< ವಿಮೋಚನಕಾಂಡ 5 >

1 ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ, “ಇಸ್ರಾಯೇಲಿನ ಯೆಹೋವ ದೇವರು, ‘ಮರುಭೂಮಿಯಲ್ಲಿ ನನಗೆ ನನ್ನ ಜನರು ಹಬ್ಬವನ್ನಾಚರಿಸುವುದಕ್ಕೆ ಅವರನ್ನು ಹೋಗಗೊಡಿಸು,’ ಎಂದು ಹೇಳುತ್ತಾರೆ,” ಎಂದರು.
וְאַחַ֗ר בָּ֚אוּ מֹשֶׁ֣ה וְאַהֲרֹ֔ן וַיֹּאמְר֖וּ אֶל־פַּרְעֹ֑ה כֹּֽה־אָמַ֤ר יְהוָה֙ אֱלֹהֵ֣י יִשְׂרָאֵ֔ל שַׁלַּח֙ אֶת־עַמִּ֔י וְיָחֹ֥גּוּ לִ֖י בַּמִּדְבָּֽר׃
2 ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.
וַיֹּ֣אמֶר פַּרְעֹ֔ה מִ֤י יְהוָה֙ אֲשֶׁ֣ר אֶשְׁמַ֣ע בְּקֹלֹ֔ו לְשַׁלַּ֖ח אֶת־יִשְׂרָאֵ֑ל לֹ֤א יָדַ֙עְתִּי֙ אֶת־יְהוָ֔ה וְגַ֥ם אֶת־יִשְׂרָאֵ֖ל לֹ֥א אֲשַׁלֵּֽחַ׃
3 ಆಗ ಅವರು ಫರೋಹನಿಗೆ, “ಹಿಬ್ರಿಯರ ದೇವರು ನಮ್ಮನ್ನು ಸಂದರ್ಶಿಸಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿವಸ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞ ಅರ್ಪಿಸುವುದಕ್ಕೆ ನಾವು ಹೋಗಬೇಕು. ಇಲ್ಲವಾದರೆ ಅವರು ಉಪದ್ರವದಿಂದಲೋ ಖಡ್ಗದಿಂದಲೋ ನಮ್ಮನ್ನು ದಂಡಿಸುವರು,” ಎಂದರು.
וַיֹּ֣אמְר֔וּ אֱלֹהֵ֥י הָעִבְרִ֖ים נִקְרָ֣א עָלֵ֑ינוּ נֵ֣לֲכָה נָּ֡א דֶּרֶךְ֩ שְׁלֹ֨שֶׁת יָמִ֜ים בַּמִּדְבָּ֗ר וְנִזְבְּחָה֙ לַֽיהוָ֣ה אֱלֹהֵ֔ינוּ פֶּ֨ן־יִפְגָּעֵ֔נוּ בַּדֶּ֖בֶר אֹ֥ו בֶחָֽרֶב׃
4 ಈಜಿಪ್ಟಿನ ಅರಸನು ಅವರಿಗೆ, “ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸಗಳನ್ನು ಮಾಡದಂತೆ ಏಕೆ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಗಳಿಗೆ ಹೋಗಿ,” ಎಂದನು.
וַיֹּ֤אמֶר אֲלֵהֶם֙ מֶ֣לֶךְ מִצְרַ֔יִם לָ֚מָּה מֹשֶׁ֣ה וְאַהֲרֹ֔ן תַּפְרִ֥יעוּ אֶת־הָעָ֖ם מִמַּֽעֲשָׂ֑יו לְכ֖וּ לְסִבְלֹתֵיכֶֽם׃
5 ಇದಲ್ಲದೆ ಫರೋಹನು, “ಈಗ ಹಿಬ್ರಿಯರು ಈ ದೇಶದಲ್ಲಿ ಹೆಚ್ಚಿದ್ದಾರೆ. ನೀವು ಅವರನ್ನು ಅವರ ಬಿಟ್ಟಿಕೆಲಸಗಳಿಂದ ನಿಲ್ಲಿಸಿಬಿಡುತ್ತೀರಲ್ಲಾ?” ಎಂದನು.
