< ವಿಮೋಚನಕಾಂಡ 25 >

1 ಯೆಹೋವ ದೇವರು ಮೋಶೆಗೆ,
परमेश्वर मोशेला म्हणाला,
2 “ನನಗೆ ಕಾಣಿಕೆಗಳನ್ನು ತೆಗೆದುಕೊಂಡು ಬರುವಂತೆ ಇಸ್ರಾಯೇಲರ ಸಂಗಡ ಮಾತನಾಡು. ಯಾರ ಹೃದಯದಲ್ಲಿ ಕಾಣಿಕೆ ಕೊಡಬೇಕೆಂಬ ಪ್ರೇರಣೆ ಹುಟ್ಟುತ್ತದೋ, ಅಂಥವರ ಕಾಣಿಕೆಯನ್ನು ನೀನು ತೆಗೆದುಕೊಳ್ಳಬೇಕು.
“इस्राएल लोकांस माझ्यासाठी अर्पणे आणायला सांग. ज्या कोणाची माझ्यासाठी मनापासून अर्पण करण्याची इच्छा असेल त्या प्रत्येकापासून ही अर्पणे तू माझ्यासाठी स्वीकारावी.
3 “ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: “ಚಿನ್ನ, ಬೆಳ್ಳಿ, ಕಂಚು,
त्यांच्याकडून तू माझ्याकरिता घ्यावयाच्या वस्तूंच्या अर्पणाची यादी अशी: सोने, चांदी, पितळ;
4 ನೀಲಿ, ಧೂಮ್ರ, ರಕ್ತವರ್ಣದಾರಗಳು, ನಾರುಬಟ್ಟೆಗಳು, ಮೇಕೆಯ ಕೂದಲು,
निळ्या, जांभळ्या व किरमिजी रंगाचे सूत आणि तलम सणाचे कापड; बकऱ्याचे केस;
5 ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ.
लाल रंगवलेली मेंढ्यांची कातडी; तहशाची कातडी, बाभळीचे लाकूड;
6 ದೀಪಕ್ಕಾಗಿ ಓಲಿವ್ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳು,
दिव्यासाठी तेल, अभिषेकाच्या तेलासाठी आणि सुगंधी धुपासाठी मसाले;
7 ಏಫೋದ್ ಕವಚಕ್ಕಾಗಿ ಗೋಮೇಧಿಕಗಳು ಮತ್ತು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳು ಇವೆ.
एफोद व ऊरपट ह्यात खोचण्यासाठी गोमेदमणी व इतर रत्ने.”
8 “ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.
मी त्यांच्यामध्ये निवास करावा म्हणून त्यांनी माझ्यासाठी एक पवित्रस्थान तयार करावे.
9 ಗುಡಾರದ ಮಾದರಿಯನ್ನೂ, ಅದರ ಎಲ್ಲಾ ಸಲಕರಣೆಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
निवासमंडप कसा असावा त्याचा नमुना व त्यातील वस्तू कशा असाव्यात त्यांचा नमुना मी तुला दाखवीन. त्या सगळ्याप्रमाणे तुम्ही तो तयार करावा.
10 “ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರವಾಗಿರುವ ಮಂಜೂಷವನ್ನು ಮಾಡಬೇಕು.
१०“बाभळीच्या लाकडाची एक पेटी तयार करावी; त्याची लांबी अडीच हात, रुंदी दीड हात व उंची दीड हात असावी.
11 ಅದನ್ನು ಶುದ್ಧ ಬಂಗಾರದಿಂದ ಒಳಗೂ ಹೊರಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ತೋರಣವನ್ನು ಮಾಡಿಸಬೇಕು.
११तो आतून बाहेरून शुध्द सोन्याने मढवावा आणि त्याच्यावर सभोवती शुद्ध सोन्याचा काठ करावा.
12 ಅದಕ್ಕೆ ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಎಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.
