< ಲೂಕನು 5 >

1 ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.
Eines Tages stand er am Ufer des Sees Genezaret. Das Volk umringte ihn, um Gottes Wort zu hören.
2 ಯೇಸು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡರು. ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
Da sah er zwei Boote am Ufer liegen; die Fischer aber waren ausgestiegen und reinigten ihre Hochseenetze.
3 ಅವುಗಳಲ್ಲಿ ಸೀಮೋನನ ದೋಣಿಯನ್ನು, ಯೇಸು ಹತ್ತಿ ಅದನ್ನು ದಡದಿಂದ ಸ್ವಲ್ಪ ದೂರ ನೂಕಬೇಕೆಂದು ಅವನನ್ನು ಕೇಳಿಕೊಂಡರು. ಆಮೇಲೆ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಜನರಿಗೆ ಬೋಧಿಸಿದರು.
Er trat in eins der Boote und bat Simon, dem es gehörte, eine kleine Strecke in den See hinauszurudern. Dann setzte er sich in dem Boot nieder und lehrte von da aus die Leute.
4 ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ, ಮೀನು ಹಿಡಿಯುವುದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ,” ಎಂದರು.
Als er seine Rede beendet hatte, sprach er zu Simon: "Fahr mitten in den See und werft dort eure Netze zum Fangen aus!"
5 ಅದಕ್ಕೆ ಉತ್ತರವಾಗಿ ಸೀಮೋನನು ಯೇಸುವಿಗೆ, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಏನೂ ಸಿಕ್ಕಲಿಲ್ಲ. ಆದರೂ ನಿಮ್ಮ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ,” ಎಂದು ಹೇಳಿದನು.
Simon antwortete ihm: "Meister, wir haben uns die ganze Nacht gemüht und nichts gefangen; doch auf dein Wort will ich die Netze auswerfen."
6 ಅವರು ಅದರಂತೆ ಬಲೆ ಹಾಕಿದಾಗ, ಮೀನಿನ ದೊಡ್ಡ ರಾಶಿಯನ್ನು ಹಿಡಿದರು ಅವರ ಬಲೆಯು ಹರಿಯುವಂತಾಯಿತು.
Sie taten es und fingen eine solche Menge Fische, daß ihre Netze reißen wollten.
7 ಆಗ ಬೇರೆ ದೋಣಿಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆಮಾಡಿದರು. ಪಾಲುಗಾರರು ಬಂದು ಎರಡು ದೋಣಿಗಳನ್ನು ತುಂಬಿಸಲಾಗಿ ಅವು ಮುಳುಗಲಾರಂಭಿಸಿದವು.
Da winkten sie ihren Genossen im anderen Boot, sie möchten kommen und ihnen helfen. Sie kamen, und nun füllte man beide Boote, so daß sie zu sinken drohten. Als Simon Petrus das sah, fiel er vor Jesus nieder und rief aus:
8 ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.
"Herr, gehe weg von mir; ich bin ein sündiger Mensch!"
9 ಯಾಕಂದರೆ, ಅವರು ಹಿಡಿದ ಮೀನುಗಳ ರಾಶಿಯನ್ನು ಕಂಡು ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
Denn über diesen Fang, den sie gemacht, waren er und alle seine Gefährten verwundert und entsetzt.
10 ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ, ಯೋಹಾನರೂ ಹಾಗೆಯೇ ವಿಸ್ಮಯಗೊಂಡಿದ್ದರು. ಆಗ ಯೇಸು ಸೀಮೋನನಿಗೆ, “ಹೆದರಬೇಡ; ಇಂದಿನಿಂದ ನೀನು ದೇವರಿಗಾಗಿ ಮನುಷ್ಯರನ್ನೇ ಹಿಡಿಯುವವನಾಗಿರುವೆ,” ಎಂದರು.
Ebenso ging es Jakobus und Johannes, des Zebedäus Söhnen, die Simons Gehilfen waren. Doch Jesus sprach zu Simon: "Sei ohne Furcht! Von nun an sollst du Menschen fangen."
