< ಯೋಬನು 20 >

1 ನಾಮಾಥ್ಯನಾದ ಚೋಫರನು ಉತ್ತರಕೊಟ್ಟು ಹೇಳಿದ್ದೇನೆಂದರೆ:
A Sofar Namaæanin odgovori i reèe:
2 “ನಾನು ತುಂಬಾ ಕಳವಳಗೊಂಡದ್ದರಿಂದ, ನನ್ನ ಆಲೋಚನೆಗಳು ನನ್ನನ್ನು ಉತ್ತರಿಸಲು ಪ್ರೇರೇಪಿಸಿದವು.
Zato me misli moje nagone da odgovorim, i zato hitim.
3 ನನ್ನನ್ನು ಅವಮಾನಿಸುವ ಖಂಡನೆಯನ್ನು ನಾನು ಕೇಳಿದ್ದೇನೆ; ಆದ್ದರಿಂದ ನನ್ನ ತಿಳುವಳಿಕೆಯು ನನ್ನನ್ನು ಉತ್ತರಿಸಲು ಪ್ರೇರೇಪಿಸುತ್ತದೆ.
Èuo sam ukor koji me sramoti, ali æe duh iz razuma mojega odgovoriti za me.
4 “ದೇವರು ಮನುಷ್ಯನನ್ನು ಭೂಮಿಯಲ್ಲಿ ಇರಿಸಿದ ಕಾಲದಿಂದ ವಿಷಯ ಹೇಗಿದೆ ಎಂಬುದು ನಿನಗೆ ನಿಶ್ಚಯವಾಗಿ ಗೊತ್ತಿದೆ.
Ne znaš li da je tako otkako je vijeka, otkako je postavljen èovjek na zemlji,
5 ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.
Da je slava bezbožnijeh za malo i radost licemjerova za èas?
6 ಹೆಮ್ಮೆಯು ಆಕಾಶಕ್ಕೆ ಏರಿದರೂ, ಅವನ ತಲೆ ಮೇಘಕ್ಕೆ ಮುಟ್ಟಿದರೂ,
Da bi mu visina doprla do neba, i glava se njegova dotakla oblaka,
7 ಗೊಬ್ಬರದ ಹಾಗೆ ಶಾಶ್ವತವಾಗಿ ಅವನು ನಾಶವಾಗುವನು; ಅವನನ್ನು ನೋಡಿದವರು, ‘ಅವನೆಲ್ಲಿ?’ ಎಂದು ಕೇಳುವರು.
Nestaæe ga zasvagda kao kala njegova; i koji ga vidješe reæi æe: kuda se djede?
8 ಭಕ್ತಿಹೀನನು ಕನಸಿನ ಹಾಗೆ ಹಾರಿಹೋಗುವನು, ಇನ್ನೆಂದಿಗೂ ಸಿಗಲಾರನು; ಅವನು ಕತ್ತಲೆಯ ಹಾಗೆ ಕಾಣದೆ ಹೋಗುವನು.
Kao san odletjeæe, i neæe se naæi, i išèeznuæe kao noæna utvara.
9 ಅವನನ್ನು ನೋಡಿದವರು ಇನ್ನು ಮುಂದೆ ನೋಡರು; ಅವನ ಸ್ಥಳವು ಇನ್ನು ಅವನನ್ನು ಕಾಣದು.
Oko koje ga je gledalo neæe više, niti æe ga više vidjeti mjesto njegovo.
10 ಅವನ ಮಕ್ಕಳು ಬಡವರ ದಯೆಯನ್ನು ಬೇಡುವರು; ಅವನ ಮಕ್ಕಳ ಕೈಗಳು ಅವನ ಸಂಪತ್ತನ್ನು ಹಿಂತಿರುಗಿಸಬೇಕಾಗುವುದು.
Sinovi njegovi umiljavaæe se siromasima i ruke æe njegove vraæati što je oteo.