१२त्याच्या चारही पायांना लावण्यासाठी सोन्याच्या चार गोल कड्या ओतून एकाबाजूला दोन व दुसऱ्या बाजूला दोन अशा लावाव्या.
13 ಆಮೇಲೆ ಜಾಲಿ ಮರದ ಕೋಲುಗಳನ್ನು ಮಾಡಿಸಿ, ಅವುಗಳಿಗೆ ಬಂಗಾರದಿಂದ ಹೊದಿಸಬೇಕು.
१३बाभळीच्या लाकडाचे दांडे करावेत व तेही सोन्याने मढवावेत
14 ಮಂಜೂಷವನ್ನು ಹೊರುವುದಕ್ಕಾಗಿ ಕೋಲುಗಳನ್ನು ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.
१४कोशाच्या कोपऱ्यांवरील गोल कड्यांमध्ये दांडे घालून मग तो वाहून न्यावा.
15 ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯಬಾರದು.
१५हे दांडे कोशाच्या कड्यातच कायम तसेच राहू द्यावेत, ते काढून घेऊ नयेत.”
16 ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನದ ಹಲಗೆಯನ್ನು ಇಡಬೇಕು.
१६देव म्हणाला, मी तुला साक्षपट देईन तोही त्या कोशात ठेवावा.
17 “ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.
१७मग शुद्ध सोन्याचे एक दयासन बनवावे; त्याची लांबी अडीच हात, रूंदी दीड हात असावी;
18 ಕರುಣಾಸನದ ಎರಡು ತುದಿಗಳಲ್ಲಿ ಎರಡು ಬಂಗಾರದಿಂದ ಕೆರೂಬಿಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.
१८मग सोन्याचे घडीव काम करून दोन करुब करून ते दयासनाच्या दोन्ही टोकांना ठेवावेत.
19 ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಮಾಡಿಸಬೇಕು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯನ್ನು ಮಾಡಿಸಬೇಕು.
१९एक करुब एका बाजूला व दुसरा करुब दुसऱ्या बाजूला असे दयासनाशी एकत्र जोडून अखंड सोन्याचे घडवावेत.
20 ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿರಬೇಕು.
२०त्या करुबांचे पंख आकाशाकडे वर पसरलेले असावेत व त्यांच्या पंखांनी दयासन झाकलेले असावे; त्याची तोंडे समोरासमोर असावीत व त्यांची दृष्टी दयासनाकडे लागलेली असावी.
21 ಕರುಣಾಸನವನ್ನು ಮಂಜೂಷದ ಮೇಲಿಡಬೇಕು ಮತ್ತು ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನಗಳನ್ನು ಇಡಬೇಕು.
२१दयासन कोशावर ठेवावे. मी तुला जो साक्षपट देईन तो तू त्या कोशात ठेवावा;
22 ನಾನು ಅಲ್ಲಿ ನಿನಗೆ ದರ್ಶನವನ್ನು ಕೊಟ್ಟು, ಕರುಣಾಸನದ ಮೇಲೆ ಒಡಂಬಡಿಕೆಯ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲರ ವಿಷಯದಲ್ಲಿ ನಾನು ನಿನಗೆ ಆಜ್ಞಾಪಿಸುವವುಗಳನ್ನೆಲ್ಲಾ ನಿನಗೆ ತಿಳಿಸುವೆನು.
२२तेथे मी तुला भेटत जाईन. दयासनावरून त्या साक्षपटाच्या कोशावरील ठेवलेल्या दोन्ही करुबामधून मी तुझ्याशी बोलेन आणि तेथूनच मी इस्राएल लोकांसाठी माझ्या सर्व आज्ञा देईन.
23 “ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಬೇಕು.
२३बाभळीच्या लाकडाचे एक मेज बनवावे; त्याची लांबी दोन हात, रूंदी एक हात व उंची दीड हात असावी.
