< ಮತ್ತಾಯನು 4 >

1 ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.
তখন যীশু শয়তানের মাধ্যমে পরীক্ষিত হবার জন্য, পবিত্র আত্মার মাধ্যমে মরূপ্রান্তে এলেন।
2 ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.
আর তিনি চল্লিশ দিন রাত উপবাস থেকে শেষে ক্ষুধিত হলেন।
3 ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.
তখন পরীক্ষক কাছে এসে তাঁকে বললেন, “তুমি যদি ঈশ্বরের পুত্র হও, তবে বল, যেন এই পাথরগুলো রুটি হয়ে যায়।”
4 ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’” ಎಂದರು.
কিন্তু তিনি উত্তর করে বললেন, “লেখা আছে, মানুষ শুধুমাত্র রুটিতে বাঁচবে না, কিন্তু ঈশ্বরের মুখ থেকে যে প্রত্যেক কথা বের হয়, তাতেই বাঁচবে।”
5 ಆಮೇಲೆ ಸೈತಾನನು ಯೇಸುವನ್ನು ಪವಿತ್ರ ನಗರಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ,
তখন শয়তান তাঁকে পবিত্র শহরে নিয়ে গেল এবং ঈশ্বরের মন্দিরের চূড়ার উপরে দাঁড় করাল,
6 “ನೀನು ದೇವರ ಪುತ್ರನಾಗಿದ್ದರೆ, ಕೆಳಕ್ಕೆ ಧುಮುಕು. ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “‘ದೇವರು ನಿನ್ನ ವಿಷಯವಾಗಿ ತಮ್ಮ ದೂತರಿಗೆ ಆಜ್ಞಾಪಿಸುವರು, ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.
আর তাকে বলল “তুমি যদি ঈশ্বরের পুত্র হও, তবে নীচে ঝাঁপ দিয়ে পড়, কারণ লেখা আছে, তিনি নিজের দূতদের তোমার বিষয়ে আদেশ দেবেন, আর তাঁরা তোমাকে হাতে করে তুলে নেবেন, যদি তোমার পায়ে পাথরের আঘাত লাগে।”
7 ಅದಕ್ಕೆ ಯೇಸು, “‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು’ ಎಂಬುದನ್ನು ಸಹ ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
যীশু তাকে বললেন, “আবার এও লেখা আছে, তুমি নিজের ঈশ্বর প্রভুর পরীক্ষা করো না।”
8 ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ,
আবার শয়তান তাঁকে অনেক উঁচু এক পর্বতে নিয়ে গেল এবং পৃথিবীর সব রাজ্য ও সেই সবের ঐশ্বর্য্য দেখাল,
9 “ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವೆಲ್ಲವನ್ನು ನಿನಗೆ ಕೊಡುವೆನು,” ಎಂದನು.
আর তাঁকে বলল, “তুমি যদি উপুড় হয়ে আমাকে প্রণাম কর, এই সবই আমি তোমাকে দেব।”
10 ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
১০তখন যীশু তাকে বললেন, “দূর হও, শয়তান কারণ লেখা আছে, তোমার ঈশ্বর প্রভুকেই প্রণাম করবে, কেবল তাঁরই আরাধনা করবে।”
11 ಆಗ ಸೈತಾನನು ಯೇಸುವನ್ನು ಬಿಟ್ಟುಹೋದನು. ದೇವದೂತರು ಬಂದು ಅವರಿಗೆ ಉಪಚಾರ ಮಾಡಿದರು.
১১তখন শয়তান তাঁকে ছেড়ে চলে গেল, আর দেখ, দূতেরা কাছে এসে তাঁর সেবা করতে লাগলেন।
12 ಯೋಹಾನನು ಬಂಧಿತನಾದನೆಂದು ಕೇಳಿ, ಯೇಸು ಗಲಿಲಾಯಕ್ಕೆ ಹಿಂದಿರುಗಿದರು.
১২পরে যোহন গ্রেপ্তার হয়ে কারাগারে আছেন শুনে, তিনি গালীলে চলে গেলেন;
13 ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.
