< Jonas Propheta 1 >

1 Et factum est verbum Domini ad Ionam filium Amathi, dicens:
ಯೆಹೋವನು ಅಮಿತ್ತೈಯನ ಮಗನಾದ ಯೋನನಿಗೆ ಹೇಳಿದ್ದೇನೆಂದರೆ,
2 Surge, et vade in Niniven civitatem grandem, et prædica in ea: quia ascendit malitia eius coram me.
“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.
3 Et surrexit Ionas, ut fugeret in Tharsis a facie Domini, et descendit in Ioppen, et invenit navem euntem in Tharsis: et dedit naulum eius, et descendit in eam ut iret cum eis in Tharsis a facie Domini.
ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.
4 Dominus autem misit ventum magnum in mare: et facta est tempestas magna in mari, et navis periclitabatur conteri.
ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.
5 Et timuerunt nautæ, et clamaverunt viri ad deum suum: et miserunt vasa, quæ erant in navi, in mare, ut alleviaretur ab eis: et Ionas descendit ad interiora navis, et dormiebat sopore gravi.
ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.
6 Et accessit ad eum gubernator, et dixit ei: Quid tu sopore deprimeris? surge, invoca Deum tuum, si forte recogitet Deus de nobis, et non pereamus.
ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.
7 Et dixit vir ad collegam suum: Venite, et mittamus sortes, et sciamus quare hoc malum sit nobis. Et miserunt sortes: et cecidit sors super Ionam.
ಅನಂತರ ನಾವಿಕರೆಲ್ಲರು “ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ” ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು.
8 Et dixerunt ad eum: Indica nobis cuius causa malum istud sit nobis: quod est opus tuum? quæ terra tua? et quo vadis? vel ex quo populo es tu?
ಆಗ ಅವರು ಯೋನನಿಗೆ ಅಯ್ಯಾ, “ಈ ಕೇಡು ನಮಗೆ ಸಂಭವಿಸಲು ಕಾರಣವೇನು ಎಂಬುದನ್ನು ನೀನೇ ನಮಗೆ ತಿಳಿಸು; ನಿನ್ನ ವೃತ್ತಿ ಏನು? ನೀನು ಎಲ್ಲಿಂದ ಬಂದವನು? ನೀನು ಯಾವ ದೇಶದವನು?, ಯಾವ ಜನಾಂಗದವನು?” ಎಂದು ಅವನನ್ನು ಕೇಳಲು
9 Et dixit ad eos: Hebræus ego sum, et Dominum Deum cæli ego timeo, qui fecit mare et aridam.
ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ,
10 Et timuerunt viri timore magno, et dixerunt ad eum: Quid hoc fecisti? (Cognoverunt enim viri quod a facie Domini fugeret, quia indicaverat eis.)
೧೦ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು.
11 Et dixerunt ad eum: Quid faciemus tibi, et cessabit mare a nobis? quia mare ibat, et intumescebat.
೧೧ಆಗ ಸಮುದ್ರವು ಮತ್ತಷ್ಟು ಅಲ್ಲೋಲಕಲ್ಲೋಲವಾದ ಕಾರಣ ಅವರು ಯೋನನಿಗೆ “ಸಮುದ್ರವು ಶಾಂತವಾಗುವ ಹಾಗೆ ನಿನ್ನನ್ನು ಏನು ಮಾಡೋಣ?” ಎಂದು ಕೇಳಿದರು.
12 Et dixit ad eos: Tollite me, et mittite in mare, et cessabit mare a vobis: scio enim ego quoniam propter me tempestas hæc grandis venit super vos.
೧೨ಯೋನನು ಅವರಿಗೆ “ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ಆಗ ಸಮುದ್ರವು ಶಾಂತವಾಗುವುದು; ಈ ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು” ಎಂದು ಉತ್ತರಕೊಟ್ಟನು.
13 Et remigabant viri ut reverterentur ad aridam, et non valebant: quia mare ibat, et intumescebat super eos.
೧೩ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.
14 Et clamaverunt ad Dominum, et dixerunt: Quæsumus Domine, ne pereamus in anima viri istius, et ne des super nos sanguinem innocentem: quia tu Domine, sicut voluisti, fecisti.
೧೪ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು.
15 Et tulerunt Ionam, et miserunt in mare: et stetit mare a fervore suo.
೧೫ಆನಂತರ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ಭೋರ್ಗರೆಯುವುದನ್ನು ನಿಲ್ಲಿಸಿ ಶಾಂತವಾಯಿತು.
16 Et timuerunt viri timore magno Dominum, et immolaverunt hostias Domino, et voverunt vota.
೧೬ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.
17 Et præparavit Dominus piscem grandem ut deglutiret Ionam: et erat Ionas in ventre piscis tribus diebus, et tribus noctibus.
೧೭ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.

< Jonas Propheta 1 >