24 ಶುದ್ಧ ಬಂಗಾರದಿಂದ ಮೇಜನ್ನು ಹೊದಿಸಿ, ಅದರ ಸುತ್ತಲೂ ಬಂಗಾರದ ತೋರಣವನ್ನು ಮಾಡಬೇಕು.
२४ते शुद्ध सोन्याने मढवावे, व त्याच्या भोवती सोन्याचा काठ करावा.
25 ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ, ಅಂಚಿನ ಸುತ್ತಲೂ ಬಂಗಾರದ ತೋರಣವನ್ನು ಮಾಡಬೇಕು.
२५मग चार बोटे रुंदीची एक चौकट बनवावी व सोन्याचा काठ तिच्यावर ठेवावा.
26 ಇದಲ್ಲದೆ ಆ ಮೇಜಿಗೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಅವುಗಳನ್ನು ಅದರ ನಾಲ್ಕು ಕಾಲುಗಳಲ್ಲಿರುವ ನಾಲ್ಕು ಮೂಲೆಗಳಿಗೆ ಜೋಡಿಸಬೇಕು.
२६मग सोन्याच्या चार गोल कड्या बनवून त्या मेजाच्या चार पायांच्या कोपऱ्यांना लावाव्यात.
27 ಅಂಚಿಗೆ ಸಮೀಪವಾಗಿ ಮೇಜನ್ನು ಹೊತ್ತುಕೊಂಡು ಹೋಗಲು ಇರುವ ಕೋಲುಗಳಿಗೆ ಬಳೆಗಳು ಇರಬೇಕು.
२७या कड्या मेजाच्या वरच्या भागा भोवती चौकटीच्या जवळ ठेवाव्यात. मेज वाहून नेण्यासाठी या कड्यांमध्ये दांडे घालावे.
28 ಮೇಜನ್ನು ಹೊರುವುದಕ್ಕಾಗಿ ಕೋಲುಗಳನ್ನು, ತೋರಣವನ್ನು ಜಾಲಿ ಮರದಿಂದ ಮಾಡಿ, ಬಂಗಾರದಿಂದ ಹೊದಿಸಬೇಕು.
२८मेज वाहून नेण्यासाठी बाभळीच्या लाकडाचे दांडे बनवावेत व ते सोन्याने मढवावेत.
29 ಇದಲ್ಲದೆ ನೀನು ಪಾತ್ರೆಗಳನ್ನು, ಧೂಪಾರತಿಗಳನ್ನು, ಮುಚ್ಚಳಗಳನ್ನು ಪಾನಾರ್ಪಣೆಗೆ ಹೂಜೆಗಳನ್ನೂ ಬೇಕಾದ ಬಟ್ಟಲುಗಳನ್ನೂ, ಶುದ್ಧ ಬಂಗಾರದಿಂದ ಮಾಡಬೇಕು.
२९मेजावरची तबके, धूपपात्रे, सुरया व पेयार्पणे ओतण्याकरता वाट्या बनव. ही शुद्ध सोन्याची असावीत.
30 ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.
३०माझ्यापुढे मेजावर समक्षतेची भाकर नेहमी ठेवावी.
31 “ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಬೇಕು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇರಬೇಕು.
३१शुद्ध सोन्याचा एक दीपवृक्ष तयार कर, हा दीपवृक्ष घडीव कामाचा असावा. त्याची बैठक व त्याचा दांडा, त्याच्या वाट्या, त्याच्या कळ्या व त्याची फुले ही सर्व एकाच अखंड तुकड्याची असावी.
32 ದೀಪಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿರಬೇಕು. ಅಂದರೆ ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.
३२त्या दीपवृक्षाला एका बाजूला तीन व दुसऱ्या बाजूला तीन अशा सहा शाखा असाव्यात.
