< ಯಾಜಕಕಾಂಡ 9 >

1 ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಮತ್ತು ಇಸ್ರಾಯೇಲಿನ ಹಿರಿಯರನ್ನೂ ಕರೆದನು.
आठव्या दिवशी मोशेने अहरोन, त्याचे पुत्र तसेच इस्राएलांचे वडील ह्यांना बोलावले.
2 ಅವನು ಆರೋನನಿಗೆ, “ನೀನು ಪಾಪ ಪರಿಹಾರದ ಬಲಿಗಾಗಿ ಒಂದು ಎಳೆಯ ಕರುವನ್ನೂ ಮತ್ತು ದಹನಬಲಿಗಾಗಿ ಕಳಂಕರಹಿತ ಟಗರನ್ನೂ ತೆಗೆದುಕೊಂಡು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸು.
तो अहरोनाला म्हणाला, “पापार्पणासाठी एक निर्दोष गोऱ्हा व होमार्पणासाठी निर्दोष मेंढा आण आणि त्यांना परमेश्वरास अर्पण कर.
3 ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ: ‘ಪಾಪ ಪರಿಹಾರದ ಬಲಿಗಾಗಿ ಹೋತವನ್ನೂ ದಹನಬಲಿಗಾಗಿ ಕಳಂಕರಹಿತ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿಯನ್ನೂ ತೆಗೆದುಕೊಳ್ಳಬೇಕು.
आणि इस्राएल लोकांस असे सांग, ‘तुम्ही पापार्पणासाठी एक बकरा आणा व होमार्पणासाठी एक गोऱ्हा व एक कोकरु आणा; ही दोन्ही प्रत्येकी एक वर्षाची व निर्दोष असावीत;
4 ಯೆಹೋವ ದೇವರ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಾಗಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆಹಾರದ ಬಲಿ ಎಣ್ಣೆಯೊಂದಿಗೆ ಬೆರೆತಿರಬೇಕು. ಏಕೆಂದರೆ ಈ ದಿನವೇ ಯೆಹೋವ ದೇವರು ನಿಮಗೆ ಕಾಣಿಸಿಕೊಳ್ಳುವರು,’” ಎಂದನು.
आणि परमेश्वरासमोर शांत्यर्पणे करण्यासाठी बली म्हणून एक बैल, एक मेंढा व तेलात मळलेले अन्नार्पण आणा कारण आज परमेश्वर तुम्हास दर्शन देणार आहे.”
5 ಅವರು ಮೋಶೆಯು ಆಜ್ಞಾಪಿಸಿದವುಗಳನ್ನು ದೇವದರ್ಶನದ ಗುಡಾರದ ಮುಂದೆ ತಂದರು. ಸಮೂಹವೆಲ್ಲವೂ ಹತ್ತಿರ ಬಂದು ಯೆಹೋವ ದೇವರ ಮುಂದೆ ನಿಂತಿತು.
मग मोशेने आज्ञा दिल्याप्रमाणे सर्व लोक आले व त्यांनी ते सर्व दर्शनमंडपाच्या दारापाशी आणले मग सर्वजण येऊन परमेश्वरासमोर उभे राहिले.
6 ಮೋಶೆ ಅವರಿಗೆ, “ಯೆಹೋವ ದೇವರು ಆಜ್ಞಾಪಿಸಿದ ಸಂಗತಿಯು ಇದೇ. ಇದನ್ನು ನೀವು ಮಾಡಿರಿ. ಯೆಹೋವ ದೇವರ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವುದು,” ಎಂದನು.
तेव्हा मोशे म्हणाला, “परमेश्वराने आज्ञा दिल्याप्रमाणे तुम्ही सर्वकाही करावे; मग परमेश्वराचे गौरव तुम्हास दिसेल.”
7 ಮೋಶೆಯು ಆರೋನನಿಗೆ, “ಬಲಿಪೀಠದ ಕಡೆಗೆ ಹೋಗಿ, ಯೆಹೋವ ದೇವರು ಆಜ್ಞಾಪಿಸಿದಂತೆಯೇ ನಿನ್ನ ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸು. ನಿನಗಾಗಿ ಪ್ರಾಯಶ್ಚಿತ್ತವನ್ನು ಮಾಡು, ಜನರ ಸಮರ್ಪಣೆಗಳನ್ನು ಸಮರ್ಪಿಸಿ, ಅವರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು,” ಎಂದನು.
