< ಸಮುವೇಲನು - ಪ್ರಥಮ ಭಾಗ 8 >

1 ಸಮುಯೇಲನು ವೃದ್ಧನಾದಾಗ ತನ್ನ ಪುತ್ರರನ್ನು ಇಸ್ರಾಯೇಲಿಗೆ ನ್ಯಾಯಾಧಿಪತಿಗಳನ್ನಾಗಿ ಮಾಡಿದನು.
A kad Samuilo ostarje, postavi sinove svoje za sudije Izrailju.
2 ಅವನ ಚೊಚ್ಚಲ ಮಗನ ಹೆಸರು ಯೋಯೇಲ್, ಅವನ ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.
A ime sinu njegovu prvencu bješe Joilo, a drugomu Avija, i suðahu u Virsaveji.
3 ಆದರೆ ಅವರು ಸಮುಯೇಲನ ಮಾರ್ಗದಲ್ಲಿ ನಡೆಯದೆ, ಅಪ್ರಾಮಾಣಿಕತೆಯಿಂದ ಹಣ ಸಂಪಾದಿಸಿ, ಲಂಚವನ್ನು ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುತ್ತಿದ್ದರು.
Ali sinovi njegovi ne hoðahu putovima njegovijem, nego udariše za dobitkom, i primahu poklone i izvrtahu pravdu.
4 ಆಗ ಇಸ್ರಾಯೇಲ್ ಹಿರಿಯರೆಲ್ಲರೂ ಕೂಡಿಕೊಂಡು, ರಾಮದಲ್ಲಿರುವ ಸಮುಯೇಲನ ಬಳಿಗೆ ಬಂದು ಅವನಿಗೆ,
Tada se skupiše sve starješine Izrailjeve i doðoše k Samuilu u Ramu.
5 “ನೀನು ವೃದ್ಧನಾದೆ, ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವುದಿಲ್ಲ. ಈಗ ಎಲ್ಲ ರಾಷ್ಟ್ರಗಳ ಹಾಗೆ ನಮಗೆ ನ್ಯಾಯತೀರಿಸುವುದಕ್ಕೆ ಒಬ್ಬ ಅರಸನನ್ನು ನೇಮಿಸು,” ಎಂದರು.
I rekoše mu: eto, ti si ostario, a sinovi tvoji ne hode tvojim putovima: zato postavi nam cara da nam sudi, kao što je u svijeh naroda.
6 “ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು,” ಎಂದು ಅವರು ಹೇಳಿದ್ದು ಸಮುಯೇಲನಿಗೆ ಕೆಟ್ಟದ್ದಾಗಿ ಕಾಣಿಸಿತು. ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು.
Ali Samuilu ne bi po volji što rekoše: daj nam cara da nam sudi. I Samuilo se pomoli Gospodu.
7 ಆಗ ಯೆಹೋವ ದೇವರು ಸಮುಯೇಲನಿಗೆ, “ಜನರು ನಿನಗೆ ಹೇಳಿದ್ದೆಲ್ಲದರಲ್ಲಿ ಅವರ ಮಾತು ಕೇಳು. ಏಕೆಂದರೆ ಅವರು ನಿನ್ನನ್ನು ತಿರಸ್ಕಾರ ಮಾಡಿಲ್ಲ. ನಾನು ಅವರನ್ನು ಆಳದ ಹಾಗೆ ನನ್ನನ್ನೇ ತಿರಸ್ಕಾರಮಾಡಿದ್ದಾರೆ.
A Gospod reèe Samuilu: poslušaj glas narodni u svemu što ti govore; jer ne odbaciše tebe, nego mene odbaciše da ne carujem nad njima.
8 ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದ ದಿನವು ಮೊದಲುಗೊಂಡು ಈ ದಿನದವರೆಗೂ ಅವರು ನನ್ನನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿ, ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡುತ್ತಾರೆ.
Kako èiniše od onoga dana kad ih izvedoh iz Misira do danas, i ostaviše me i služiše drugim bogovima, po svijem tijem djelima èine i tebi.
9 ಈಗ ಅವರ ಮಾತನ್ನು ಕೇಳು. ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು, ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬುದನ್ನು ತಿಳಿಸು,” ಎಂದನು.
Zato sada poslušaj glas njihov; ali im dobro zasvjedoèi i kaži naèin kojim æe car carovati nad njima.
10 ಆಗ ಸಮುಯೇಲನು ಒಬ್ಬ ಅರಸನನ್ನು ಕೇಳಿದ ಜನರಿಗೆ ಯೆಹೋವ ದೇವರ ವಾಕ್ಯಗಳನ್ನೆಲ್ಲಾ ಹೇಳಿದನು.
I kaza Samuilo sve rijeèi Gospodnje narodu koji iskaše od njega cara;
11 ಅವನು, “ನಿಮ್ಮನ್ನು ಆಳುವ ಅರಸನ ಅಧಿಕಾರವು ಏನೆಂದರೆ, ಅವನು ನಿಮ್ಮ ಪುತ್ರರನ್ನು ತನ್ನ ರಥಗಳಿಗೋಸ್ಕರ ಸಾರಥಿಗಳನ್ನಾಗಿಯೂ ಕುದುರೆ ಸವಾರರನ್ನಾಗಿಯೂ ತೆಗೆದುಕೊಳ್ಳುವನು. ಕೆಲವರು ಅವನ ರಥಗಳ ಮುಂದೆ ಓಡುವರು.
