< ಮಲಾಕಿಯನು 4 >

1 “ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. 2 ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ. 3 ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. 4 “ನನ್ನ ಸೇವಕನಾದ ಮೋಶೆಯ ನಿಯಮವನ್ನು ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ವಿಧಿ ನಿಯಮಗಳನ್ನೂ ಜ್ಞಾಪಕಮಾಡಿಕೊಳ್ಳಿರಿ. 5 “ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು. 6 ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಯರ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಯರ ಕಡೆಗೂ ತಿರುಗಿಸುವನು.”

< ಮಲಾಕಿಯನು 4 >