וַיֹּ֣אמֶר פַּרְעֹ֔ה הֵן־רַבִּ֥ים עַתָּ֖ה עַ֣ם הָאָ֑רֶץ וְהִשְׁבַּתֶּ֥ם אֹתָ֖ם מִסִּבְלֹתָֽם׃
6 ಅದೇ ದಿನದಲ್ಲಿ ಫರೋಹನು ಬಿಟ್ಟಿಕೆಲಸ ಮಾಡಿಸುವವರಿಗೂ ಅವರ ಮೇಲ್ವಿಚಾರಕರಿಗೂ,
וַיְצַ֥ו פַּרְעֹ֖ה בַּיֹּ֣ום הַה֑וּא אֶת־הַנֹּגְשִׂ֣ים בָּעָ֔ם וְאֶת־שֹׁטְרָ֖יו לֵאמֹֽר׃
7 “ನೀವು ಇನ್ನು ಇಟ್ಟಿಗೆಗಳನ್ನು ಮಾಡುವುದಕ್ಕೆ ಮೊದಲಿನ ಹಾಗೆ ಜನರಿಗೆ ಒಣಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
לֹ֣א תֹאסִפ֞וּן לָתֵ֨ת תֶּ֧בֶן לָעָ֛ם לִלְבֹּ֥ן הַלְּבֵנִ֖ים כִּתְמֹ֣ול שִׁלְשֹׁ֑ם הֵ֚ם יֵֽלְכ֔וּ וְקֹשְׁשׁ֥וּ לָהֶ֖ם תֶּֽבֶן׃
8 ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದ್ದರಿಂದ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಅರ್ಪಿಸೋಣ,’ ಎಂದು ಕೂಗುತ್ತಾರೆ.
וְאֶת־מַתְכֹּ֨נֶת הַלְּבֵנִ֜ים אֲשֶׁ֣ר הֵם֩ עֹשִׂ֨ים תְּמֹ֤ול שִׁלְשֹׁם֙ תָּשִׂ֣ימוּ עֲלֵיהֶ֔ם לֹ֥א תִגְרְע֖וּ מִמֶּ֑נּוּ כִּֽי־נִרְפִּ֣ים הֵ֔ם עַל־כֵּ֗ן הֵ֤ם צֹֽעֲקִים֙ לֵאמֹ֔ר נֵלְכָ֖ה נִזְבְּחָ֥ה לֵאלֹהֵֽינוּ׃
9 ಈ ಜನರು ಸುಳ್ಳು ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ. ಅವರು ದುಡಿಯಲಿ,” ಎಂದು ಆಜ್ಞಾಪಿಸಿದನು.
תִּכְבַּ֧ד הָעֲבֹדָ֛ה עַל־הָאֲנָשִׁ֖ים וְיַעֲשׂוּ־בָ֑הּ וְאַל־יִשְׁע֖וּ בְּדִבְרֵי־שָֽׁקֶר׃
10 ಆಗ ಬಿಟ್ಟಿಕೆಲಸವನ್ನು ಮಾಡಿಸುವವರೂ ಮೇಲ್ವಿಚಾರಕರೂ ಹೊರಗೆ ಹೋಗಿ ಜನರಿಗೆ, “ಫರೋಹನು ಹೀಗೆ ಹೇಳುತ್ತಾನೆ: ‘ನಾನು ನಿಮಗೆ ಒಣಹುಲ್ಲು ಕೊಡುವುದಿಲ್ಲ.
וַיֵּ֨צְא֜וּ נֹגְשֵׂ֤י הָעָם֙ וְשֹׁ֣טְרָ֔יו וַיֹּאמְר֥וּ אֶל־הָעָ֖ם לֵאמֹ֑ר כֹּ֚ה אָמַ֣ר פַּרְעֹ֔ה אֵינֶ֛נִּי נֹתֵ֥ן לָכֶ֖ם תֶּֽבֶן׃
11 ನಿಮಗೆ ಹುಲ್ಲು ಎಲ್ಲಿ ದೊರಕುವುದೋ, ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೆ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು,’ ಎಂದು ಹೇಳಿದ್ದಾನೆ,” ಎಂದರು.
