< اول سموئیل 2 >

و حنا دعا نموده، گفت: «دل من در خداوند وجد می‌نماید. و شاخ من در نزد خداوند برافراشته شده. و دهانم بر دشمنانم وسیع گردیده است. زیرا که در نجات تو شادمان هستم. ۱ 1
ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.
مثل یهوه قدوسی نیست. زیرا غیر از تو کسی نیست. و مثل خدای ما صخره‌ای نیست. ۲ 2
“ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.
سخنان تکبرآمیز دیگر مگویید. و غرور از دهان شما صادر نشود. زیرا یهوه خدای علام است. وبه او اعمال، سنجیده می‌شود. ۳ 3
“ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.
کمان جباران را شکسته است. و آنانی که می‌لغزیدند، کمر آنها به قوت بسته شد. ۴ 4
“ಶೂರರ ಬಿಲ್ಲುಗಳು ಮುರಿಯಲ್ಪಟ್ಟಿವೆ, ಎಡವಿದವರು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾರೆ.
سیرشدگان، خویشتن را برای نان اجیر ساختند. و کسانی که گرسنه بودند، استراحت یافتند. بلکه زن نازا هفت فرزند زاییده است. و آنکه اولادبسیار داشت، زبون گردیده. ۵ 5
ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.
خداوند می‌میراند و زنده می‌کند؛ به قبر فرودمی آورد و برمی خیزاند. (Sheol h7585) ۶ 6
“ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ. (Sheol h7585)
خداوند فقیر می‌سازد و غنی می‌گرداند؛ پست می‌کند و بلند می‌سازد. ۷ 7
ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.
فقیر را از خاک برمی افرازد. و مسکین را از مزبله برمی دارد تا ایشان را با امیران بنشاند. و ایشان راوارث کرسی جلال گرداند. زیرا که ستونهای زمین از آن خداوند است. و ربع مسکون را بر آنهااستوار نموده است. ۸ 8
ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.
پایهای مقدسین خود را محفوظ می‌دارد. اماشریران در ظلمت خاموش خواهند شد، زیرا که انسان به قوت خود غالب نخواهد آمد. ۹ 9
“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.
آنانی که با خداوند مخاصمه کنند، شکسته خواهند شد. او بر ایشان از آسمان صاعقه خواهدفرستاد. خداوند، اقصای زمین را داوری خواهدنمود، و به پادشاه خود قوت خواهد بخشید. وشاخ مسیح خود را بلند خواهد گردانید.» ۱۰ 10
೧೦“ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.”
پس القانه به خانه خود به راما رفت و آن پسر به حضور عیلی کاهن، خداوند را خدمت می‌نمود. ۱۱ 11
೧೧ಅನಂತರ ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.
و پسران عیلی از بنی بلیعال بودند وخداوند را نشناختند. ۱۲ 12
೧೨ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.
و عادت کاهنان با قوم این بود که چون کسی قربانی می‌گذرانید هنگامی که گوشت پخته می‌شد، خادم کاهن با چنگال سه دندانه در دست خود می‌آمد ۱۳ 13
೧೩ಯಜ್ಞವನ್ನರ್ಪಿಸುವುದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ, ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರುತ್ತಿದ್ದನು.
و آن را به تاوه یامرجل یا دیگ یا پاتیل فرو برده، هر‌چه چنگال برمی آورد کاهن آن را برای خود می‌گرفت، وهمچنین با تمامی اسرائیل که در آنجا به شیلوه می‌آمدند، رفتار می‌نمودند. ۱۴ 14
೧೪ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೆಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.
و نیز قبل ازسوزانیدن پیه، خادم کاهن آمده، به کسی‌که قربانی می‌گذرانید، می‌گفت: «گوشت به جهت کباب برای کاهن بده، زیرا گوشت پخته از تونمی گیرد بلکه خام.» ۱۵ 15
೧೫ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, “ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು” ಅನ್ನುವನು.
و آن مرد به وی می‌گفت: «پیه را اول بسوزانند و بعد هر‌چه دلت می‌خواهدبرای خود بگیر.» او می‌گفت: «نی، بلکه الان بده، والا به زور می‌گیرم.» ۱۶ 16
೧೬ಅರ್ಪಿಸುವವನು, ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದರೆ ಅವನು, “ಈಗಲೇ ಕೊಡಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು” ಎನ್ನುವನು.
