< ಪರಮಗೀತೆ 2 >

1 ನಾನು ಶಾರೋನಿನ ನೆಲಸಂಪಿಗೆ, ತಗ್ಗಿನ ತಾವರೆ.
אֲנִי חֲבַצֶּלֶת הַשָּׁרוֹן שֽׁוֹשַׁנַּת הָעֲמָקִֽים׃
2 ಸ್ತ್ರೀಯರಲ್ಲಿ ಶ್ರೇಷ್ಠಳು ನೀನು, ನನ್ನ ಪ್ರಿಯಳು ಮುಳ್ಳುಗಳ ಮಧ್ಯದಲ್ಲಿರುವ ತಾವರೆಯಂತಿರುವಳು.
כְּשֽׁוֹשַׁנָּה בֵּין הַחוֹחִים כֵּן רַעְיָתִי בֵּין הַבָּנֽוֹת׃
3 ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.
כְּתַפּוּחַ בַּעֲצֵי הַיַּעַר כֵּן דּוֹדִי בֵּין הַבָּנִים בְּצִלּוֹ חִמַּדְתִּי וְיָשַׁבְתִּי וּפִרְיוֹ מָתוֹק לְחִכִּֽי׃
4 ಬರಮಾಡಿಕೊಂಡನು ನನ್ನನ್ನು ಔತಣಶಾಲೆಗೆ, ನನ್ನ ಮೇಲೆತ್ತಿದನು ಪ್ರೀತಿ ಎಂಬ ಪತಾಕೆ.
הֱבִיאַנִי אֶל־בֵּית הַיָּיִן וְדִגְלוֹ עָלַי אַהֲבָֽה׃
5 ಅಸ್ವಸ್ಥಳಾಗಿರುವೆನು ಅನುರಾಗದಿಂದ, ದೀಪದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಚೈತನ್ಯಗೊಳಿಸಿರಿ.
סַמְּכוּנִי בָּֽאֲשִׁישׁוֹת רַפְּדוּנִי בַּתַּפּוּחִים כִּי־חוֹלַת אַהֲבָה אָֽנִי׃
6 ಆತನ ಎಡಗೈ ನನಗೆ ತಲೆದಿಂಬಾಗಿದ್ದರೆ, ಆತನ ಬಲಗೈ ನನ್ನನ್ನು ಆಲಂಗಿಸಿದರೆ ನನಗೆ ಪರಮಾನಂದ!
שְׂמֹאלוֹ תַּחַת לְרֹאשִׁי וִימִינוֹ תְּחַבְּקֵֽנִי׃
7 ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
הִשְׁבַּעְתִּי אֶתְכֶם בְּנוֹת יְרוּשָׁלַ͏ִם בִּצְבָאוֹת אוֹ בְּאַיְלוֹת הַשָּׂדֶה אִם־תָּעִירוּ ׀ וְֽאִם־תְּעוֹרְרוּ אֶת־הָאַהֲבָה עַד שֶׁתֶּחְפָּֽץ׃
8 ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ;
קוֹל דּוֹדִי הִנֵּה־זֶה בָּא מְדַלֵּג עַל־הֶהָרִים מְקַפֵּץ עַל־הַגְּבָעֽוֹת׃
9 ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!
דּוֹמֶה דוֹדִי לִצְבִי אוֹ לְעֹפֶר הָֽאַיָּלִים הִנֵּה־זֶה עוֹמֵד אַחַר כׇּתְלֵנוּ מַשְׁגִּיחַ מִן־הַֽחַלֹּנוֹת מֵצִיץ מִן־הַחֲרַכִּֽים׃
10 ೧೦ ನನ್ನ ನಲ್ಲನು ನನಗೆ ಹೀಗೆಂದನು, “ನನ್ನ ಪ್ರಿಯತಮೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!
עָנָה דוֹדִי וְאָמַר לִי קוּמִי לָךְ רַעְיָתִי יָפָתִי וּלְכִי־לָֽךְ׃
11 ೧೧ ಇಗೋ, ಚಳಿಗಾಲ ಕಳೆಯಿತು, ಮಳೆಗಾಲ ಮುಗಿಯಿತು;
כִּֽי־הִנֵּה הַסְּתָו עָבָר הַגֶּשֶׁם חָלַף הָלַךְ לֽוֹ׃
12 ೧೨ ಭೂಮಿಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು, ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ;
הַנִּצָּנִים נִרְאוּ בָאָרֶץ עֵת הַזָּמִיר הִגִּיעַ וְקוֹל הַתּוֹר נִשְׁמַע בְּאַרְצֵֽנוּ׃
13 ೧೩ ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!
הַתְּאֵנָה חָֽנְטָה פַגֶּיהָ וְהַגְּפָנִים ׀ סְמָדַר נָתְנוּ רֵיחַ קוּמִי (לכי) [לָךְ] רַעְיָתִי יָפָתִי וּלְכִי־לָֽךְ׃
14 ೧೪ ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”
יוֹנָתִי בְּחַגְוֵי הַסֶּלַע בְּסֵתֶר הַמַּדְרֵגָה הַרְאִינִי אֶת־מַרְאַיִךְ הַשְׁמִיעִנִי אֶת־קוֹלֵךְ כִּי־קוֹלֵךְ עָרֵב וּמַרְאֵיךְ נָאוֶֽה׃
15 ೧೫ ತೋಟಗಳನ್ನು ಹಾಳುಮಾಡುವ ನರಿಗಳನ್ನು, ನರಿಮರಿಗಳನ್ನು ಹಿಡಿಯಿರಿ; ಹೂಬಿಟ್ಟಿರುವ ನಮ್ಮ ದ್ರಾಕ್ಷಿ ತೋಟಗಳು ಹಾಳು.
אֶֽחֱזוּ־לָנוּ שֻֽׁעָלִים שֻׁעָלִים קְטַנִּים מְחַבְּלִים כְּרָמִים וּכְרָמֵינוּ סְמָדַֽר׃
16 ೧೬ ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
דּוֹדִי לִי וַאֲנִי לוֹ הָרֹעֶה בַּשּׁוֹשַׁנִּֽים׃
17 ೧೭ ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ, ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇರು.
עַד שֶׁיָּפוּחַ הַיּוֹם וְנָסוּ הַצְּלָלִים סֹב דְּמֵה־לְךָ דוֹדִי לִצְבִי אוֹ לְעֹפֶר הָאַיָּלִים עַל־הָרֵי בָֽתֶר׃

< ಪರಮಗೀತೆ 2 >