< ಮಾರ್ಕನು 5 >

1 ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು.
I przeprawili się za morze do krainy Gadareńczyków.
2 ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು.
A gdy on wyszedł z łodzi, zaraz wybiegł mu [naprzeciw] z grobowców człowiek mający ducha nieczystego.
3 ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ.
Mieszkał on w grobowcach i nawet łańcuchami nikt nie mógł go związać.
4 ಅನೇಕ ಸಾರಿ ಅವನ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದ್ದರೂ ಅವನು ಅವುಗಳನ್ನು ಕಿತ್ತೆಸೆದು, ಬೇಡಿಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಯಲ್ಲಿಡುವಷ್ಟು ಬಲ ಯಾರಿಗೂ ಇರಲಿಲ್ಲ.
Często bowiem był wiązany pętami i łańcuchami, ale rwał łańcuchy i kruszył pęta, i nikt nie mógł go poskromić.
5 ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು.
A zawsze, we dnie i w nocy, przebywał w górach i grobowcach, krzycząc i tłukąc siebie kamieniami.
6 ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ,
Gdy więc zobaczył Jezusa z daleka, przybiegł i oddał mu pokłon;
7 ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.
A wołając donośnym głosem, powiedział: Cóż mam z tobą, Jezusie, Synu Boga najwyższego? Zaklinam cię na Boga, abyś mnie nie dręczył.
8 ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು.
Powiedział mu bowiem: Wyjdź, duchu nieczysty, z tego człowieka!
9 ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ, “ನನ್ನ ಹೆಸರು ಸೇನೆ, ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದು ಹೇಳಿದನು.
I zapytał go: Jak ci na imię? A on odpowiedział: Na imię mi Legion, bo jest nas wielu.
10 ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು.
I prosił go bardzo, aby nie wyganiał ich z tej krainy.
11 ಹತ್ತಿರದಲ್ಲಿದ್ದ ಗುಡ್ಡದ ಸಮೀಪದಲ್ಲಿ ಹಂದಿಗಳ ಒಂದು ದೊಡ್ಡ ಹಿಂಡು ಮೇಯುತ್ತಿತ್ತು.
A pasło się tam w pobliżu góry wielkie stado świń.
12 “ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.
I wszystkie te demony prosiły go: Poślij nas w te świnie, abyśmy [mogły] w nie wejść.
13 ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.
I Jezus zaraz im pozwolił. A duchy nieczyste, wyszedłszy, weszły w świnie. Wtedy stado, liczące około dwóch tysięcy, ruszyło pędem po urwisku do morza i utonęło w nim.
14 ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು.
Ci zaś, którzy paśli świnie, uciekli i opowiedzieli [o tym] w mieście i we wsiach. I wyszli [ludzie], aby zobaczyć, co się stało.
15 ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು.
Przyszli więc do Jezusa i zobaczyli tego, który był opętany, w którym był legion [demonów], jak siedział ubrany i przy zdrowych zmysłach. I bali się.
16 ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು.
A ci, którzy to widzieli, opowiedzieli im, co się stało z opętanym, a [także] o świniach.
17 ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು.
Wtedy zaczęli go prosić, aby odszedł z ich granic.
18 ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು.
A gdy wsiadł do łodzi, prosił go ten, który był opętany, aby [mógł] przy nim zostać.
19 ಯೇಸು ಅದಕ್ಕೊಪ್ಪದೆ ಅವನಿಗೆ, “ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು,” ಎಂದರು.
Lecz Jezus mu nie pozwolił, ale powiedział: Idź do domu, do swoich, i opowiedz im, jak wielkie rzeczy Pan ci uczynił i jak się nad tobą zmiłował.
20 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
Odszedł więc i zaczął w Dekapolu opowiadać, jak wielkie rzeczy Jezus mu uczynił. I wszyscy się dziwili.
21 ಯೇಸು ಪುನಃ ದೋಣಿಯಲ್ಲಿ ಆಚೆಯ ದಡವನ್ನು ಮುಟ್ಟಿದಾಗ, ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ಸೇರಿ ಬಂದರು.
A gdy Jezus przeprawił się z powrotem w łodzi na drugą stronę, zebrało się wokół niego mnóstwo ludzi. A [on] był nad morzem.