मग मोशेने अहरोनाला सांगितले, “जा व परमेश्वराने आज्ञा दिल्याप्रमाणे सर्वकाही कर; वेदीजवळ जाऊन आपला पापबली व होमबली ह्यांचे अर्पण कर आणि स्वत: साठी व लोकांसाठी प्रायश्चित कर आणि लोकांकडील बलीही अर्पण करून त्यांच्यासाठी प्रायश्चित कर.”
8 ಆದ್ದರಿಂದ ಆರೋನನು ಬಲಿಪೀಠದ ಕಡೆಗೆ ಹೋಗಿ, ತನಗಾಗಿ ಪಾಪ ಪರಿಹಾರದ ಬಲಿಯಾದ ಕರುವನ್ನು ವಧಿಸಿದನು.
तेव्हा अहरोन वेदीजळ गेला व त्याने स्वत: साठी पापार्पणाचा गोऱ्हा वधला.
9 ಆಗ ಆರೋನನ ಪುತ್ರರು ಅವನ ಬಳಿಗೆ ರಕ್ತವನ್ನು ತಂದರು. ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಬಲಿಪೀಠದ ಅಡಿಯಲ್ಲಿ ಉಳಿದ ರಕ್ತವನ್ನು ಹೊಯ್ದನು.
मग अहरोनाचे पुत्र रक्त घेऊन त्याच्यापाशी गेले. तेव्हा त्याने आपले बोट त्यामध्ये बुडवून ते वेदीच्या शिंगांना लावले मग ते वेदीच्या पायथ्याशी ओतले.
10 ಅದರ ಪಾಪ ಪರಿಹಾರದ ಬಲಿಯ ಕೊಬ್ಬು, ಮೂತ್ರಪಿಂಡಗಳು ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬು, ಇವುಗಳನ್ನು ಅವನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ, ಬಲಿಪೀಠದ ಮೇಲೆ ಸುಟ್ಟನು.
१०त्याने पापार्पणाची चरबी, गुरदे व काळजावरील चरबीचा पडदा घेऊन त्यांचा वेदीवर परमेश्वराने मोशेला दिलेल्या आज्ञेप्रमाणेच होम केला.
11 ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
११मग अहरोनाने मांस व कातडे छावणीबाहेर नेऊन अग्नीत जाळून टाकले.
12 ಅವನು ದಹನಬಲಿಯನ್ನು ವಧಿಸಿದಾಗ, ಆರೋನನ ಪುತ್ರರು ಅವನಿಗೆ ರಕ್ತವನ್ನು ತಂದು ಕೊಟ್ಟರು. ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.
१२नंतर त्याने होमबली वधला व त्याचे तुकडे केले; अहरोनाच्या मुलांनी त्या होमबलीचे रक्त अहरोनाकडे आणले तेव्हा त्याने ते वेदीवर व सभोवती शिंपडले.
13 ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದು ಕೊಡಲು, ಅವನು ಅವುಗಳನ್ನು ಬಲಿಪೀಠದ ಮೇಲೆ ಸುಟ್ಟನು.
१३नंतर अहरोनाच्या मुलांनी होमबलीचे तुकडे व त्याचे डोके अहरोनाकडे दिले आणि त्याने त्यांचा वेदीवर होम केला.
14 ಅವನು ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು, ಅವುಗಳನ್ನು ದಹನಬಲಿಯ ಜೊತೆ ಮೇಲಿನ ಬಲಿಪೀಠದ ಮೇಲೆ ಸುಟ್ಟನು.
१४त्याने त्याची आतडी व पाय धुवून त्यांचाही वेदीवर होम केला.
15 ಅದಾದ ಮೇಲೆ ಆರೋನನು ಜನರಿಗಾಗಿ ಅರ್ಪಿಸಿದ ಬಲಿಯನ್ನು ತಂದು, ಹೋತವನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಪರಿಹಾರದ ಬಲಿಯಾಗಿರುವುದನ್ನು ವಧಿಸಿ, ಮೊದಲನೆಯದರ ಹಾಗೆ ಅದನ್ನು ಸಮರ್ಪಿಸಿದನು.
१५मग त्याने लोकांचे अर्पण जवळ नेले व त्यांच्यासाठी आणलेला पापार्पणाचा बकरा वधला आणि पहिल्याप्रमाणेच तोसुध्दा पापार्पण म्हणून अर्पिला.