אַתֶּ֗ם לְכ֨וּ קְח֤וּ לָכֶם֙ תֶּ֔בֶן מֵאֲשֶׁ֖ר תִּמְצָ֑אוּ כִּ֣י אֵ֥ין נִגְרָ֛ע מֵעֲבֹדַתְכֶ֖ם דָּבָֽר׃
12 ಆಗ ಜನರು ಒಣಹುಲ್ಲಿಗಾಗಿ ಕಳೆಕೀಳಿಸುವುದಕ್ಕೆ ಈಜಿಪ್ಟ್ ದೇಶದಲ್ಲೆಲ್ಲಾ ಚದರಿಹೋದರು.
וַיָּ֥פֶץ הָעָ֖ם בְּכָל־אֶ֣רֶץ מִצְרָ֑יִם לְקֹשֵׁ֥שׁ קַ֖שׁ לַתֶּֽבֶן׃
13 ಇದಲ್ಲದೆ ಬಿಟ್ಟಿಕೆಲಸ ಮಾಡಿಸುವವರು, “ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿದಂತೆಯೇ, ಪ್ರತಿಯೊಂದು ದಿನದಲ್ಲಿ, ಆ ದಿನದ ಕೆಲಸವನ್ನು ತೀರಿಸಿಬಿಡಬೇಕು,” ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
וְהַנֹּגְשִׂ֖ים אָצִ֣ים לֵאמֹ֑ר כַּלּ֤וּ מַעֲשֵׂיכֶם֙ דְּבַר־יֹ֣ום בְּיֹומֹ֔ו כַּאֲשֶׁ֖ר בִּהְיֹ֥ות הַתֶּֽבֶן׃
14 ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಏಕೆ ಒಪ್ಪಿಸಲಿಲ್ಲ,” ಎಂದು ಹೇಳಿ ಅವರನ್ನು ಹೊಡೆಸಿದರು.
וַיֻּכּ֗וּ שֹֽׁטְרֵי֙ בְּנֵ֣י יִשְׂרָאֵ֔ל אֲשֶׁר־שָׂ֣מוּ עֲלֵהֶ֔ם נֹגְשֵׂ֥י פַרְעֹ֖ה לֵאמֹ֑ר מַדּ֡וּעַ לֹא֩ כִלִּיתֶ֨ם חָקְכֶ֤ם לִלְבֹּן֙ כִּתְמֹ֣ול שִׁלְשֹׁ֔ם גַּם־תְּמֹ֖ול גַּם־הַיֹּֽום׃
15 ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿಮ್ಮ ದಾಸರಿಗೆ ಹೀಗೆ ಮಾಡುತ್ತೀರಿ?
וַיָּבֹ֗אוּ שֹֽׁטְרֵי֙ בְּנֵ֣י יִשְׂרָאֵ֔ל וַיִּצְעֲק֥וּ אֶל־פַּרְעֹ֖ה לֵאמֹ֑ר לָ֧מָּה תַעֲשֶׂ֦ה כֹ֖ה לַעֲבָדֶֽיךָ׃
16 ನಿಮ್ಮ ದಾಸರಿಗೆ ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ, ‘ಇಟ್ಟಿಗೆಗಳನ್ನು ಮಾಡಿರಿ’ ಎಂದು ನಮಗೆ ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಆದರೆ ತಪ್ಪು ನಿಮ್ಮ ಸ್ವಂತ ಜನರಲ್ಲಿಯೇ ಇದೆ,” ಎಂದರು.
תֶּ֗בֶן אֵ֤ין נִתָּן֙ לַעֲבָדֶ֔יךָ וּלְבֵנִ֛ים אֹמְרִ֥ים לָ֖נוּ עֲשׂ֑וּ וְהִנֵּ֧ה עֲבָדֶ֛יךָ מֻכִּ֖ים וְחָטָ֥את עַמֶּֽךָ׃
17 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ನೀವು, ‘ನಾವು ಹೋಗಿ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುತ್ತೇವೆ,’ ಎಂದು ಹೇಳುತ್ತೀರಿ.
