< ಅರಸುಗಳು - ದ್ವಿತೀಯ ಭಾಗ 12 >

1 ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೋವಾಷನು ಅರಸನಾಗಿ, ಯೆರೂಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಚಿಬ್ಯಳು. ಅವಳು ಬೇರ್ಷೆಬ ಊರಿನವಳು.
येहूच्या सातव्या वर्षी योवाश राज्य करू लागला. त्याने यरूशलेमेवर चाळीस वर्षे राज्य केले. योवाशाच्या आईचे नाव सिब्या, ती बैर-शेबा इथली होती.
2 ಯಾಜಕನಾದ ಯೆಹೋಯಾದಾವನು ಯೋವಾಷನಿಗೆ ಬೋಧಿಸಿದ ಎಲ್ಲಾ ವರ್ಷಗಳಲ್ಲಿ ಯೋವಾಷನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
योवाशाचे वर्तन परमेश्वराच्या दृष्टीने उचित असेच होते. त्याने आयुष्यभर परमेश्वराचे ऐकले. याजक यहोयाद याने शिकवले तसे तो वागत होता.
3 ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.
पण उंचवट्यावरील पुजास्थळांना त्याने धक्का लावला नाही. लोक यज्ञ करायला, धूप जाळायला तिथे जातच राहिले.
4 ಯೋವಾಷನು ಯಾಜಕರಿಗೆ, “ಯೆಹೋವ ದೇವರ ಆಲಯಕ್ಕೆ ಪವಿತ್ರ ಅರ್ಪಣೆಗಳಾಗಿ ತರಲಾದ ಜನಗಣತಿಯಲ್ಲಿ ಸಂಗ್ರಹಿಸಿದ ಹಣ, ವೈಯಕ್ತಿಕ ಪ್ರತಿಜ್ಞೆಗಳಿಂದ ಪಡೆದ ಹಣ ಮತ್ತು ದೇವಾಲಯಕ್ಕೆ ಸ್ವಯಂಪ್ರೇರಣೆಯಿಂದ ತಂದ ಹಣವನ್ನು ಸಂಗ್ರಹಿಸಿರಿ ಎಂದನು.
योवाश याजकांना म्हणाला, “परमेश्वराच्या मंदिराची पवित्र वस्तूंचा जो काही येईल तो सर्व पैसा, कोणी शिरगणती झाली त्याचा पैसा, आणि परमेश्वराच्या घरात आणायला कोणाच्या मनात येईल तो सगळा पैसा.
5 ಯಾಜಕರಲ್ಲಿ ಪ್ರತಿಯೊಬ್ಬನು ಖಜಾಂಚಿಯವರಿಂದ ಹಣವನ್ನು ತೆಗೆದುಕೊಂಡು ಆಲಯದಲ್ಲಿ ಕಂಡುಕೊಳ್ಳುವ ಒಡಕುಗಳನ್ನೆಲ್ಲಾ ದುರಸ್ತಿ ಮಾಡಿಸಲು ಉಪಯೋಗಿಸಿರಿ,” ಎಂದನು.
याजकाने आपापल्या करदात्यांच्या कडून मिळालेले पैसे घ्यावे आणि परमेश्वराच्या मंदिरात काही मोडतोड झाली असेत तर या पैशातून तिची दुरुस्ती करावी.”
6 ಆದರೆ ಯಾಜಕರು ಅರಸನಾದ ಯೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡದೆ ಇದ್ದರು.
पण योवाश राजाच्या तेविसाव्या वर्षीही याजकांनी मंदिराची दुरुस्ती केली नाही.