11 ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಎಲ್ಲವನ್ನು ಬಿಟ್ಟು, ಯೇಸುವನ್ನೇ ಹಿಂಬಾಲಿಸಿದರು.
Da brachten sie ihre Boote ans Land, verließen alles und folgten ihm. Ein andermal weilte Jesus in einer Stadt.
12 ಯೇಸು ಒಂದು ಪಟ್ಟಣದಲ್ಲಿದ್ದಾಗ, ಮೈಯೆಲ್ಲಾ ಕುಷ್ಠರೋಗವಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡಬಿದ್ದು ಅವರಿಗೆ, “ಸ್ವಾಮಿ, ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.
Da war ein Mann voller Aussatz. Als der Jesus sah, fiel er vor ihm auf sein Antlitz nieder und bat ihn: "Herr, wenn du willst, so kannst du mich reinigen."
13 ಯೇಸು ತಮ್ಮ ಕೈಚಾಚಿ ಅವನನ್ನು ಮುಟ್ಟಿ ಅವನಿಗೆ, “ನನಗೆ ಮನಸ್ಸಿದೆ, ನೀನು ಶುದ್ಧನಾಗು!” ಎಂದು ಹೇಳಿದರು. ಕೂಡಲೇ ಆ ಕುಷ್ಠವು ಅವನನ್ನು ಬಿಟ್ಟುಹೋಯಿತು.
Jesus streckte seine Hand aus, rührte ihn an und sprach: "Ich will es, sei gereinigt!" Sofort wich der Aussatz von ihm.
14 ಆಗ ಯೇಸು ಅವನಿಗೆ, “ಇದನ್ನು ನೀನು ಯಾರಿಗೂ ಹೇಳಬೇಡ, ಆದರೆ ನೀನು ಗುಣಹೊಂದಿದ್ದಕ್ಕೆ ಜನರಿಗೆ ಸಾಕ್ಷಿಯಾಗಿರುವಂತೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆ ಅಪ್ಪಣೆ ಕೊಟ್ಟಂತೆ ಅರ್ಪಿಸು,” ಎಂದು ಆಜ್ಞಾಪಿಸಿದರು.
Jesus gebot ihm, kein Wort davon zu reden. "Doch", so fügte er hinzu, "geh hin, zeige dich dem Priester und bring für deine Reinigung das Opfer, wie es Mose vorgeschrieben hat, zum Zeugnis für die Leute!"
15 ಆದರೂ ಯೇಸುವಿನ ವಿಷಯವು, ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ಅವರಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ದೊಡ್ಡ ಸಮೂಹಗಳು ಕೂಡಿ ಬಂದವು.
Das Gerücht von ihm verbreitete sich aber immer weiter, und die Leute eilten in großen Scharen herbei, um ihn zu hören und sich von ihren Krankheiten heilen zu lassen.
16 ಆದರೆ ಯೇಸು ತಮ್ಮನ್ನು ಪ್ರತ್ಯೇಕಿಸಿಕೊಂಡು ಎಂದಿನಂತೆ ಏಕಾಂತ ಸ್ಥಳಕ್ಕೆ ಹೋಗಿ ಪ್ರಾರ್ಥಿಸುತ್ತಿದ್ದರು.
Doch er hielt sich in der Einsamkeit verborgen, um dort zu beten.
17 ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು.
Als er eines Tages lehrte, waren die Pharisäer und Gesetzeslehrer zugegen, die aus allen Orten Galiläas und Judäas und aus Jerusalem gekommen waren. Des Herrn Kraft war gerade wirksam, daß er Kranke heilte,
18 ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯಲ್ಲಿ ಹೊತ್ತುಕೊಂಡು ಬಂದು, ಒಳಗೆ ಯೇಸುವಿನ ಎದುರಿಗೆ ತರುವುದಕ್ಕೆ ಪ್ರಯತ್ನಿಸುತ್ತಿದ್ದರು.
als einige Männer einen Gelähmten auf einem Tragbett brachten. Den suchten sie in das Haus zu bringen und vor Jesus niederzusetzen.