پس گناهان آن جوانان به حضور خداوند بسیار عظیم بود، زیرا که مردمان هدایای خداوند را مکروه می‌داشتند. ۱۷ 17
೧೭ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.
و اما سموئیل به حضور خداوند خدمت می کرد، و او پسر کوچک بود و بر کمرش ایفودکتان بسته بود. ۱۸ 18
೧೮ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.
و مادرش برای وی جبه کوچک می‌ساخت، و آن را سال به سال همراه خودمی آورد، هنگامی که با شوهر خود برمی آمد تاقربانی سالیانه را بگذرانند. ۱۹ 19
೧೯ಅವನ ತಾಯಿಯು ಪ್ರತಿವರ್ಷವೂ ತನ್ನ ಗಂಡನ ಜೊತೆಯಲ್ಲಿ ಯಜ್ಞವನ್ನರ್ಪಿಸುವುದಕ್ಕೆ ಬರುವಾಗ ಒಂದು ಚಿಕ್ಕ ಅಂಗಿಯನ್ನು ಹೊಲಿದು ಅವನಿಗೆ ತಂದುಕೊಡುತ್ತಿದ್ದಳು.
و عیلی القانه وزنش را برکت داده، گفت: «خداوند تو را از این زن به عوض عاریتی که به خداوند داده‌ای، اولادبدهد.» پس به مکان خود رفتند. ۲۰ 20
೨೦ಏಲಿಯು ಎಲ್ಕಾನನಿಗೆ, “ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.
و خداوند از حنا تفقد نمود و او حامله شده، سه پسر و دو دختر زایید، و آن پسر، سموئیل به حضور خداوند نمو می‌کرد. ۲۱ 21
೨೧ಯೆಹೋವನು ಕಟಾಕ್ಷಿಸಿದ್ದರಿಂದ ಹನ್ನಳಿಗೆ ಮೂರು ಮಂದಿ ಗಂಡುಮಕ್ಕಳೂ, ಇಬ್ಬರು ಹೆಣ್ಣುಮಕ್ಕಳಾದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ಬೆಳೆದು ದೊಡ್ಡವನಾದನು.
و عیلی بسیار سالخورده شده بود، و هر‌چه پسرانش با تمامی اسرائیل عمل می‌نمودند، می‌شنید، و اینکه چگونه با زنانی که نزد در خیمه اجتماع خدمت می‌کردند، می‌خوابیدند. ۲۲ 22
೨೨ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲರಲ್ಲಿ ನಡೆಸುತ್ತಿರುವುದನ್ನೂ, ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರೊಡನೆ ಸಂಗಮಿಸುತ್ತಿರುವುದನ್ನೂ ಕೇಳಿ
پس به ایشان گفت: «چرا چنین کارها می‌کنید زیرا که اعمال بد شما را از تمامی این قوم می‌شنوم. ۲۳ 23
೨೩ಅವರಿಗೆ, “ಎಲ್ಲಾ ಜನರಿಂದಲೂ ನಿಮ್ಮ ದುಷ್ಕೃತ್ಯಗಳನ್ನು ಕೇಳುತ್ತೇನೆ. ಹೀಗೇಕೆ ಮಾಡುತ್ತೀರಿ?”
چنین مکنید‌ای پسرانم زیرا خبری که می‌شنوم خوب نیست، شما باعث عصیان قوم خداوند می‌باشید. ۲۴ 24
೨೪ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೆಯದಲ್ಲ.
اگر شخصی بر شخصی گناه ورزد خدا او را داوری خواهد کرد اما اگرشخصی بر خداوند گناه ورزد، کیست که برای وی شفاعت نماید؟» اما ایشان سخن پدر خود رانشنیدند، زیرا خداوند خواست که ایشان راهلاک سازد. ۲۵ 25
೨೫“ಮನುಷ್ಯನು ಮನುಷ್ಯರಿಗೆ ಅಪರಾಧಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಆದರೆ ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ, ಯಾಕೆಂದರೆ ಯೆಹೋವನು ಅವರನ್ನು ನಾಶಮಾಡಲು ನಿರ್ಧರಿಸಿದ್ದನು.
و آن پسر، سموئیل، نمو می‌یافت و هم نزدخداوند و هم نزد مردمان پسندیده می‌شد. ۲۶ 26
೨೬ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.
