bili sužnji greha, svobodni ste bili pravice.
21 ೨೧ ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?
Kakošen sad ste torej imeli ta krat od tega, za kar se sedaj sramujete? Kajti konec onega je smrt.
22 ೨೨ ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. (aiōnios g166)
Sedaj pa, osvobodivši se greha, a postavši Božji služabniki, imate sad svoj posvečenje, a konec večno življenje. (aiōnios g166)
23 ೨೩ ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ. (aiōnios g166)
Kajti plača za greh je smrt, a dar Božji večno življenje v Kristusu Jezusu Gospodu našem. (aiōnios g166)

< ರೋಮಾಪುರದವರಿಗೆ 6 >