16 ಅವನು ದಹನಬಲಿಯನ್ನು ತಂದು, ಅದನ್ನು ವಿಧಿಬದ್ಧವಾಗಿ ಸಮರ್ಪಿಸಿದನು.
१६त्याने होमबलीही जवळ नेऊन परमेश्वराने आज्ञा दिल्याप्रमाणे तो अर्पिला.
17 ಅವನು ಧಾನ್ಯ ಸಮರ್ಪಣೆಯ ಬಲಿಯನ್ನು ತಂದು, ಅದರಲ್ಲಿ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಬೆಳಗಿನ ದಹನಬಲಿ ಯಜ್ಞದ ಬಳಿಯಲ್ಲಿ ಅದನ್ನು ಹೋಮ ಮಾಡಿದನು.
१७मग त्याने अन्नार्पण वेदीजवळ नेले व त्यातले मूठभर घेऊन दररोज सकाळच्या होमार्पणासह तेही अर्पण केले.
18 ಅವನು ಜನರಿಗಾಗಿದ್ದ ಹೋರಿ ಮತ್ತು ಟಗರನ್ನು ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಅವನ ಬಳಿಗೆ ತರಲು, ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.
१८लोकांसाठी शांत्यर्पणे म्हणून आणलेला बैल व मेंढा हे त्याने वधले आणि त्याच्या मुलांनी त्या बलींचे व मेंढ्याचे रक्त अहरोनाकडे आणले तेव्हा त्याने ते वेदीवर व सभोवती शिंपडले.
19 ಹೋರಿಯ ಮತ್ತು ಟಗರಿನ ಕೊಬ್ಬನ್ನೂ ಹಿಂಭಾಗದ ಕೊಬ್ಬನ್ನೂ ಮತ್ತು ಕರುಳುಗಳ ಸುತ್ತಲಿನ ಕೊಬ್ಬನ್ನೂ ಮೂತ್ರಪಿಂಡಗಳ ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬನ್ನೂ
१९अहरोनाच्या मुलांनी बैलाची व मेंढ्याची चरबी, चरबीदार शेपूट, आंतड्यावरील चरबी, गुरदे आणि काळजावरील चरबीचा पडदा ही सर्व अहरोनाकडे आणली.
20 ಕೊಬ್ಬನ್ನು ಎದೆಯ ಭಾಗಗಳ ಮೇಲೆ ಇಡಲು, ಆರೋನನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಟ್ಟನು.
२०त्यांनी ती सर्व चरबी त्या बलींच्या ऊराच्या भागावर ठेवली; मग अहरोनाने त्या सर्वाचा वेदीवर होम केला.
21 ಎದೆಯ ಭಾಗಗಳನ್ನು, ಬಲತೊಡೆಗಳನ್ನು ಆರೋನನು, ಮೋಶೆ ಆಜ್ಞಾಪಿಸಿದಂತೆ ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.
२१अहरोनाने बलींचे ऊर व उजवी मांडी ही मोशेच्या सांगण्याप्रमाणे परमेश्वरासमोर ओवाळणीचे अर्पण म्हणून ओवाळली.
22 ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಮತ್ತು ಸಮಾಧಾನದ ಬಲಿಯನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
२२मग अहरोनाने लोकांकडे वळून, हात वर करून त्यांना आशीर्वाद दिला आणि ज्या वेदीवर त्याने पापार्पण, होमार्पण, व शांत्यर्पणे केली होती तेथून तो खाली आला.
23 ಮೋಶೆಯೂ ಆರೋನನೂ ದೇವದರ್ಶನದ ಗುಡಾರದ ಒಳಗೆ ಹೋಗಿ, ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವ ದೇವರ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.
२३मोशे व अहरोन दर्शनमंडपामध्ये गेले आणि बाहेर आल्यावर त्यांनी लोकांस आशीर्वाद दिला; तेव्हा परमेश्वराचे तेज सर्व लोकांस दिसले;
24 ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.
२४तेव्हा परमेश्वरासमोरून अग्नी निघाला व त्याने वेदीवरील होमार्पण व चरबी भस्म केली; हे पाहून सर्व लोकांनी जयजयकार केला व दंडवत घातले.

< ಯಾಜಕಕಾಂಡ 9 >