< ಪರಮಗೀತೆ 3 >

1 ರಾತ್ರಿಯಲ್ಲಿ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.
עַל־מִשְׁכָּבִי֙ בַּלֵּיל֔וֹת בִּקַּ֕שְׁתִּי אֵ֥ת שֶׁאָהֲבָ֖ה נַפְשִׁ֑י בִּקַּשְׁתִּ֖יו וְלֹ֥א מְצָאתִֽיו׃
2 ನಾನು, “ಎದ್ದು ಊರಿನಲ್ಲಿ ತಿರುಗುವೆನು, ಬೀದಿಗಳಲ್ಲಿಯೂ, ಚೌಕಗಳಲ್ಲಿಯೂ ನನ್ನ ಪ್ರಾಣಪ್ರಿಯನನ್ನು ಹುಡುಕುವೆನು” ಅಂದುಕೊಂಡೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.
אָק֨וּמָה נָּ֜א וַאֲסוֹבְבָ֣ה בָעִ֗יר בַּשְּׁוָקִים֙ וּבָ֣רְחֹב֔וֹת אֲבַקְשָׁ֕ה אֵ֥ת שֶׁאָהֲבָ֖ה נַפְשִׁ֑י בִּקַּשְׁתִּ֖יו וְלֹ֥א מְצָאתִֽיו׃
3 ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು.
מְצָא֙וּנִי֙ הַשֹּׁ֣מְרִ֔ים הַסֹּבְבִ֖ים בָּעִ֑יר אֵ֛ת שֶׁאָהֲבָ֥ה נַפְשִׁ֖י רְאִיתֶֽם׃
4 ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು.
כִּמְעַט֙ שֶׁעָבַ֣רְתִּי מֵהֶ֔ם עַ֣ד שֶֽׁמָּצָ֔אתִי אֵ֥ת שֶׁאָהֲבָ֖ה נַפְשִׁ֑י אֲחַזְתִּיו֙ וְלֹ֣א אַרְפֶּ֔נּוּ עַד־שֶׁ֤הֲבֵיאתִיו֙ אֶל־בֵּ֣ית אִמִּ֔י וְאֶל־חֶ֖דֶר הוֹרָתִֽי׃
5 ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
הִשְׁבַּ֨עְתִּי אֶתְכֶ֜ם בְּנ֤וֹת יְרוּשָׁלִַ֙ם֙ בִּצְבָא֔וֹת א֖וֹ בְּאַיְל֣וֹת הַשָּׂדֶ֑ה אִם־תָּעִ֧ירוּ ׀ וְֽאִם־תְּעֽוֹרְר֛וּ אֶת־הָאַהֲבָ֖ה עַ֥ד שֶׁתֶּחְפָּֽץ׃ ס
6 ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?
מִ֣י זֹ֗את עֹלָה֙ מִן־הַמִּדְבָּ֔ר כְּתִֽימֲר֖וֹת עָשָׁ֑ן מְקֻטֶּ֤רֶת מוֹר֙ וּלְבוֹנָ֔ה מִכֹּ֖ל אַבְקַ֥ת רוֹכֵֽל׃
7 ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ.
הִנֵּ֗ה מִטָּתוֹ֙ שֶׁלִּשְׁלֹמֹ֔ה שִׁשִּׁ֥ים גִּבֹּרִ֖ים סָבִ֣יב לָ֑הּ מִגִּבֹּרֵ֖י יִשְׂרָאֵֽל׃
8 ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ.
כֻּלָּם֙ אֲחֻ֣זֵי חֶ֔רֶב מְלֻמְּדֵ֖י מִלְחָמָ֑ה אִ֤ישׁ חַרְבּוֹ֙ עַל־יְרֵכ֔וֹ מִפַּ֖חַד בַּלֵּילּֽוֹת׃ ס
9 ಆ ಪಲ್ಲಕ್ಕಿಯನ್ನು ರಾಜನಾದ ಸೊಲೊಮೋನನು ಲೆಬನೋನಿನ ಮರದಿಂದ ಮಾಡಿಸಿದ್ದಾನೆ.
אַפִּרְי֗וֹן עָ֤שָׂה לוֹ֙ הַמֶּ֣לֶךְ שְׁלֹמֹ֔ה מֵעֲצֵ֖י הַלְּבָנֽוֹן׃
10 ೧೦ ಅದರ ಕಂಬಗಳನ್ನು ಬೆಳ್ಳಿಯಿಂದಲೂ, ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು.
עַמּוּדָיו֙ עָ֣שָׂה כֶ֔סֶף רְפִידָת֣וֹ זָהָ֔ב מֶרְכָּב֖וֹ אַרְגָּמָ֑ן תּוֹכוֹ֙ רָצ֣וּף אַהֲבָ֔ה מִבְּנ֖וֹת יְרוּשָׁלִָֽם׃
11 ೧೧ ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ ರಾಜನಾದ ಸೊಲೊಮೋನನನ್ನು ನೋಡ ಬನ್ನಿ. ಅವನು ವಿವಾಹ ದಿನದ ಉತ್ಸವದಂದು ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು ಆತ ಧರಿಸಿರುವುದನ್ನು ನೋಡಬನ್ನಿ!
צְאֶ֧ינָה ׀ וּֽרְאֶ֛ינָה בְּנ֥וֹת צִיּ֖וֹן בַּמֶּ֣לֶךְ שְׁלֹמֹ֑ה בָּעֲטָרָ֗ה שֶׁעִטְּרָה־לּ֤וֹ אִמּוֹ֙ בְּי֣וֹם חֲתֻנָּת֔וֹ וּבְי֖וֹם שִׂמְחַ֥ת לִבּֽוֹ׃ ס

< ಪರಮಗೀತೆ 3 >