< 1 Kongebok 9 >

1 Da Salomo var ferdig med å bygge Herrens hus og kongens hus og alt det hans hu stod til å utføre,
ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ,
2 da åpenbarte Herren sig annen gang for Salomo, likesom han hadde åpenbaret sig for ham i Gibeon.
ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.
3 Og Herren sa til ham: Jeg har hørt din bønn og ydmyke begjæring som du bar frem for mitt åsyn; jeg har helliget dette hus som du har bygget, så jeg lar mitt navn bo der til evig tid, og mine øine og mitt hjerte skal være der alle dager.
ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.
4 Hvis du nu vandrer for mitt åsyn, som din far David gjorde, i hjertets renhet og i opriktighet, så du gjør alt det jeg har befalt dig, og holder mine bud og mine lover,
ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವುದಾದರೆ,
5 så vil jeg trygge din kongetrone i Israel til evig tid, således som jeg lovte din far David da jeg sa: Det skal aldri fattes en mann av din ætt på Israels trone.
ಇಸ್ರಾಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು. ‘ಇಸ್ರಾಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು’ ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
6 Men hvis I og eders barn vender eder bort fra mig og ikke holder de bud og lover som jeg har forelagt eder, men gir eder til å dyrke andre guder og tilbede dem,
ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ
7 så vil jeg utrydde Israel av det land jeg har gitt dem, og det hus jeg har helliget for mitt navn, vil jeg forkaste fra mitt åsyn, og Israel skal bli til et ordsprog og til en spott blandt alle folk.
ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.
8 Og skal dette hus enn bli høit så skal dog hver den som går forbi det, forferdes og spotte. og når nogen da spør: Hvorfor har Herren gjort således mot dette land og dette hus?
ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
9 da skal de svare: Fordi de forlot Herren sin Gud, som førte deres fedre ut av Egyptens land, og holdt sig til andre guder og tilbad dem og dyrket dem; derfor har Herren ført all denne ulykke over dem.
ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು.
10 Da nu de tyve år var til ende som Salomo hadde bygget på de to hus, Herrens hus og kongens hus,
೧೦ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.
11 gav kong Salomo tyve byer i Galilea til kongen i Tyrus Hiram, som hadde hjulpet ham med sedertre og cypresstre og gull, så meget han ønsket.
೧೧ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
12 Men da Hiram kom fra Tyrus for å se på de byer Salomo hadde gitt ham, syntes han ikke om dem.
೧೨ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ.
13 Han sa: Hvad er dette for byer du har gitt mig, min bror? Og han kalte dem Kabuls land; så heter de den dag idag.
೧೩ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೇ?” ಎಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.
14 Men Hiram hadde sendt kongen hundre og tyve talenter gull.
೧೪ಹೀರಾಮನು ಸೊಲೊಮೋನನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು.
15 Med de pliktarbeidere som kong Salomo uttok for å bygge Herrens hus og sitt eget hus og Millo og Jerusalems murer og Hasor og Megiddo og Geser, hadde det sig således:
೧೫ಸೊಲೊಮೋನನ ಬಿಟ್ಟೀ ಕೆಲಸದವರು ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಆಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಚೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ.
16 Farao, kongen i Egypten, hadde draget op og inntatt Geser og satt ild på det og drept kana'anittene som bodde i byen, og gitt den i medgift til sin datter, Salomos hustru;
೧೬ಐಗುಪ್ತದ ಅರಸನಾದ ಫರೋಹನು ಗೆಜೆರ್ ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ, ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ, ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಮದುವೆಯ ಉಡುಗೊರೆಯಾಗಿ ಕೊಟ್ಟಿದ್ದನು.
17 men Salomo bygget Geser op igjen, og likeså bygget han op Nedre-Bet-Horon
೧೭ಸೊಲೊಮೋನನು ಗೆಜೆರ್ ಪಟ್ಟಣದ ಹೊರತಾಗಿ ಕೆಳಗಿನ ಬೆತ್ ಹೋರೋನ್,
18 og Ba'alat og Tadmor i ørkenen der i landet,
೧೮ಯೆಹೂದದ ಅರಣ್ಯಪ್ರದೇಶದಲ್ಲಿರುವ ಬಾಲಾತ್ ಮತ್ತು ತಾಮಾರ್,
19 og alle de oplagsbyer han hadde, og byene for stridsvognene og byene for hestfolket og alt annet som han hadde lyst til å bygge, både i Jerusalem og på Libanon og i hele det land han rådet over.
೧೯ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.
20 Og alt det folk som var blitt tilbake av amorittene, hetittene, ferisittene, hevittene og jebusittene, folk som ikke var av Israels ætt -
೨೦ಇದಲ್ಲದೆ ಅವನು ಇಸ್ರಾಯೇಲರಿಂದ ಸಂಹೃತರಾದ ಅನ್ಯ ಜನರನ್ನೂ, ಕಾನಾನ್ ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ,
21 deres efterkommere, så mange som var blitt tilbake i landet efter dem fordi Israels barn ikke hadde maktet å slå dem med bann, dem uttok Salomo til arbeidspliktige træler, og det har de vært til denne dag.
೨೧ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.
22 Men av Israels barn gjorde Salomo ikke nogen til træl; de var hans krigsmenn og hans tjenere og høvdinger og drabanter og høvedsmenn for hans stridsvogner og hestfolk.
೨೨ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.
23 Salomos arbeidsformenn var fem hundre og femti i tallet; de rådet over de folk som utførte arbeidet.
೨೩ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು.
24 Så snart Faraos datter var flyttet op fra Davids stad til det hus som han hadde bygget for henne, gikk han i gang med å bygge Millo.
೨೪ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು.
25 Tre ganger om året ofret Salomo brennoffer og takkoffer på det alter han hadde bygget for Herren, og han brente røkelse ved det alter som stod for Herrens åsyn, og hadde nu huset ferdig.
೨೫ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು.
26 Kong Salomo lot også bygge skiber i Esjon-Geber, som ligger ved Elot på bredden av det Røde Hav i Edoms land.
೨೬ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.
27 Og Hiram sendte sine folk, sjøvant mannskap, på skibene sammen med Salomos folk.
೨೭ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.
28 De kom til Ofir og hentet gull derfra, fire hundre og tyve talenter, og førte det hjem til kong Salomo.
೨೮ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.

< 1 Kongebok 9 >