< ಯೋಹಾನನು ಬರೆದ ಮೊದಲನೆಯ ಪತ್ರಿಕೆ 1 >

1 ಆದಿಯಿಂದ ಇರುವಂಥದ್ದೂ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದ ಆ ಜೀವವಾಕ್ಯವನ್ನೇ ಸಾರುತ್ತಿದ್ದೇವೆ. 2 ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ. (aiōnios g166) 3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು. 4 ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ. 5 ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ. 6 ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ. 7 ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. 8 ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. 9 ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು. 10 ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ. ಅವರ ವಾಕ್ಯವು ನಮ್ಮಲ್ಲಿ ಬಾಳುವುದಿಲ್ಲ.

< ಯೋಹಾನನು ಬರೆದ ಮೊದಲನೆಯ ಪತ್ರಿಕೆ 1 >