וַיֹּ֛אמֶר נִרְפִּ֥ים אַתֶּ֖ם נִרְפִּ֑ים עַל־כֵּן֙ אַתֶּ֣ם אֹֽמְרִ֔ים נֵלְכָ֖ה נִזְבְּחָ֥ה לַֽיהוָֽה׃
18 ಆದ್ದರಿಂದ ಈಗ ಹೋಗಿ ಕೆಲಸಮಾಡಿರಿ. ಹುಲ್ಲನ್ನು ನಿಮಗೆ ಕೊಡುವುದಕ್ಕಾಗುವುದಿಲ್ಲ. ಆದರೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ತಯಾರಿಸಬೇಕು,” ಎಂದನು.
וְעַתָּה֙ לְכ֣וּ עִבְד֔וּ וְתֶ֖בֶן לֹא־יִנָּתֵ֣ן לָכֶ֑ם וְתֹ֥כֶן לְבֵנִ֖ים תִּתֵּֽנּוּ׃
19 ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದ್ದರಿಂದ, ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಇದ್ದೇವೆಂದು ತಿಳಿದುಕೊಂಡರು.
וַיִּרְא֞וּ שֹֽׁטְרֵ֧י בְנֵֽי־יִשְׂרָאֵ֛ל אֹתָ֖ם בְּרָ֣ע לֵאמֹ֑ר לֹא־תִגְרְע֥וּ מִלִּבְנֵיכֶ֖ם דְּבַר־יֹ֥ום בְּיֹומֹֽו׃
20 ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ, ದಾರಿಯಲ್ಲಿ ಕಾದಿದ್ದ ಮೋಶೆಯನ್ನೂ, ಆರೋನನನ್ನೂ ಸಂಧಿಸಿದರು.
וַֽיִּפְגְּעוּ֙ אֶת־מֹשֶׁ֣ה וְאֶֽת־אַהֲרֹ֔ן נִצָּבִ֖ים לִקְרָאתָ֑ם בְּצֵאתָ֖ם מֵאֵ֥ת פַּרְעֹֽה׃
21 ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು.
וַיֹּאמְר֣וּ אֲלֵהֶ֔ם יֵ֧רֶא יְהוָ֛ה עֲלֵיכֶ֖ם וְיִשְׁפֹּ֑ט אֲשֶׁ֧ר הִבְאַשְׁתֶּ֣ם אֶת־רֵיחֵ֗נוּ בְּעֵינֵ֤י פַרְעֹה֙ וּבְעֵינֵ֣י עֲבָדָ֔יו לָֽתֶת־חֶ֥רֶב בְּיָדָ֖ם לְהָרְגֵֽנוּ׃
22 ಆಗ ಮೋಶೆಯು ಯೆಹೋವ ದೇವರ ಬಳಿಗೆ ಬಂದು, “ಸ್ವಾಮಿ, ಈ ಜನರಿಗೆ ಏಕೆ ಕಷ್ಟವನ್ನು ಕೊಟ್ಟಿದ್ದೀರಿ? ಏಕೆ ನನ್ನನ್ನು ಕಳುಹಿಸಿದಿರಿ?
וַיָּ֧שָׁב מֹשֶׁ֛ה אֶל־יְהוָ֖ה וַיֹּאמַ֑ר אֲדֹנָ֗י לָמָ֤ה הֲרֵעֹ֙תָה֙ לָעָ֣ם הַזֶּ֔ה לָ֥מָּה זֶּ֖ה שְׁלַחְתָּֽנִי׃
23 ನಾನು ಫರೋಹನ ಬಳಿಗೆ ಬಂದು ನಿಮ್ಮ ಹೆಸರಿನಲ್ಲಿ ಮಾತನಾಡಿದಂದಿನಿಂದ, ಈ ಜನರಿಗೆ ಅವನು ಕೇಡನ್ನೇ ಮಾಡುತ್ತಿದ್ದಾನೆ. ನೀವು ನಿಮ್ಮ ಜನರನ್ನು ರಕ್ಷಿಸಲಿಲ್ಲವಲ್ಲಾ,” ಎಂದನು.
וּמֵאָ֞ז בָּ֤אתִי אֶל־פַּרְעֹה֙ לְדַבֵּ֣ר בִּשְׁמֶ֔ךָ הֵרַ֖ע לָעָ֣ם הַזֶּ֑ה וְהַצֵּ֥ל לֹא־הִצַּ֖לְתָּ אֶת־עַמֶּֽךָ׃

< ವಿಮೋಚನಕಾಂಡ 5 >