19 ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ, ಮನೆಯ ಮೇಲೆ ಹೋಗಿ ಹೆಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ಯೇಸುವಿನ ಮುಂದೆ ಇಳಿಸಿದರು.
Aber der vielen Menschen wegen war es ihnen unmöglich, ihn hineinzutragen. Deshalb stiegen sie auf das Dach und ließen ihn samt dem Bett durch die Ziegel mitten unter die Leute unmittelbar vor Jesus nieder.
20 ಯೇಸು ಅವರ ವಿಶ್ವಾಸವನ್ನು ಕಂಡು ಅವನಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದು ಹೇಳಿದರು.
Als Jesus ihren Glauben sah, sprach er: "Mensch, deine Sünden sind dir vergeben!"
21 ಆಗ ಫರಿಸಾಯರೂ ನಿಯಮ ಬೋಧಕರೂ, “ದೇವದೂಷಣೆಯನ್ನು ಮಾಡುವುದಕ್ಕೆ ಈತನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮಲ್ಲಿ ಮಾತನಾಡಲಾರಂಭಿಸಿದರು.
Da begannen die Schriftgelehrten und die Pharisäer bei sich zu denken: "Was ist das für eine Mann? Er lästert ja Gott! Wer kann Sünden vergeben als Gott allein?"
22 ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವುದೇನು?
Jesus aber durchschaute ihre Gedanken und sprach zu ihnen:
23 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ?
"Was denkt ihr da in euern Herzen? Was ist leichter, zu sagen: 'Deine Sünden sind dir vergeben' oder das Wort zu sprechen: 'Steh auf und wandle'?
24 ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
Ihr sollt aber sehen, daß der Menschensohn die Vollmacht hat, auf Erden Sünden zu vergeben." Nun wandte er sich zu dem Gelähmten und sprach: "Ich sage dir: Steh auf, nimm dein Bett und geh nach Hause!"
25 ಕೂಡಲೇ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೊರಟುಹೋದನು.
Sofort stand er vor ihren Augen auf, nahm sein Bett, worauf er gelegen, und ging Gott preisend in sein Haus zurück.
26 ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು.
Von Staunen ergriffen, priesen alle Gott und, von heiliger Scheu erfüllt, bekannten sie: "Wir haben heute wunderbare Dinge erlebt!"
27 ಇವುಗಳಾದ ಮೇಲೆ, ಯೇಸು ಹೊರಟುಹೋಗಿ ತೆರಿಗೆಯ ಕಛೇರಿಯಲ್ಲಿ ಕುಳಿತುಕೊಂಡಿದ್ದ ಲೇವಿ ಎಂಬ ಹೆಸರುಳ್ಳ ಒಬ್ಬ ಸುಂಕದವನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.
Dann verließ Jesus das Haus und sah einen Zöllner namens Levi vor seinem Zollhaus sitzen. Zu dem sprach er: "Folge mir nach!"
28 ಲೇವಿ ಎಲ್ಲವನ್ನು ಬಿಟ್ಟು ಎದ್ದು ಯೇಸುವನ್ನು ಹಿಂಬಾಲಿಸಿದನು.
Da stand er auf, verließ alles und folgte ihm.
29 ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಯೇಸುವಿಗೆ ದೊಡ್ಡ ಔತಣವನ್ನು ಮಾಡಿಸಲು, ಬಹಳ ಜನ ಸುಂಕದವರು ಮತ್ತು ಇತರರು ಯೇಸುವಿನೊಂದಿಗೆ ಊಟಮಾಡುತ್ತಿದ್ದರು.
Und Levi gab Jesus zu Ehren ein großes Festmahl in seinem Haus. Daran nahmen außer Jesus und seinen Jüngern auch viele Zöllner und andere Gäste teil.