22 ಯೇಸು ಸರೋವರದ ದಡದಲ್ಲಿದ್ದಾಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನು ಅಲ್ಲಿಗೆ ಬಂದು ಯೇಸುವನ್ನು ಕಂಡು ಅವರ ಪಾದಕ್ಕೆ ಬಿದ್ದು,
Wtedy przyszedł jeden z przełożonych synagogi, imieniem Jair, a gdy go zobaczył, padł mu do nóg.
23 “ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು.
I prosił go usilnie: Moja córeczka umiera. Przyjdź, połóż na nią ręce, aby została uzdrowiona, a będzie żyła.
24 ಆಗ ಯೇಸು ಅವನೊಂದಿಗೆ ಹೋದರು. ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು.
I poszedł z nim. Szło zaś za nim mnóstwo ludzi, którzy na niego napierali.
25 ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು.
Wtedy pewna kobieta, która od dwunastu lat cierpiała na upływ krwi;
26 ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು.
I wiele wycierpiała od licznych lekarzy, i wydała wszystko, co miała, a nic jej nie pomogło, przeciwnie, pogarszało jej się;
27 ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
Usłyszawszy o Jezusie, podeszła w tłumie od tyłu i dotknęła jego szaty.
28 ಏಕೆಂದರೆ, “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದುಕೊಂಡಿದ್ದಳು.
Mówiła bowiem: Jeśli dotknę choćby jego szaty, będę zdrowa.
29 ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.
I natychmiast ustał jej upływ krwi, i poczuła w ciele, że została uzdrowiona ze swojej choroby.
30 ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದರು.
A Jezus od razu poznał, że wyszła z niego moc, odwrócił się do tłumu i zapytał: Kto dotknął moich szat?
31 ಯೇಸುವಿನ ಶಿಷ್ಯರು ಅವರಿಗೆ, “ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?” ಎಂದರು.
Odpowiedzieli mu jego uczniowie: Widzisz, że tłum na ciebie napiera, a pytasz: Kto mnie dotknął?
32 ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು.
I spojrzał wokoło, aby zobaczyć tę, która to uczyniła.
33 ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು.
Wtedy kobieta ze strachem i z drżeniem, wiedząc, co się z nią stało, podeszła, upadła przed nim i wyznała mu całą prawdę.
34 ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.
A on powiedział do niej: Córko, twoja wiara cię uzdrowiła, idź w pokoju i bądź uzdrowiona ze swojej choroby.
35 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಕೆಲವರು ಬಂದು, “ನಿನ್ನ ಮಗಳು ತೀರಿಹೋದಳು. ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದರು.
A gdy jeszcze mówił, przyszli ludzie od przełożonego synagogi i powiedzieli: Twoja córka umarła. Czemu jeszcze trudzisz Nauczyciela?
36 ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, “ಭಯಪಡಬೇಡ ನಂಬಿಕೆ ಮಾತ್ರ ಇರಲಿ,” ಎಂದರು.
Ale Jezus, gdy tylko usłyszał, co mówili, powiedział do przełożonego synagogi: Nie bój się, tylko wierz!
37 ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ.
I nie pozwolił iść za sobą nikomu oprócz Piotra, Jakuba i Jana, brata Jakuba.
38 ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು.
A gdy przyszedł do domu przełożonego synagogi, zobaczył [tam] zamieszanie oraz płaczących i bardzo zawodzących.
39 ಯೇಸು ಮನೆಯೊಳಗೆ ಹೋಗಿ, “ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ,” ಎಂದರು.
Wszedłszy więc, powiedział do nich: Dlaczego robicie zamieszanie i płaczecie? Dziewczynka nie umarła, tylko śpi.
40 ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು. ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು.
I naśmiewali się z niego. Ale on wyrzucił wszystkich, wziął ze sobą ojca i matkę dziewczynki oraz tych, którzy przy nim byli, i wszedł tam, gdzie leżała dziewczynka.
41 ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.
Ujął dziewczynkę za rękę i powiedział do niej: Talitha kumi! – co się tłumaczy: Dziewczynko, mówię ci, wstań!
42 ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು.
I natychmiast dziewczynka wstała i chodziła, miała bowiem dwanaście lat. I ogarnęło ich wielkie zdumienie.
43 ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು.
Wtedy przykazał im surowo, aby nikt się o tym nie dowiedział, i polecił, aby dano jej jeść.

< ಮಾರ್ಕನು 5 >