১৩আর নাসরৎ ছেড়ে সমুদ্রতীরে, সবূলূন ও নপ্তালির অঞ্চলে অবস্থিত কফরনাহূমে গিয়ে বাস করলেন;
14 ಹೀಗೆ ಪ್ರವಾದಿ ಯೆಶಾಯನ ಮುಖಾಂತರ ಹೇಳಿಸಿರುವ ಈ ಮಾತು ನೆರವೇರಿತು. ಅದೇನೆಂದರೆ:
১৪যেন যিশাইয় ভাববাদীর মাধ্যমে বলা এই কথা পূর্ণ হয়,
15 “ಜೆಬುಲೂನ್ ನಾಡು ಮತ್ತು ನೆಫ್ತಲೀಮ್ ನಾಡು, ಯೊರ್ದನ್ ನದಿಯ ಆಚೆ ಸರೋವರದ ಕಡೆ, ಯೆಹೂದ್ಯರಲ್ಲದವರಿರುವ ಗಲಿಲಾಯ ನಾಡು,
১৫“সবূলূন দেশ ও নপ্তালি দেশ, সমুদ্রের পথে, যর্দ্দনের অন্য পারে অযিহুদিদের গালীল,
16 ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”
১৬যে জাতি অন্ধকারে বসেছিল, তারা মহা আলো দেখতে পেল, যারা মৃত্যুর দেশে ও ছায়াতে বসেছিল, তাদের উপরে আলোর উদয় হল।”
17 ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.
১৭সেই থেকে যীশু প্রচার করতে শুরু করলেন; বলতে লাগলেন, মন পরিবর্তন কর, কারণ স্বর্গরাজ্য কাছাকাছি হল।
18 ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಪೇತ್ರ ಎನಿಸಿಕೊಂಡ ಸೀಮೋನನನ್ನೂ ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.
১৮একদিন যীশু গালীল সমুদ্রের তীর দিয়ে বেড়াতে বেড়াতে দেখলেন, দুই ভাই, শিমোন, যাকে পিতর বলে ও তার ভাই আন্দ্রিয় সমুদ্রে জাল ফেলছেন; কারণ তাঁরা জেলে ছিলেন।
19 ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.
১৯তিনি তাঁদের বললেন, “আমার সঙ্গে এস। আমি তোমাদের মানুষ ধরা শেখাব।”
20 ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
২০আর সঙ্গে সঙ্গেই তাঁরা জাল ফেলে দিয়ে তাঁর সঙ্গে গেলেন।
21 ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನನನ್ನು ಕಂಡರು. ಅವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಅವರನ್ನೂ ಕರೆದರು.
২১পরে তিনি সেখান থেকে আগে গিয়ে দেখলেন, আর দুই ভাই সিবদিয়ের পুত্র যাকোব ও তাঁর ভাই যোহন নিজেদের বাবা সিবদিয়ের সাথে নৌকায় বসে জাল ঠিক করছিলেন; তিনি তাঁদের ডাকলেন।
22 ಕೂಡಲೇ, ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
২২আর তখনই তাঁরা নৌকা ও নিজেদের বাবাকে পরিত্যাগ করে তাঁর অনুসরণ করলেন।
23 ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.
২৩পরে যীশু সমস্ত গালীলে ঘুরে বেড়াতে লাগলেন; তিনি লোকদের সমাজঘরে, সমাজঘরে শিক্ষা দিলেন ও রাজ্যের সুসমাচার প্রচার করলেন এবং লোকদের সব রকম রোগ ও সব রকম অসুখ ভালো করলেন।
24 ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.
২৪আর তাঁর কথা সমস্ত সুরিয়া অঞ্চলে ছড়িয়ে পড়ল এবং নানা প্রকার রোগ ও ব্যাধিতে হয়েছে এমন সমস্ত অসুস্থ লোক, ভূতগ্রস্ত, মৃগীরোগী ও পক্ষাঘাতী লোক সবাই, তাঁর কাছে এলো, আর তিনি তাদের সুস্থ করলেন।
25 ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಹಾಗೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಜನರು ದೊಡ್ಡ ಗುಂಪಾಗಿ ಯೇಸುವನ್ನು ಹಿಂಬಾಲಿಸಿದರು.
২৫আর গালীল থেকে, দিকাপলি, যিরুশালেম, যিহূদিয়া ও যর্দ্দনের অন্য পাড় থেকে প্রচুর লোক তাঁকে অনুসরণ করল।

< ಮತ್ತಾಯನು 4 >