< ಲೂಕನು 22 >

1 ಪಸ್ಕವೆಂಬ, ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸಮೀಪವಾಗಿತ್ತು.
A KAMADIP en prot jomut korendor, me adaneki paja.
2 ಮುಖ್ಯಯಾಜಕರೂ ನಿಯಮ ಬೋಧಕರೂ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
Jamero lapalap o jaunkawewe kan raparapaki, pwen kamatala i, pwe irail majak aramaj akan.
3 ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಎಂದು ಕರೆಯಲಾಗುವ ಯೂದನಲ್ಲಿ, ಸೈತಾನನು ಪ್ರವೇಶಿಸಿದನು.
A Jatan tilon on Iudaj me adaneki Ijkariot, me kijan ekriamen ko.
4 ಅವನು ಮುಖ್ಯಯಾಜಕರ ಬಳಿಗೂ ದೇವಾಲಯದ ಕಾವಲಧಿಕಾರಿಗಳ ಬಳಿಗೂ ಹೋಗಿ ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಅವರ ಕೂಡ ಚರ್ಚಿಸಿದನು.
I ari koieila ren jamero lapalap o jaumaj akan, kalelapok duen a pan panalan ir i.
5 ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವುದಕ್ಕೆ ವಾಗ್ದಾನ ಮಾಡಿದರು.
Irail ari peren kida, wiaki eu en ki on i moni.
6 ಅವನೂ ಸಮ್ಮತಿಸಿ, ಜನಸಮೂಹವು ಇಲ್ಲದಿರುವಾಗ ಯೇಸುವನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಕಾಯುತ್ತಿದ್ದನು.
I ari inauki on irail, o raparapaki, duen a pan panalan ir i jo moromoron.
7 ಆಗ ಪಸ್ಕದ ಕುರಿಯು ಬಲಿಕೊಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನ ಬಂದಿತು.
Ran en prot jomut ap leler, anjaun kamela paja.
8 ಯೇಸು ಪೇತ್ರ ಯೋಹಾನರನ್ನು ಕರೆದು, “ನೀವು ಹೋಗಿ ನಮಗೋಸ್ಕರ ಪಸ್ಕಭೋಜನವನ್ನು ಸಿದ್ಧಮಾಡಿರಿ,” ಎಂದರು.
I ari poronela Petruj o loanej majani: U kowei, kaonopadan kitail paja, pwe kitail en mana.
9 ಅವರು ಯೇಸುವಿಗೆ, “ನಾವು ಎಲ್ಲಿ ಸಿದ್ಧಮಾಡಬೇಕು?” ಎಂದರು.
Irail idok re a: la waja, re kotin kupura, jen kaonopada?
10 ಆಗ ಯೇಸು ಅವರಿಗೆ, “ನೀವು ಪಟ್ಟಣವನ್ನು ಪ್ರವೇಶಿಸಿದಾಗ, ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡಿರುವ ಒಬ್ಬನು ನಿಮ್ಮನ್ನು ಸಂಧಿಸುವನು. ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
A kotin majani on irail: Kilan, koma lao pedelon kanim o, aramaj amen pan tu on koma, me wa pakit en pil eu, idauen i nan im o, me a pedelon on lole!
11 ನೀವು ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ’ ಎಂದು ಹೇಳಿರಿ.
Koma ap indan kaun pan im o: Jaunpadak o majanie don komui: Ia pera en kairu, waja I pan mana paja ia ianaki ai tounpadak kan?
12 ಅವನು ಕ್ರಮಪಡಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿಯೇ ಪಸ್ಕಭೋಜನ ಸಿದ್ಧಪಡಿಸಿರಿ,” ಎಂದರು.
I ari pan kajale on koma weip poa eu, me audeki men momod, i waja koma pan kaonopada!
13 ಅವರು ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡು, ಪಸ್ಕವನ್ನು ಸಿದ್ಧಮಾಡಿದರು.
Ira lao koieila, ap diarada, duen a kotin majani on ira; ira ap kaonopada paja.
14 ನಿಶ್ಚಿತ ಸಮಯ ಬಂದಾಗ ಯೇಸು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕುಳಿತುಕೊಂಡರು.
Auer lao leler, i ap kaipokedi ni tepel o wanporon ekriamen ian i.
15 ಆಗ ಯೇಸು ಅವರಿಗೆ, “ನಾನು ಬಾಧೆಯನ್ನು ಅನುಭವಿಸುವುದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕಭೋಜನ ಮಾಡುವುದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ.
I ap kotin majani on irail. I anane melel ian komail mana paja wet mon ai pan kalokolok.
16 ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕಭೋಜನ ಮಾಡುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
Pwe I indai on komail, I jolar pan kan jan met kokolata, a lao kapunala nan wein Kot.
17 ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು, ಸ್ತೋತ್ರಮಾಡಿ, “ಇದನ್ನು ತೆಗೆದುಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ.
I ari kotikida dal o laolaoki a majani: Ale met, nek nan pun omail!
18 ದೇವರ ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ,” ಎಂದರು.
Pwe I indai on komail, I jolar pan nim jan kijan wan wain, wein Kot lao pwaidar.
19 ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.
A kotin limada prot, laolaoki o pilitiki pena, ap kotiki on irail majani: War ai metet, me panalan komail! Komail en wia me wet, men kataman kin ia.
20 ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.
O pil dal en nim murin kajipon majani: Dal wet kadede kap ni mom en nt’ ai, me kapwilepilidi on komail.
21 ಆದರೂ ಇಗೋ, ನನಗೆ ದ್ರೋಹಬಗೆಯುವವನ ಕೈ ನನ್ನ ಕೈಯೊಂದಿಗೆ ಮೇಜಿನ ಮೇಲೆ ಇದೆ.
A kilan, pa en me pan pan ia la, me ian ia ni tepel o.
22 ನೇಮಕವಾದ ಪ್ರಕಾರ ಮನುಷ್ಯಪುತ್ರನಾದ ನಾನು ಹೊರಟುಹೋಗುತ್ತೇನೆ; ಆದರೆ ನನಗೆ ದ್ರೋಹಬಗೆಯುವವನಿಗೋ ಎಷ್ಟೋ ಕಷ್ಟ!” ಎಂದು ಹೇಳಿದರು.
Nan melel, Nain aramaj pan kokola duen a kileledier, a juedi on aramaj o, me a pan pankila!
23 ಆಗ ಇದನ್ನು ದ್ರೋಹಬಗೆಯುವವನು ಯಾವನು ಎಂದು ಶಿಷ್ಯರು ತಮ್ಮೊಳಗೆ ಪ್ರಶ್ನೆ ಮಾಡಲಾರಂಭಿಸಿದರು.
Irail ari pikikidi idok nan pun arail, ij re irail, me pan wiada met?
24 ಇದಲ್ಲದೆ ತಮ್ಮೊಳಗೆ ಯಾರು ಅತಿ ದೊಡ್ಡವನೆಂಬುದಾಗಿ ಶಿಷ್ಯರಲ್ಲಿ ವಿವಾದವು ಪ್ರಾರಂಭವಾಯಿತು.
Irail pil akamaiki nan pun arail, duen ij me pan lapalap re irail.
25 ಆಗ ಯೇಸು ಅವರಿಗೆ, “ಯೆಹೂದ್ಯರಲ್ಲದವರ ಅರಸರು ತಮ್ಮ ಜನರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡೆಸುವವರು ಉಪಕಾರಿಗಳು ಎಂದು ಎಣಿಸಿಕೊಳ್ಳುತ್ತಾರೆ.
A kotin majani on irail: Nanmarki en wei pokon akan kin poe irail edi o me manaman akan kin adaneki monjap kalanan.
26 ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿ ದೊಡ್ಡವನಾಗಿರುವವನು ಅತಿ ಚಿಕ್ಕವನಂತೆ ಇರಲಿ ಮತ್ತು ಆಳ್ವಿಕೆ ಮಾಡುವವನು ಸೇವೆ ಮಾಡುವವನಂತೆ ಇರಲಿ.
A komail jota pan dueta, a me lapalap re omail, i en dueta me tikitik, o me kin kaunda, en dueta me kin papa.