و مرد خدایی نزد عیلی آمده، به وی گفت: «خداوند چنین می‌گوید: آیا خود را بر خاندان پدرت هنگامی که ایشان در مصر در خانه فرعون بودند، ظاهر نساختم؟ ۲۷ 27
೨೭ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವನು ನಿನಗೆ ಹೇಳುವುದೇನಂದರೆ, ‘ಇಸ್ರಾಯೇಲರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ
و آیا او را از جمیع اسباط اسرائیل برنگزیدم تا کاهن من بوده، نزدمذبح من بیاید. و بخور بسوزاند و به حضور من ایفود بپوشد، وآیا جمیع هدایای آتشین بنی‌اسرائیل را به خاندان پدرت نبخشیدم؟ ۲۸ 28
೨೮ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.
پس چرا قربانی‌ها و هدایای مرا که در مسکن خود امر فرمودم، پایمال می‌کنید و پسران خود رازیاده از من محترم می‌داری، تا خویشتن را ازنیکوترین جمیع هدایای قوم من، اسرائیل فربه سازی. ۲۹ 29
೨೯ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’
بنابراین یهوه، خدای اسرائیل می‌گوید: البته گفتم که خاندان تو و خاندان پدرت به حضور من تا به ابد سلوک خواهند نمود، لیکن الان خداوند می‌گوید: حاشا از من! زیرا آنانی که مرا تکریم نمایند، تکریم خواهم نمود و کسانی که مرا حقیر شمارند، خوار خواهند شد. ۳۰ 30
೩೦ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.
اینک ایامی می‌آید که بازوی تو را و بازوی خاندان پدرتو را قطع خواهم نمود که مردی پیر در خانه تویافت نشود. ۳۱ 31
೩೧ಇಗೋ, ನಾನು ನಿನ್ನ ಮತ್ತು ನಿನ್ನ ಮನೆಯವರ ಭುಜಬಲವನ್ನು ಮುರಿಯುವ ದಿನಗಳು ಬರುವವು. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದಿಲ್ಲ.
و تنگی مسکن مرا خواهی دید، در هر احسانی که به اسرائیل خواهد شد، و مردی پیر در خانه تو ابد نخواهد بود. ۳۲ 32
೩೨ನಿನ್ನ ವೈರಿಯು ನನ್ನ ಮಂದಿರದಲ್ಲಿ ಸೇವೆಮಾಡುವುದನ್ನು ನೋಡುವಿ. ಇಸ್ರಾಯೇಲರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಪೂರ್ಣಾಯುಷ್ಯವನ್ನು ಹೊಂದಿ ಜೀವಿಸುವವರು ಇನ್ನು ಮುಂದೆ ಒಬ್ಬರಾದರು ಇರುವುದಿಲ್ಲ.
و شخصی رااز کسان تو که از مذبح خود قطع نمی نمایم برای کاهیدن چشم تو و رنجانیدن دلت خواهد بود، وجمیع ذریت خانه تو در جوانی خواهند مرد. ۳۳ 33
೩೩ನಾನು ನಿನ್ನ ಸಂತಾನವನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕದೆ, ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಣೀರಿಗೂ ಮತ್ತು ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹಾರವಾಗುವರು.
واین برای تو علامت باشد که بر دو پسرت حفنی وفینحاس واقع می‌شود که هر دوی ایشان در یک روز خواهند مرد. ۳۴ 34
೩೪ಇದೆಲ್ಲಾ ನೆರವೇರುವುದೆಂಬುದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಹಾಗೂ ಫೀನೆಹಾಸರು ಒಂದೇ ದಿನದಲ್ಲಿ ಸಾಯುವುದೇ ಗುರುತಾಗಿರುವುದು.
و کاهن امینی به جهت خودبرپا خواهم داشت که موافق دل و جان من رفتارخواهد نمود، و برای او خانه مستحکمی بنا خواهم کرد، و به حضور مسیح من پیوسته سلوک خواهد نمود. ۳۵ 35
೩೫ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’
و واقع خواهد شد که هر‌که درخانه تو باقی ماند، آمده، نزد او به جهت پاره‌ای نقره و قرص نانی تعظیم خواهد نمود و خواهدگفت: تمنا اینکه مرا به یکی از وظایف کهانت بگذار تا لقمه‌ای نان بخورم.» ۳۶ 36
೩೬ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.

< اول سموئیل 2 >