< ಜೆಕರ್ಯನು 14 >

1 ಆಹಾ, ಚೀಯೋನೇ, ಯೆಹೋವನ ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು.
視よヱホバの日來る汝の貨財奪はれて汝の中にて分たるべし
2 ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.
我萬國の民を集めてヱルサレムを攻撃しめん邑は取られ家は掠められ婦女は犯され邑の人は半は擄へられてゆかん然どその餘の民は邑より絶れじ
3 ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.
その時ヱホバ出きたりて其等の國人を攻撃たまはん在昔その軍陣の日に戰ひたまひしごとくなるべし
4 ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.
其日にはヱルサレムの前に當りて東にあるところの橄欖山の上に彼の足立たん而して橄欖山その眞中より西東に裂て甚だ大なる谷を成しその山の半は北に半は南に移るべし
5 ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.
汝らは我山の谷に逃いらん其山の谷はアザルにまで及ぶべし汝らはユダの王ウジヤの世に地震を避て逃しごとくに逃ん我神ヱホバ來りたまはん諸の聖者なんぢとともなるべし
6 ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,
その日には光明なかるべく輝く者消うすべし
7 ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.
茲に只一の日あるべしヱホバこれを知たまふ是は晝にもあらず夜にもあらず夕暮の頃に明くなるべし
8 ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.
その日に活る水ヱルサレムより出でその半は東の海にその半は西の海に流れん夏も冬も然あるべし
9 ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.
ヱホバ全地の王となりたまはん其日には只ヱホバのみ只その御名のみにならん
10 ೧೦ ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.
全地はアラバのごとくなりてゲバよりヱルサレムの南のリンモンまでの間のごとくなるべし而してヱルサレムは高くなりてその故の處に立ちベニヤミンの門より第一の門の處に及び隅の門にいたりハナニエルの戍樓より王の酒榨倉までに渉るべし
11 ೧೧ ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.
その中には人住ん重て呪詛あらじヱルサレムは安然に立べし
12 ೧೨ ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು.
ヱルサレムを攻撃し諸の民にヱホバ災禍を降してこれを撃なやましたまふこと是のごとくなるべし即ち彼らその足にて立をる中に肉腐れ目その孔の中にて腐れ舌その口の中にて腐れん
13 ೧೩ ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.
その日にはヱホバかれらをして大に狼狽しめたまはん彼らは各々人の手を執へん此手と彼手撃あふべし
14 ೧೪ ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು.
ユダもまたヱルサレムに於て戰ふべしその四周の一切の國人の財寳金銀衣服など甚だ多く聚められん
15 ೧೫ ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವುದು.
また馬騾駱駝驢馬およびその諸營の一切の家畜の蒙る災禍もこの災禍のごとくなるべし
16 ೧೬ ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.
ヱルサレムに攻きたりし諸の國人の遺れる者はみな歳々に上りきてその王なる萬軍のヱホバを拜み結茅の節を守るにいたるべし
17 ೧೭ ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ.
地上の諸族の中その王なる萬軍のヱホバを拜みにヱルサレムに上らざる者の上には凡て雨ふらざるべし
18 ೧೮ ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು.
例ばエジプトの族もし上り來らざる時はその上に雨ふらじヱホバその結茅の節を守りに上らざる一切の國人を撃なやます災禍を之に降したまふべし
19 ೧೯ ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.
エジプトの罪凡て結茅の節を守りに上り來らざる國人の罪是のごとくなるべし
20 ೨೦ ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.
その日には馬の鈴にまでヱホバに聖としるさん又ヱホバの家の鍋は壇の前の鉢と等しかるべし
21 ೨೧ ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ.
ヱルサレムおよびユダの鍋は都て萬軍のヱホバの聖物となるべし凡そ犠牲を獻ぐる者は來りてこれを取り其中にて祭肉を煮ん其日には萬軍のヱホバの室に最早カナン人あらざるべし

< ಜೆಕರ್ಯನು 14 >