27 ಯಾರು ದೊಡ್ಡವನು? ಊಟಕ್ಕೆ ಕುಳಿತುಕೊಂಡಿರುವವನೋ ಅಥವಾ ಸೇವೆ ಮಾಡುವವನೋ? ಊಟಕ್ಕೆ ಕುಳಿತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
Pwe ij me lapalap ren me mondi ni tepel de me kin papa? Kaidin i, me mondi ni tepel? A nai dueta ladu pamail.
28 ನೀವೇ, ನನ್ನ ಕಷ್ಟಗಳಲ್ಲಿ ನನ್ನೊಂದಿಗೆ ನಿಂತವರು.
Nan komail me ian ia ni ai jonejon.
29 ನನ್ನ ತಂದೆ ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ, ನಾನೂ ನಿಮಗೆ ರಾಜ್ಯವನ್ನು ನೇಮಕ ಮಾಡುತ್ತೇನೆ.
Nai ari kileledi on komail wei eu, duen Jam ai kileledi on ia er;
30 ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
Pwe komail en mana o nim ni ai tepel nan ai wei o mondi pon men mondi ko, kakaun kainok en Ijrael eijokriau.
31 “ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.
Kaun ap kotin majani: Jimon, Jimon, kilan, Jatan non kin komail, pwen koko komail dueta wan prot.
32 ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.
A nai me kapakapa kin uk, pwe om pojon de nikila. A koe lao japaledo kakelada ri om ol akan!
33 ಆದರೆ ಅವನು ಯೇಸುವಿಗೆ, “ಕರ್ತದೇವರೇ, ನಾನು ನಿಮ್ಮ ಜೊತೆಯಲ್ಲಿ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.
A a potoan on i: Main, i pan idauen ir lel nan imaten o matala.
34 ಆಗ ಯೇಸು, “ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವುದಕ್ಕಿಂತ ಮುಂಚೆ, ಈ ದಿವಸ ಹುಂಜ ಕೂಗುವುದಿಲ್ಲ ಎಂದು ನಿನಗೆ ಹೇಳುತ್ತೇನೆ,” ಎಂದರು.
A kotin majani: Petruj, I indai on uk, nan malek jota pan kakorot ran wet, koe lao kamamki pan jilepak, me koe aja ia.
35 ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು.
A kotin majani on irail: Ni ai kadar komail wei jo ed en moni, o jo ed en jailok, o jo jut, meakot komail lekekilar? Re ap potoan on: Jota.
36 ಆಗ ಯೇಸು ಅವರಿಗೆ, “ಆದರೆ ಈಗ ಹಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಅದರಂತೆಯೇ ಪ್ರಯಾಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಖಡ್ಗಯಿಲ್ಲದವನು ತನ್ನ ಬಟ್ಟೆಯನ್ನು ಮಾರಿ ಅದನ್ನು ಕೊಂಡುಕೊಳ್ಳಲಿ.
I ari kotin majani on irail: A met, me a ed en moni mia, en ale o pil ed en jailok, o me jo a, i en netekila a likau, ap id netiada kodlaj pot.
37 ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.
Pwe I indai on komail, me intinidier, pil pan pwai on ia: A wadawad on me dipan akan, pwe me intinidier duen nai, pan kaimwijokala.
38 ಶಿಷ್ಯರು, “ಕರ್ತದೇವರೇ, ಇಗೋ ಇಲ್ಲಿ ಎರಡು ಖಡ್ಗಗಳಿವೆ,” ಎಂದರು. ಅದಕ್ಕೆ ಯೇಸು ಅವರಿಗೆ, “ಅಷ್ಟು ಸಾಕು,” ಎಂದರು.
Irail indada: Main, kotin majani, iet kodlaj riapot. A kotin majani on irail. Ari, i eta.
39 ಯೇಸು ಹೊರಗೆ ಬಂದು ತಮ್ಮ ವಾಡಿಕೆಯಂತೆ ಓಲಿವ್ ಗುಡ್ಡಕ್ಕೆ ಹೋದರು. ಯೇಸುವಿನ ಶಿಷ್ಯರೂ ಅವರನ್ನು ಹಿಂಬಾಲಿಸಿದರು.
I ari kotilan dol Oliwe, duen a kin wia; tounpadak kan idauenla i.