11 ಅವನ ಎಲುಬುಗಳು ಯೌವನದ ಶಕ್ತಿಯಿಂದ ತುಂಬಿತ್ತು, ಅದು ಅವನ ಸಂಗಡ ಧೂಳಿನಲ್ಲಿ ಮಲಗುವುದು.
Kosti æe njegove biti pune grijeha mladosti njegove, i oni æe ležati s njim u prahu.
12 “ಅವನ ಕೆಟ್ಟತನವು ಬಾಯಿಗೆ ಸಿಹಿಯಾಗಿತ್ತು, ಅವನು ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟುಕೊಂಡಿದ್ದನು.
Ako mu je i slatka u ustima zloæa i krije je pod jezikom svojim,
13 ಅದನ್ನು ಬಿಟ್ಟುಕೊಡಲು ಇಷ್ಟಪಡದೆ, ತನ್ನ ಬಾಯಿಯೊಳಗೆ ದೀರ್ಘಸಮಯ ಇಟ್ಟುಕೊಂಡರೂ,
Èuva je i ne pušta je, nego je zadržava u grlu svom,
14 ಅವನ ಆಹಾರವು ಅವನ ಕರುಳಲ್ಲಿ ಹುಳಿಯಾಗಿ, ಅದು ಅವನೊಳಗಿನ ಸರ್ಪಗಳ ವಿಷವಾಗುವುದು.
Ipak æe se jelo njegovo pretvoriti u crijevima njegovijem, postaæe u njemu jed aspidin.
15 ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡಿಸಿ ಬಿಡುವನು.
Blago što je proždro izbljuvaæe, iz trbuha njegova istjeraæe ga Bog.
16 ಅವನು ಸರ್ಪಗಳ ವಿಷವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲುವುದು.
Jed æe aspidin sisati, ubiæe ga jezik gujinji.
17 ಅವನು ಜೇನು, ಮೊಸರೂ ಹರಿಯುವ ಹಳ್ಳಗಳನ್ನೂ, ಸಮೃದ್ಧಿಯಾಗಿ ಹರಿಯುವ ನದಿಗಳನ್ನೂ ನೋಡನು.
Neæe vidjeti potoka ni rijeka kojima teèe med i maslo.
18 ಅವನು ತನ್ನ ಪ್ರಯಾಸದ ಫಲವನ್ನು ಸವಿಯದೆ ಪರರಿಗೆ ಕೊಡಬೇಕಾಗುವುದು; ಅವನು ತಾನು ಪಡೆದ ಲಾಭದ ಆನಂದವನ್ನು ಅನುಭವಿಸುವುದಿಲ್ಲ.
Vratiæe muku, a neæe je pojesti; prema blagu biæe promjena, i neæe se radovati.
19 ಏಕೆಂದರೆ ಅವನು ಬಡವರನ್ನು ಜಜ್ಜಿ ಅವರನ್ನು ನಿರ್ಗತಿಕರನ್ನಾಗಿ ಮಾಡಿದನು; ತಾನು ನಿರ್ಮಿಸದ ಮನೆಗಳನ್ನು ವಶಪಡಿಸಿಕೊಂಡಿದ್ದಾನೆ.
Jer je tlaèio i ostavljao uboge, kuæe je otimao i nije zidao.
20 “ಖಂಡಿತವಾಗಿ ಅವನ ಆಕಾಂಕ್ಷೆಗೆ ತೃಪ್ತಿ ಇರುವುದಿಲ್ಲ; ಅವನು ತನ್ನ ಇಷ್ಟ ಸಂಪತ್ತಿನಲ್ಲಿ ಏನೂ ಉಳಿಸಿಕೊಳ್ಳುವುದಿಲ್ಲ.
Jer nije nigda osjetio mira u trbuhu svom, ni što mu je najmilije neæe saèuvati.
21 ಅವನಿಗೆ ಆಹಾರವು ಉಳಿಯದು; ಆದ್ದರಿಂದ ಅವನ ಸಮೃದ್ಧಿಯು ಅಸ್ಥಿರವಾಗಿರುವುದು.