7 ಆದ್ದರಿಂದ ಅರಸನಾದ ಯೋವಾಷನು ಯಾಜಕನಾದ ಯೆಹೋಯಾದಾವನನ್ನು, ಇತರ ಯಾಜಕರನ್ನು ಕರೆದು ಅವರಿಗೆ, “ನೀವು ದೇವಾಲಯದ ಒಡಕುಗಳನ್ನು ಏಕೆ ದುರಸ್ತಿ ಮಾಡಿಸುತ್ತಿಲ್ಲ? ಇನ್ನು ಮೇಲೆ ನೀವು ನಿಮಗೆ ಪರಿಚಯವಿರುವ ಖಜಾಂಚಿಯವರಿಂದ ಹಣವನ್ನು ತೆಗೆದುಕೊಳ್ಳದೆ ದೇವಾಲಯದ ಒಡಕುಗಳನ್ನು ದುರಸ್ತಿ ಮಾಡಿಸಲು ಅದನ್ನು ಒಪ್ಪಿಸಿಕೊಡಿರಿ,” ಎಂದನು.
तेव्हा मात्र राजा योवाशाने यहोयाद आणि आणखी काही याजक यांना बोलावणे पाठवले. त्यांना तो म्हणाला, “अजूनही तुमच्या हातून मंदिराची दुरुस्ती का झाली नाही? आता आपापल्या लोकांकडून पैसे घेणे आणि ते पैसे वापरणे बंद करा. त्या पैशाचा विनियोग मंदिराच्या दुरुस्तीसाठीच झाला पाहिजे.”
8 ಆಗ ಯಾಜಕರು, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ, ದೇವಾಲಯದ ದುರಸ್ತಿಗಾಗಿ ಕೈ ಹಾಕುವುದಿಲ್ಲ,” ಎಂಬುದಾಗಿ ಮಾತುಕೊಟ್ಟರು.
याजकांनी लोकाकडून पैसे घेण्याचे थांबवण्याबद्दल आपली सहमती दर्शवली खरी पण मंदिराची दुरुस्ती करायची नाही असेही ठरविले.
9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಅದರ ಮುಚ್ಚಳದಲ್ಲಿ ಒಂದು ರಂಧ್ರವನ್ನು ಮಾಡಿದನು. ಅವನು ಅದನ್ನು ಬಲಿಪೀಠದ ಬಳಿಯಲ್ಲಿ ಯೆಹೋವ ದೇವರ ಆಲಯ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಿಲು ಕಾಯುವ ಯಾಜಕರು ಯೆಹೋವ ದೇವರ ಆಲಯಕ್ಕೆ ತರಲಾದ ಹಣವನ್ನೆಲ್ಲಾ ಅದರಲ್ಲಿ ಹಾಕಿಸುತ್ತಿದ್ದರು.
तेव्हा यहोयाद या याजकाने एक पेटी घेतली आणि तिच्या झाकणाला एक भोक ठेवले. ही पेटी त्याने वेदीच्या दक्षिण बाजूला ठेवली. लोक परमेश्वराच्या मंदिरात शिरल्याबरोबर ती पेटी दाराशीच होती. काही याजक उंबरठ्यापाशीच असत आणि लोकांनी परमेश्वरास वाहिलेले पैसे ते उचलून या पेटीत टाकत.
10 ಪೆಟ್ಟಿಗೆಯಲ್ಲಿ ಬಹಳ ಹಣ ಉಂಟೆಂದು ಅವರು ಕಂಡಾಗಲೆಲ್ಲಾ ಅರಸನ ಲೇಖಕನೂ, ಮಹಾಯಾಜಕನೂ ಬಂದು, ಯೆಹೋವ ದೇವರ ಆಲಯದಲ್ಲಿ ತಂದಿದ್ದ ಹಣವನ್ನು ಎಣಿಸಿ, ಚೀಲಗಳಲ್ಲಿ ಹಾಕಿದರು.
१०मग लोकही परमेश्वराच्या मंदिरात आल्यावर पेटीतच पैसे टाकत. राजाचा चिटणीस आणि मुख्य याजक अधून मधून येत आणि पेटीत बरेच पैसे साठलेले दिसले की ते पैसे काढून घेत. थैल्यांमध्ये भरुन ते मोजत.