40 ಯೇಸು ಆ ಸ್ಥಳದಲ್ಲಿದ್ದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ,” ಎಂದರು.
I lao lei on waja o, ap kotin majani on irail: Komail kapakap pwe komail de ko on nan jonejon.
41 ಯೇಸು ಅವರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣಕಾಲೂರಿ,
I ari tororela jan irail doo weita kapir won takai eu, ap kelepuki laolao.
42 “ತಂದೆಯೇ, ನಿಮ್ಮ ಚಿತ್ತವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸಿ. ಆದರೂ ನನ್ನ ಚಿತ್ತವಲ್ಲ ನಿಮ್ಮ ಚಿತ್ತದಂತೆಯೇ ಆಗಲಿ,” ಎಂದು ಪ್ರಾರ್ಥಿಸಿದರು.
Majani: Jam (ai), ma komui mauki, koti ki wei jan ia dal wet, ari jo, kaidin injen ai, pwe kupur omui ta en wiaui.
43 ಆಗ ಪರಲೋಕದಿಂದ ಒಬ್ಬ ದೇವದೂತನು ಯೇಸುವಿಗೆ ಕಾಣಿಸಿಕೊಂಡು, ಅವರನ್ನು ಬಲಪಡಿಸುತ್ತಾ ಇದ್ದನು.
Nan tounlan amen pwarado jan nanlan katinada i.
44 ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.
A ni a kotin pador on mela, ap nianian a laolao, lao pudo a likamata nta, me dinedinedi on nan pwel.
45 ಯೇಸು ಪ್ರಾರ್ಥನೆಮಾಡಿ ಎದ್ದ ಮೇಲೆ ತಮ್ಮ ಶಿಷ್ಯರ ಕಡೆಗೆ ಬಂದು, ಅವರು ದುಃಖದಿಂದ ಬಳಲಿ ನಿದ್ರೆ ಮಾಡುತ್ತಿರುವುದನ್ನು ಕಂಡು ಅವರಿಗೆ,
A kotida jan a laolao o kotin pur on tounpadak kan, ir mamair aki ar mamauk.
46 “ನೀವು ನಿದ್ರೆ ಮಾಡುವುದು ಏಕೆ? ಶೋಧನೆಗೆ ಒಳಗಾಗದಂತೆ ಎದ್ದು ಪ್ರಾರ್ಥಿಸಿರಿ,” ಎಂದರು.
Majani on irail: Da me komail mamairki? Paurida o kapakap, pwe komail de ko on nan jonejon!
47 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದ ಯೂದನು ಅವರಿಗೆ ಮುಂದಾಳಾಗಿ ಬಂದು, ಮುದ್ದಿಡುವುದಕ್ಕಾಗಿ ಯೇಸುವನ್ನು ಸಮೀಪಿಸಿದನು.
A ni a kotin majani mepukat, kilan, pokon o, o me adaneki ludaj, amen ir ekriamen, tion mo’rail, kaikai don Iejuj, pwen metik i.
48 ಆಗ ಯೇಸು ಅವನಿಗೆ, “ಯೂದಾ, ಮುದ್ದಿನಿಂದ ಮನುಷ್ಯಪುತ್ರನಾದ ನನಗೆ ದ್ರೋಹಮಾಡುತ್ತೀಯೋ?” ಎಂದರು.
A Iejuj kotin majani on i: ludaj, koe pan pan kila metik eu Nain arama?
49 ಯೇಸುವಿನ ಸುತ್ತಲಿದ್ದ ಶಿಷ್ಯರು ಮುಂದೆ ಸಂಭವಿಸುವುದನ್ನು ಅರಿತು ಯೇಸುವಿಗೆ, “ಕರ್ತದೇವರೇ, ನಾವು ಖಡ್ಗದಿಂದ ಹೊಡೆಯೋಣವೋ?” ಎಂದು ಕೇಳಿದರು.
Irail me ian i lao kilaner me pan wiaui, rap indai on i: Main, je jo pan wokieki ir kodlaj?
50 ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು.
Amen ir pala ladun jamero lapalap amen o jara jan jalon a pali maun.
