< لوقا 5 >

و هنگامی که گروهی بر وی ازدحام می نمودند تا کلام خدا را بشنوند، او به کناردریاچه جنیسارت ایستاده بود. ۱ 1
ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.
و دو زورق رادر کنار دریاچه ایستاده دید که صیادان از آنهابیرون آمده، دامهای خود را شست و شومی نمودند. ۲ 2
ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
پس به یکی از آن دو زورق که مال شمعون بود سوار شده، از او درخواست نمود که از خشکی اندکی دور ببرد. پس در زورق نشسته، مردم را تعلیم می‌داد. ۳ 3
ಆ ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.
و چون از سخن‌گفتن فارغ شد، به شمعون گفت: «به میانه دریاچه بران و دامهای خود رابرای شکار بیندازید.» ۴ 4
ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ” ಎಂದು ಹೇಳಿದನು.
شمعون در جواب وی گفت: «ای استاد، تمام شب را رنج برده چیزی نگرفتیم، لیکن به حکم تو، دام را خواهیم انداخت.» ۵ 5
ಅದಕ್ಕೆ ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ” ಅಂದನು.
و چون چنین کردند، مقداری کثیر ازماهی صید کردند، چنانکه نزدیک بود دام ایشان گسسته شود. ۶ 6
ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು.
و به رفقای خود که در زورق دیگربودند اشاره کردند که آمده ایشان را امداد کنند. پس آمده هر دو زورق را پر کردند بقسمی که نزدیک بود غرق شوند. ۷ 7
ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು.
شمعون پطرس چون این را بدید، بر پایهای عیسی افتاده، گفت: «ای خداوند از من دور شو زیرا مردی گناهکارم.» ۸ 8
ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.
چونکه به‌سبب صیدماهی که کرده بودند، دهشت بر او و همه رفقای وی مستولی شده بود. ۹ 9
ಏಕೆಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿಮಿತ್ತ ಆಶ್ಚರ್ಯಪಟ್ಟಿದ್ದರು.
و هم چنین نیز بریعقوب و یوحنا پسران زبدی که شریک شمعون بودند. عیسی به شمعون گفت: «مترس. پس از این مردم را صید خواهی کرد.» ۱۰ 10
೧೦ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, “ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ” ಎಂದು ಹೇಳಿದನು.
پس چون زورقهارا به کنار آوردند همه را ترک کرده، از عقب اوروانه شدند. ۱۱ 11
೧೧ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.
و چون او در شهری از شهرها بود ناگاه مردی پر از برص آمده، چون عیسی را بدید، به روی در‌افتاد و از او درخواست کرده، گفت: «خداوندا، اگر خواهی می‌توانی مرا طاهرسازی.» ۱۲ 12
೧೨ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
پس او دست آورده، وی را لمس نمود و گفت: «می‌خواهم. طاهر شو.» که فور برص از او زایل شد. ۱۳ 13
೧೩ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.
و او را قدغن کرد که «هیچ‌کس را خبر مده، بلکه رفته خود را به کاهن بنما و هدیه‌ای بجهت طهارت خود، بطوری که موسی فرموده است، بگذران تا بجهت ایشان شهادتی شود.» ۱۴ 14
೧೪ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.
لیکن خبر او بیشتر شهرت یافت و گروهی بسیار جمع شدند تا کلام او رابشنوند و از مرضهای خود شفا یابند، ۱۵ 15
೧೫ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.
و او به ویرانه‌ها عزلت جسته، به عبادت مشغول شد. ۱۶ 16
೧೬ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು.
روزی از روزها واقع شد که او تعلیم می‌دادو فریسیان و فقها که از همه بلدان جلیل و یهودیه و اورشلیم آمده، نشسته بودند وقوت خداوندبرای شفای ایشان صادر می‌شد، ۱۷ 17
೧೭ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.
که ناگاه چندنفر شخصی مفلوج را بر بستری آوردند ومی خواستند او را داخل کنند تا پیش روی وی بگذارند. ۱۸ 18
೧೮ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು.
و چون به‌سبب انبوهی مردم راهی نیافتند که او را به خانه درآورند بر پشت بام رفته، او را با تختش از میان سفالها در وسط پیش عیسی گذاردند. ۱۹ 19
೧೯ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.