11 ಅವರು ಎಣಿಸಿದ ಹಣವನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಅದರೊಂದಿಗೆ, ಅವರು ಯೆಹೋವ ದೇವರ ದೇವಸ್ಥಾನದಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ,
११मग दुरुस्तीचे काम करणाऱ्या मजुरांना ते पैसे देत. त्यामध्ये सुतार होते तसेच परमेश्वराच्या मंदिराचे काम करणारे इतर गवंडीही होते.
12 ಉಪ್ಪಾರ, ಕಲ್ಲುಕುಟಿಗರಿಗೆ ಕೊಟ್ಟರು. ಇದಲ್ಲದೆ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಮರ, ಕೆತ್ತಿದ ಕಲ್ಲುಗಳನ್ನು ತೆಗೆದುಕೊಳ್ಳುವುದಕ್ಕೂ, ಆಲಯ ದುರಸ್ತಿ ಮಾಡಲು ಬೇಕಾದ ಸಮಸ್ತ ಖರ್ಚಿಗೂ ಕೊಟ್ಟರು.
१२दगड फोडणारे, दगडाचे घडीव चिरे बनवणारे यांना देण्यासाठी तसेच लाकूड विकत घेणे दगड घडविणे आणि परमेश्वराच्या मंदिरासाठी दुरुस्तीचे इतर सामान विकत घेण्यासाठी हे पैसे वापरले जात.
13 ಯೆಹೋವ ದೇವರ ಆಲಯದೊಳಗೆ ತಂದ ಹಣದಿಂದ ಬೆಳ್ಳಿ ಬಟ್ಟಲು, ಕತ್ತರಿ, ಪಾತ್ರೆ, ತುತೂರಿ, ಬೆಳ್ಳಿಬಂಗಾರದ ಸಾಮಾನುಗಳು, ಇವೆಲ್ಲವುಗಳನ್ನು ಮಾಡಿಸದೆ,
१३लोक परमेश्वराच्या मंदिरासाठी पैसे देत. पण ते चांदीची उपकरणी, कात्र्या, वाडगे, कर्णे, सोन्या-चांदीची तबके त्या पैशातून करण्यात आले नव्हते,
14 ಅವರು ಅದನ್ನು ಕೆಲಸದವರಿಗೆ ಕೊಟ್ಟು, ಯೆಹೋವ ದೇವರ ಆಲಯದ ದುರಸ್ತಿ ಮಾಡಿಸಿದರು.
१४तर कारागिरांनाच ते पैसे दिले जात. त्या पैशाने ते परमेश्वराच्या मंदिराची दुरुस्ती करत.
15 ಇದಲ್ಲದೆ ಅವರು ಕೆಲಸಮಾಡುವವರಿಗೆ ಹಣ ಕೊಡುವುದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ, ಅವರಿಂದ ಹಣದ ಲೆಕ್ಕವನ್ನು ತೆಗೆದುಕೊಳ್ಳಲಿಲ್ಲ, ಏಕೆಂದರೆ ಅವರು ನಂಬಿಗಸ್ತರಾಗಿದ್ದರು.
१५कोणीही त्या पैशाची मोजदाद केली नाही की त्या पैशाचा हिशोब कारगिरांना विचारला नाही इतके ते कारागीर विश्वासू होते.
16 ಆದರೆ ಪ್ರಾಯಶ್ಚಿತ್ತ ಬಲಿಯ ಹಣವನ್ನು, ಪಾಪ ಪರಿಹಾರದ ಬಲಿಯ ಹಣವನ್ನು ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬರಲಿಲ್ಲ, ಅದು ಯಾಜಕರದಾಗಿತ್ತು.
१६परंतु दोषार्पणाचा पैसा व पापार्पणाचा पैसा परमेश्वराच्या घरात त्यांनी आणला नाही, कारण तो याजकांचा होता.