Ništa mu neæe ostati od hrane njegove. Zato ne može dobro njegovo trajati.
22 ಅವನ ಸಮೃದ್ಧಿಯಿಂದ ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು; ಘೋರ ದುಃಖವು ಅವನ ಮೇಲೆ ಬರುವುದು.
Kad se ispuni izobilje njegovo, tada æe biti u nevolji; sve ruke nevoljnijeh udariæe na nj.
23 ಅವನ ಹೊಟ್ಟೆ ತುಂಬುವಾಗ, ದೇವದಂಡನೆ ಅವನ ಮೇಲೆ ಬರುವುದು; ಹೌದು, ದೇವದಂಡನೆಯು ಅವನ ಮೇಲೆ ಸುರಿಯುವುದು.
Kad bi napunio trbuh svoj, poslaæe na nj Bog jarost gnjeva svojega, i pustiæe je kao dažd na njega i na jelo njegovo.
24 ಅವನು ಕಬ್ಬಿಣದ ಆಯುಧಕ್ಕೆ ತಪ್ಪಿಸಿಕೊಂಡು ಓಡಿಹೋದರೆ, ಕಂಚಿನ ಬಾಣ ಅವನನ್ನು ತಿವಿಯುವುದು.
Kad stane bježati od oružja gvozdenoga, prostrijeliæe ga luk mjedeni.
25 ಅವನು ಆ ಬಾಣವನ್ನು ಎಳೆದರೆ, ಅದು ಬೆನ್ನಿನಿಂದ ಹೊರಡುವುದು; ಅವನ ಪಿತ್ತಕೋಶದಿಂದ ಅದರ ಮಿಂಚುವ ಮೊನೆ ಬರುವುದು; ಸಾವಿನ ಭಯವು ಅವನನ್ನೂ ಆವರಿಸುವುದು.
Strijela puštena proæi æe kroz tijelo njegovo, i svijetlo gvožðe izaæi æe iz žuèi njegove; kad poðe, obuzeæe ga strahote.
26 ಅವನ ನಿಕ್ಷೇಪಗಳಲ್ಲಿ ಅಂಧಕಾರವು ಪೂರ್ಣವಾಗಿ ಕವಿಯುವುದು; ಯಾರೂ ಹೊತ್ತಿಸದ ಬೆಂಕಿ ಅವನನ್ನು ದಹಿಸುವುದು; ಅವನ ಗುಡಾರದಲ್ಲಿ ಉಳಿದದ್ದೆಲ್ಲ ನಾಶವಾಗುವುದು.
Sve æe tame biti sakrivene u tajnim mjestima njegovijem; proždrijeæe ga oganj neraspiren, i ko ostane u šatoru njegovu zlo æe mu biti.
27 ಆಕಾಶವು ಅವನ ಅಪರಾಧವನ್ನು ಪ್ರಕಟಿಸುವುದು; ಭೂಮಿಯು ಅವನಿಗೆ ವಿರೋಧವಾಗಿ ಏಳುವುದು.
Otkriæe nebesa bezakonje njegovo, i zemlja æe ustati na nj.
28 ಅವನ ಮನೆಯ ಧನಧಾನ್ಯವು ತೊಲಗಿ ಹೋಗುವುದು; ದೇವದಂಡನೆಯ ದಿನದಲ್ಲಿ ಅದು ಪ್ರವಾಹದಿಂದ ಕೊಚ್ಚಿಕೊಂಡು ಹೋಗುವುದು.
Otiæi æe ljetina doma njegova, rastoèiæe se u dan gnjeva njegova.
29 ದುಷ್ಟನಿಗೆ ದೇವರಿಂದ ಬರುವ ಪಾಲೂ, ಅವನಿಗೆ ನೇಮವಾಗಿರುವ ಬಾಧ್ಯತೆಯೂ ಇವೇ.”
To je dio od Boga èovjeku bezbožnomu i našljedstvo od Boga za besjedu njegovu.

< ಯೋಬನು 20 >