51 ಆದರೆ ಯೇಸು, “ಸಾಕು ಇಂಥದ್ದು ಬೇಡ!” ಎಂದು ಹೇಳಿ, ಅವನ ಕಿವಿಯನ್ನು ಮುಟ್ಟಿ ಸ್ವಸ್ಥಮಾಡಿದರು.
Iejuj ap kotin japen majani: Arier! I ap kotin jair jalon a, kakelada i.
52 ಆಗ ಯೇಸು ತಮ್ಮ ಬಳಿಗೆ ಬಂದಿದ್ದ ಮುಖ್ಯಯಾಜಕರಿಗೂ ದೇವಾಲಯದ ಕಾವಲಾಧಿಕಾರಿಗಳಿಗೂ ಹಿರಿಯರಿಗೂ, “ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬಂದ ಹಾಗೆ ಖಡ್ಗಗಳಿಂದಲೂ ದೊಣ್ಣೆಗಳಿಂದಲೂ ನೀವು ಹೊರಟು ಬಂದಿರುವಿರೋ?
Iejuj ap kotin majani on jamero lapalap akan, o kaun pan im en kaudok, o jaumaj akan, me ko don i: Dueta lolap amen, me komail koko don, wa kodlaj o katiu kai?
53 ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.
Ni ran karoj nai ian komail nan im en kaudok, a komail jota man jair ia, pwe anjau wet omail anjau o manaman en rotorot.
54 ಆಗ ಅವರು ಯೇಸುವನ್ನು ಬಂಧಿಸಿ, ಮಹಾಯಾಜಕನ ಭವನಕ್ಕೆ ಕರೆದುಕೊಂಡು ಬಂದರು. ಪೇತ್ರನೋ ದೂರದಿಂದ ಹಿಂಬಾಲಿಸಿದನು.
Re ap jaikidi i o kalualon on nan im en jamero lapalap o, a Petruj idauenla doowei jan.
55 ಅವರು ಭವನದ ಹೊರಾಂಗಣದ ನಡುವೆ ಬೆಂಕಿಮಾಡಿ, ಅದರ ಸುತ್ತಲೂ ಒಟ್ಟಾಗಿ ಕುಳಿತುಕೊಂಡಾಗ ಪೇತ್ರನೂ ಅವರ ಸಂಗಡ ಸೇರಿ ಕುಳಿತುಕೊಂಡನು.
Irail ap jaunda kijiniai eu nan waron en kel o mod pena, a Petruj mondi nan pun arail.
56 ಆದರೆ ಒಬ್ಬ ದಾಸಿಯು ಬೆಂಕಿಯ ಬಳಿಯಲ್ಲಿ ಕುಳಿತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ, “ಈ ಮನುಷ್ಯನು ಸಹ ಯೇಸುವಿನ ಸಂಗಡ ಇದ್ದವನು,” ಎಂದಳು.
A lidu men kilan i a momod impan kijiniai o kankakil i indada:
57 ಆದರೆ ಪೇತ್ರನು ಅಲ್ಲಗಳೆದು, “ಅಮ್ಮಾ, ನಾನು ಯೇಸುವನ್ನು ಅರಿಯೆನು,” ಎಂದನು.
let et pil ian i. I ari kamam kin i indada: Li, i jaja i.
58 ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಪೇತ್ರನನ್ನು ಕಂಡು, “ನೀನು ಸಹ ಅವರಲ್ಲಿ ಒಬ್ಬನು,” ಎಂದನು. ಅದಕ್ಕೆ ಪೇತ್ರನು, “ಇಲ್ಲಪ್ಪ, ನಾನಲ್ಲ,” ಎಂದನು.
A mur kij amen kilan i indada: Koe pil amen irail. A Petruj indada: O kaidin nai!
59 ಹೆಚ್ಚು ಕಡಿಮೆ ಒಂದು ತಾಸು ಕಳೆದನಂತರ ಮತ್ತೊಬ್ಬನು, “ನಿಜವಾಗಿಯೂ ಇವನು ಸಹ ಯೇಸುವಿನೊಂದಿಗೆ ಇದ್ದವನು. ಏಕೆಂದರೆ ಇವನು ಗಲಿಲಾಯದವನೇ,” ಎಂದನು.
Kadekadeo murin auer eu amen katitiki indada: Melel i men et ian i, pwe i kijan men Kaliaa.