17 ಈ ಸಮಯದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ, ಅದನ್ನು ವಶಪಡಿಸಿಕೊಂಡನು. ನಂತರ ಹಜಾಯೇಲನು ಯೆರೂಸಲೇಮಿನ ಮೇಲೆ ದಾಳಿಮಾಡಲು ಹೊರಟನು.
१७हजाएल अरामाचा राजा होता. तो गथवर स्वारी करून गेला. गथचा त्याने पाडाव केला आणि तो यरूशलेमेवर चढाई करायचा विचार करु लागला.
18 ಆಗ ಯೆಹೂದದ ಅರಸನಾದ ಯೋವಾಷನು ತನ್ನ ಪೂರ್ವಜರಾದ ಯೆಹೋಷಾಫಾಟ, ಯೆಹೋರಾಮ್, ಅಹಜ್ಯ ಎಂಬ ಯೆಹೂದದ ಅರಸರು ಅರ್ಪಿಸಿದ ಸಮಸ್ತ ಪ್ರತಿಷ್ಠಿತವಾದವುಗಳನ್ನೂ ತಾನೇ ಸ್ವತಃ ಅರ್ಪಿಸಿದ ಪ್ರತಿಷ್ಠಿತವಾದವುಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸದಲ್ಲಿಯೂ, ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತೆಗೆದುಕೊಂಡು ಅರಾಮಿನ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
१८योवाशाच्या आधी त्याचे पूर्वज यहोशाफाट, यहोराम आणि अहज्या हे यहूदाचे राजे होते. त्यांनी परमेश्वरास बऱ्याच पवित्र गोष्टी अर्पण केल्या होत्या. त्या मंदिरातच होत्या. योवाशानेही बरेच काही परमेश्वरास दिले होते. योवाशाने ती सर्व चीजवस्तू, घरातील तसेच मंदिरातील सोने बाहेर काढले. या मौल्यवान गोष्टी त्याने अरामाचा राजा हजाएल याला पाठवल्या. यरूशलेमेला त्यांची भेट झाली. हजाएलने त्या शहराविरुध्द लढाई केली नाही.
19 ಯೋವಾಷನ ಇತರ ಕಾರ್ಯಗಳು, ಅವನು ಮಾಡಿದ್ದೆಲ್ಲವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
१९“यहूदाच्या राजांचा इतिहास” या ग्रंथात योवाशाच्या थोर कृत्यांची नोंद आहे.
20 ಯೋವಾಷನ ಸೇವಕರು ಎದ್ದು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಸಿಲ್ಲಾ ಊರಿಗೆ ಇಳಿದು ಹೋಗುವ ಮಾರ್ಗವಾದ ಬೇತ್ ಮಿಲ್ಲೋ ಎಂಬ ಸ್ಥಳದಲ್ಲಿ ಯೋವಾಷನನ್ನು ಕೊಂದುಹಾಕಿದರು.
२०योवाशाच्या कारभाऱ्यांनी योवाशाविरुध्द कट केला. शिल्ला येथे जाणाऱ्या रस्तावरील मिल्लोच्या घरात त्यांनी योवाशाचा वध केला.
21 ಅವನ ಸೇವಕರಾದ ಶಿಮೆಯಾತನ ಮಗ ಯೋಜಾಬಾದ್ ಮತ್ತು ಶೋಮೇರನ ಮಗ ಯೆಹೋಜಾಬಾದ್ ಎಂಬವರು ಅರಸನನ್ನು ಕೊಂದರು. ಯೋವಾಷನ ಜನರು ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
२१शिमाथचा मुलगा योजाखार आणि शोमरचा मुलगा यहोजाबाद हे योवाशाचे कारभारी होते. त्यांनी हे कृत्य केले. दावीद नगरात लोकांनी योवाशाला त्याच्या पूर्वजांसमवेत पुरले. योवाशाचा मुलगा अमस्या त्यानंतर राज्य करु लागला.

< ಅರಸುಗಳು - ದ್ವಿತೀಯ ಭಾಗ 12 >