30 ಆದರೆ ಫರಿಸಾಯರೂ ಅವರ ಗುಂಪಿಗೆ ಸೇರಿದ ನಿಯಮ ಬೋಧಕರೂ ಯೇಸುವಿನ ವಿರೋಧವಾಗಿ ಗೊಣಗಾಡುತ್ತಾ ಶಿಷ್ಯರಿಗೆ, “ನೀವು ಏಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ?” ಎಂದು ಕೇಳಿದರು.
Darüber murrten die Pharisäer und die Schriftgelehrten, die ihrer Richtung angehörten, im Gespräch mit seinen Jüngern. "Warum", so fragten sie, "eßt und trinkt ihr denn mit solchen Zöllnern und Sündern?"
31 ಅದಕ್ಕೆ ಯೇಸು, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.
Jesus antwortete ihnen: "Die Gesunden bedürfen des Arztes nicht, sondern die Kranken.
32 ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನೇ ದೇವರ ಕಡೆಗೆ ತಿರುಗಿಕೊಳ್ಳುವಂತೆ ಕರೆಯಲು ಬಂದೆನು,” ಎಂದರು.
Ich bin nicht gekommen, um Gerechte zur Sinnesänderung zu rufen, sondern Sünder."
33 ಕೆಲವರು ಯೇಸುವಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ, ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ, ಆದರೆ ನಿಮ್ಮ ಶಿಷ್ಯರು ಏಕೆ ತಿಂದು ಕುಡಿಯುತ್ತಾರೆ?” ಎಂದು ಕೇಳಿದರು.
Weiter sprachen sie zu ihm: "Die Jünger des Johannes fasten so oft und beten, und ebenso die Jünger der Pharisäer; doch deine Jünger essen und trinken (ganz unbedenklich)."
34 ಅದಕ್ಕೆ ಯೇಸು, “ಮದುಮಗನು ಮದುವೆ ಅತಿಥಿಗಳ ಸಂಗಡವಿರುವಾಗ ಅವರನ್ನು ಉಪವಾಸವಿರಿಸಲಾದೀತೆ?
Jesus sprach zu ihnen: "Könnt ihr denn die Hochzeitsgäste zum Fasten nötigen, solange der Bräutigam bei ihnen ist?
35 ಆದರೆ ಮದುಮಗನನ್ನು ಅವರಿಂದ ತೆಗೆದುಕೊಂಡು ಹೋಗುವ ದಿವಸಗಳು ಬರುವುವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು,” ಎಂದು ಹೇಳಿದರು.
Aber es kommt die Zeit dafür: wenn ihnen der Bräutigam entrissen ist, dann werden sie fasten."
36 ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ.
Er sagte ihnen auch ein Gleichnis: "Niemand schneidet einen Flicken von einem neue Kleid und setzt ihn auf ein altes. Sonst zerreißt er das neue Kleid, und zu dem alten paßt der Flicken vom neuen nicht.
37 ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಒಡೆದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ.
Es gießt auch niemand neuen Wein in alte Schläuche. Sonst zerreißt der neue Wein die Schläuche: dann fließt er aus, und die Schläuche sind verloren.
38 ಆದರೆ, ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ಹಾಕಿಡಬೇಕು.
Man muß vielmehr neuen Wein in neue Schläuche gießen.
39 ಯಾರೂ ಹಳೆಯ ದ್ರಾಕ್ಷಾರಸವನ್ನು ಕುಡಿದ ಮೇಲೆ ಹೊಸದನ್ನು ಅಪೇಕ್ಷಿಸುವುದಿಲ್ಲ, ಏಕೆಂದರೆ ಅವರು, ‘ಹಳೆಯದೇ ಉತ್ತಮವಾದದ್ದು,’ ಎನ್ನುವರು,” ಎಂದರು.
Und niemand, der alten Wein getrunken hat, mag neuen. Denn er sagt: der alte ist besser."

< ಲೂಕನು 5 >