چون او ایمان ایشان را دید، به وی گفت: «ای مرد، گناهان تو آمرزیده شد.» ۲۰ 20
೨೦ಯೇಸು ಅವರ ನಂಬಿಕೆಯನ್ನು ನೋಡಿ, “ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಅಂದನು.
آنگاه کاتبان و فریسیان در خاطر خود تفکرنموده، گفتن گرفتند: «این کیست که کفر می‌گوید. جز خدا و بس کیست که بتواند گناهان رابیامرزد؟» ۲۱ 21
೨೧ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.
عیسی افکار ایشان را درک نموده، در جواب ایشان گفت: «چرا در خاطر خود تفکرمی کنید؟ ۲۲ 22
೨೨ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು?
کدام سهلتر است، گفتن اینکه گناهان تو آمرزیده شد، یا گفتن اینکه برخیز و بخرام؟ ۲۳ 23
೨೩ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ?
لیکن تا بدانید که پسر انسان را استطاعت آمرزیدن گناهان بر روی زمین هست، مفلوج راگفت، تو را می‌گویم برخیز و بستر خود رابرداشته، به خانه خود برو.» ۲۴ 24
೨೪ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು.
در ساعت برخاسته، پیش ایشان آنچه بر آن خوابیده بودبرداشت و به خانه خود خدا را حمدکنان روانه شد. ۲۵ 25
೨೫ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು.
و حیرت همه را فرو گرفت و خدا راتمجید می‌نمودند و خوف بر ایشان مستولی شده، گفتند: «امروز چیزهای عجیب دیدیم.» ۲۶ 26
೨೬ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.
از آن پس بیرون رفته، باجگیری را که لاوی نام داشت، بر باجگاه نشسته دید. او را گفت: «از عقب من بیا.» ۲۷ 27
೨೭ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,
در حال همه‌چیز را ترک کرده، برخاست و در عقب وی روانه شد. ۲۸ 28
೨೮ಅವನು ಎಲ್ಲವನ್ನೂ ಬಿಟ್ಟು ಎದ್ದು ಆತನ ಹಿಂದೆ ಹೋದನು.
و لاوی ضیافتی بزرگ در خانه خود برای او کرد و جمعی بسیار از باجگیران و دیگران با ایشان نشستند. ۲۹ 29
೨೯ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.
اما کاتبان ایشان و فریسیان همهمه نموده، به شاگردان او گفتند: «برای چه با باجگیران وگناهکاران اکل و شرب می‌کنید؟» ۳۰ 30
೩೦ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.
عیسی درجواب ایشان گفت: «تندرستان احتیاج به طبیب ندارند بلکه مریضان. ۳۱ 31
೩೧ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು;
و نیامده‌ام تا عادلان بلکه تا عاصیان را به توبه بخوانم.» ۳۲ 32
೩೨ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.
پس به وی گفتند: «از چه سبب شاگردان یحیی روزه بسیار می‌دارند و نماز می‌خوانند وهمچنین شاگردان فریسیان نیز، لیکن شاگردان تواکل و شرب می‌کنند.» ۳۳ 33
೩೩ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು,
بدیشان گفت: «آیامی توانید پسران خانه عروسی را مادامی که دامادبا ایشان است روزه‌دار سازید؟ ۳۴ 34
೩೪ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ?
بلکه ایامی می‌آید که داماد از ایشان گرفته شود، آنگاه در آن روزها روزه خواهند داشت.» ۳۵ 35
೩೫ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು.
و مثلی برای ایشان آورد که «هیچ‌کس پارچه‌ای از جامه نو را بر جامه کهنه وصله نمی کند والا آن نو را پاره کند و وصله‌ای که از نوگرفته شد نیز در خور آن کهنه نبود. ۳۶ 36
೩೬ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.
و هیچ‌کس شراب نو را در مشکهای کهنه نمی ریزد والاشراب نو، مشکها را پاره می‌کند و خودش ریخته و مشکها تباه می‌گردد. ۳۷ 37
೩೭ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು.
بلکه شراب نو را درمشکهای نو باید ریخت تا هر دو محفوظ بماند. ۳۸ 38
೩೮ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.
و کسی نیست که چون شراب کهنه را نوشیده فی الفور نو را طلب کند، زیرا می‌گوید کهنه بهتراست.» ۳۹ 39
೩೯ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ, ‘ಹಳೆಯದೇ ಉತ್ತಮ’ ಅನ್ನುವನು.”

< لوقا 5 >