< ಜೆಕರ್ಯನು 13 >

1 ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.
ביום ההוא יהיה מקור נפתח לבית דויד ולישבי ירושלם--לחטאת ולנדה
2 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.
והיה ביום ההוא נאם יהוה צבאות אכרית את שמות העצבים מן הארץ ולא יזכרו עוד וגם את הנביאים ואת רוח הטמאה אעביר מן הארץ
3 ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.
והיה כי ינבא איש עוד ואמרו אליו אביו ואמו ילדיו לא תחיה כי שקר דברת בשם יהוה ודקרהו אביהו ואמו ילדיו בהנבאו
4 “ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;
והיה ביום ההוא יבשו הנביאים איש מחזינו--בהנבאתו ולא ילבשו אדרת שער למען כחש
5 ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ.’ ಎಂದು ಹೇಳಲು,
ואמר לא נביא אנכי איש עבד אדמה אנכי כי אדם הקנני מנעורי
6 ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’” ಎಂದು ಉತ್ತರ ಕೊಡುವನು.
ואמר אליו מה המכות האלה בין ידיך ואמר אשר הכיתי בית מאהבי
7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
חרב עורי על רעי ועל גבר עמיתי--נאם יהוה צבאות הך את הרעה ותפוצין הצאן והשבתי ידי על הצערים
8 “ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.
והיה בכל הארץ נאם יהוה פי שנים בה יכרתו יגועו והשלשית יותר בה
9 “ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”
והבאתי את השלשית באש וצרפתים כצרף את הכסף ובחנתים כבחן את הזהב הוא יקרא בשמי ואני אענה אתו--אמרתי עמי הוא והוא יאמר יהוה אלהי

< ಜೆಕರ್ಯನು 13 >