I reèe: ovo æe biti naèin kojim æe car carovati nad vama: sinove vaše uzimaæe i metati ih na kola svoja i meðu konjike svoje, i oni æe trèati pred kolima njegovijem;
12 ಅವನು ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿಗಳಾಗಿಯೂ, ತನ್ನ ಭೂಮಿಯನ್ನು ಊಳುವವರಾಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ಹಾಗು ತನ್ನ ರಥಸಾಮಗ್ರಿಗಳನ್ನು ಮಾಡುವವರಾಗಿಯೂ ನೇಮಿಸುವನು.
I postaviæe ih da su mu tisuænici i pedesetnici, i da mu oru njive i žnju ljetinu, i da mu grade ratne sprave i što treba za kola njegova.
13 ಇದಲ್ಲದೆ ಅವನು ನಿಮ್ಮ ಪುತ್ರಿಯರನ್ನು ತೈಲಗಾರ್ತಿಗಳಾಗಿಯೂ, ಅಡುಗೆ ಮಾಡುವವರಾಗಿಯೂ ರೊಟ್ಟಿ ಸುಡುವವರಾಗಿಯೂ ಇಟ್ಟುಕೊಳ್ಳುವನು.
Uzimaæe i kæeri vaše da mu grade mirisne masti i da mu budu kuharice i hljebarice.
14 ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ, ನಿಮ್ಮ ದ್ರಾಕ್ಷಿತೋಟಗಳನ್ನೂ, ನಿಮ್ಮ ಓಲಿವ್ ಮರದ ತೋಪುಗಳನ್ನೂ ತೆಗೆದುಕೊಂಡು ತನ್ನ ಸೇವಕರಿಗೆ ಕೊಡುವನು.
I njive vaše i vinograde vaše i maslinike vaše najbolje uzimaæe i razdavati slugama svojim.
15 ನಿಮ್ಮ ಧಾನ್ಯಗಳಲ್ಲಿಯೂ, ನಿಮ್ಮ ದ್ರಾಕ್ಷಿ ಫಲಗಳಲ್ಲಿಯೂ ಹತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ತನ್ನ ಅಧಿಕಾರಿಗಳಿಗೂ, ತನ್ನ ಸೇವಕರಿಗೂ ಕೊಡುವನು.
Uzimaæe desetak od usjeva vaših i od vinograda vaših, i davaæe dvoranima svojim i slugama svojim.
16 ನಿಮ್ಮ ದಾಸರನ್ನೂ, ನಿಮ್ಮ ದಾಸಿಯರನ್ನೂ, ನಿಮ್ಮ ಉತ್ತಮ ಪ್ರಾಯಸ್ಥರನ್ನೂ, ನಿಮ್ಮ ಕತ್ತೆಗಳನ್ನೂ ತೆಗೆದುಕೊಂಡು ತನ್ನ ಕೆಲಸಕ್ಕೆ ಇಡುವನು.
I sluge vaše i sluškinje vaše i mladiæe vaše najljepše i magarce vaše uzimaæe, i obrtati na svoje poslove.
17 ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆಯ್ದುಕೊಳ್ಳುವನು. ನೀವು ಅವನಿಗೆ ದಾಸರಾಗುವಿರಿ.
Stada æe vaša desetkovati i vi æete mu biti robovi.
18 ನೀವು ನಿಮಗೆ ಆಯ್ದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ, ಆದರೆ ಆ ದಿವಸದಲ್ಲಿ ಯೆಹೋವ ದೇವರು ನಿಮಗೆ ಕಿವಿಗೊಡುವುದಿಲ್ಲ,” ಎಂದನು.
Pa æete onda vikati radi cara svojega, kojega izabraste sebi; ali vas Gospod neæe onda uslišiti.
19 ಆದರೂ ಜನರು ಸಮುಯೇಲನ ಮಾತನ್ನು ಕೇಳಲೊಲ್ಲದೆ, ಅವರು, “ಹಾಗಲ್ಲ, ನಮ್ಮ ಮೇಲೆ ಅರಸನು ಇರಬೇಕು.
Ali narod ne htje poslušati rijeèi Samuilovijeh, i rekoše: ne, nego car neka bude nad nama,
20 ನಾವು ಸಕಲ ರಾಷ್ಟ್ರಗಳ ಹಾಗೆ ಇರಬೇಕು. ನಮ್ಮ ಅರಸನು ನಮಗೆ ನ್ಯಾಯತೀರಿಸುವನು. ಅವನು ನಮ್ಮ ಮುಂದೆ ಹೊರಟು, ನಮ್ಮ ಪರವಾಗಿ ಯುದ್ಧಗಳನ್ನು ನಡೆಸುವನು,” ಎಂದರು.
Da budemo i mi kao svi narodi; i neka nam sudi car naš i ide pred nama i vodi naše ratove.
21 ಸಮುಯೇಲನು ಜನರ ಮಾತುಗಳನ್ನೆಲ್ಲಾ ಕೇಳಿ ಅವುಗಳನ್ನು ಯೆಹೋವ ದೇವರಿಗೆ ಹೇಳಿದನು.
A Samuilo èuvši sve rijeèi narodne, kaza ih Gospodu.
22 ಯೆಹೋವ ದೇವರು ಸಮುಯೇಲನಿಗೆ, “ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು,” ಎಂದರು. ಆಗ ಸಮುಯೇಲನು ಇಸ್ರಾಯೇಲ್ ಜನರಿಗೆ, “ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ,” ಎಂದನು.
A Gospod reèe Samuilu: poslušaj glas njihov, i postavi im cara. I Samuilo reèe Izrailjcima: idite svaki u svoj grad.

< ಸಮುವೇಲನು - ಪ್ರಥಮ ಭಾಗ 8 >