33 ಒಂದು ಕೊಂಬೆಯಲ್ಲಿ ಬಾದಾಮಿ ಪುಷ್ಟದಂತಿರುವ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿರಬೇಕು ಮತ್ತು ಮತ್ತೊಂದು ಕೊಂಬೆಯಲ್ಲಿ ಬಾದಾಮಿಯ ಪುಷ್ಟವಿದ್ದ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿರಬೇಕು. ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿಯೂ ಇರಬೇಕು.
३३प्रत्येक शाखेला बदामाच्या फुलांसारख्या तीन तीन वाट्या या कळ्याफुलांसह असाव्यात.
34 ದೀಪಸ್ತಂಭದಲ್ಲಿಯೇ ಬಾದಾಮಿ ಹೂವುಗಳಂತೆಯೂ ಮೊಗ್ಗುಗಳಂತೆಯೂ ಅದಕ್ಕೊಂದು ಪುಷ್ಪದ ಆಕಾರದಲ್ಲಿ ನಾಲ್ಕು ಹಣತೆಗಳು ಇರಬೇಕು.
३४या दीपवृक्षाच्या दांड्याला बदामाच्या फुलांसारख्या कळ्या पाकळ्यासहीत असलेल्या फुलाप्रमाणे असाव्यात.
35 ದೀಪಸ್ತಂಭದಿಂದ ಹೊರಬರುವ ಒಂದು ಮೊಗ್ಗು ಮೊದಲ ಜೋಡಿ ಕೊಂಬೆಗಳ ಅಡಿಯಲ್ಲಿರಬೇಕು. ಎರಡನೇ ಮೊಗ್ಗು ಎರಡನೇ ಜೋಡಿಯ ಅಡಿಯಲ್ಲಿ ಮತ್ತು ಮೂರನೆಯ ಮೊಗ್ಗು ಮೂರನೆಯ ಜೋಡಿಯ ಅಡಿಯಲ್ಲಿ ಹೀಗೆ ಆರು ಕೊಂಬೆಗಳು ಇರಬೇಕು.
३५या दीपवृक्षावर निघणाऱ्या सहा शाखांपैकी दोन दोन शाखा, त्याच्याखाली असलेले एकएक बोंड ही एकाच अखंड तुकड्याची असावी.
36 ಅದರ ಮೊಗ್ಗುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ದೀಪಸ್ತಂಭವನ್ನೆಲ್ಲಾ ಶುದ್ಧ ಬಂಗಾರದ ಒಂದೇ ಅಚ್ಚಿನಲ್ಲಿ ಬರೆದ ಕಲಾಕೃತಿಯಾಗಿರಬೇಕು.
३६त्याची बोंडे व त्याच्या शाखा ही सर्व एकाच अखंड तुकड्याची असावी. तो सबंध दीपवृक्ष शुद्ध सोन्याचा एकच घडीव तुकडा असावा.
37 “ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶಕೊಡುವಂತೆ ಅವುಗಳನ್ನು ಹೊತ್ತಿಸಬೇಕು.
३७मग या दीपवृक्षावर सात दिवे बसवावेत म्हणजे त्या दिव्यातून दीपवृक्षाच्या समोरील भागावर प्रकाश पडेल.
38 ಇದಲ್ಲದೆ ಅದರ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.
३८दिवे मालवण्याचे चिमटे व त्यांच्या ताटल्या ही सर्व शुद्ध सोन्याची असावीत.
39 ದೀಪಸ್ತಂಭವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಒಂದು ತಲಾಂತು ಶುದ್ಧ ಬಂಗಾರದಿಂದ ಮಾಡಬೇಕು.
३९हा दीपवृक्ष त्याच्या सर्व उपकरणासहीत एक किक्कार शुद्ध सोन्याचा करावा;
40 ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
४०आणि मी तुला पर्वतावर दाखवलेल्या नमुन्याप्रमाणेच या सर्व वस्तू बनविण्याकडे तू लक्ष दे.

< ವಿಮೋಚನಕಾಂಡ 25 >