60 ಆದರೆ ಪೇತ್ರನು, “ಅಯ್ಯಾ, ನೀನು ಏನು ಹೇಳುತ್ತೀಯೋ ನನಗೆ ಅರ್ಥವಾಗುತ್ತಾಯಿಲ್ಲ,” ಎಂದನು. ಹೀಗೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
A Petruj indada: O i poneponeki om kajokajoi! A pitipit ni a lokelokaia malek ap kakoroteda.
61 ಆಗ ಕರ್ತದೇವರು ಹಿಂದಿರುಗಿ ಪೇತ್ರನ ಕಡೆಗೆ ದಿಟ್ಟಿಸಿ ನೋಡಿದರು. “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ,” ಎಂದು ಕರ್ತದೇವರು ತನಗೆ ಹೇಳಿದ್ದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು
Kaun ap kotin jaupeido majani Petruj. Petruj ap tamanda majan en Kaun, duen a kotin majani on i: Mon malek kakorot, koe pan kamam kin ia pan jilepak.
62 ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.
Petruj ari koieila janejan kaualap.
63 ಯೇಸುವನ್ನು ಕಾಯುತ್ತಿದ್ದ ಜನರು, ಹಾಸ್ಯಮಾಡಿ ಅವರನ್ನು ಹೊಡೆದರು.
A ol oko, me kolekol i, lalaue o woki i.
64 ಇದಲ್ಲದೆ ಅವರು ಯೇಸುವಿನ ಕಣ್ಣಿಗೆ ಬಟ್ಟೆ ಕಟ್ಟಿ, ಅವರ ಮುಖದ ಮೇಲೆ ಹೊಡೆದು ಯೇಸುವಿಗೆ, “ನಿನ್ನನ್ನು ಹೊಡೆದವರು ಯಾರು? ಪ್ರವಾದನೆ ಹೇಳು,” ಎಂದರು.
Irail lao perala jilan i, ap idedok re a indada: Kopada, ij i, me pikir uk ada?
65 ಅವರು ಯೇಸುವಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳನ್ನಾಡಿದರು.
O jon en lalaue toto, me re ki on i.
66 ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,
A lao ran pajan jaumaj akan o jamero lapalap o jaunkawewe kan ap pokon pena o kalua i don nan arail kapun.
67 “ನೀನು ಆ ಕ್ರಿಸ್ತನೋ? ನಮಗೆ ಹೇಳು,” ಎಂದರು. ಯೇಸು ಅವರಿಗೆ, “ನಾನು ನಿಮಗೆ ಹೇಳಿದರೂ ನೀವು ನಂಬುವುದಿಲ್ಲ.
Indada: Ma koe Krijtuj, ap katiti on kit! A kotin majani on irail: Ma I pan indai on komail, komail jota pan kamelele;
68 ನಾನು ನಿಮ್ಮನ್ನು ಕೇಳಿದರೂ ನೀವು ಉತ್ತರ ಕೊಡುವುದಿಲ್ಲ.
A ma I pan idok, komail jota pan japen, o pil jota lapwa ia da.
69 ಆದರೆ ಇಂದಿನಿಂದ ಮನುಷ್ಯಪುತ್ರನಾದ ನಾನು ಸರ್ವಶಕ್ತರಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡಿರುವೆನು,” ಎಂದರು.
Ari, jan met Nain aramaj pan mondi ni pali maun en rojon en Kot.
70 ಆಗ ಅವರೆಲ್ಲರೂ, “ಹಾಗಾದರೆ ನೀನು ದೇವರ ಪುತ್ರನೋ?” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, “ನಾನೇ ಆತನು ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಉತ್ತರಕೊಟ್ಟರು.
Ir karoj ap idok: Ari, japwilim en Kot koe? A a kotin majani on irail: Komail me indada, pwe nai i.
71 ಆಗ ಅವರು, “ನಮಗೆ ಇನ್ನೇನು ಸಾಕ್ಷಿ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವಲ್ಲಾ?” ಎಂದರು.
Irail indada: Ari, menda apot kadede? Pwe pein kitail rona jan nan au a.

< ಲೂಕನು 22 >