< Liczb 9 >

1 I rzekł Pan do Mojżesza na puszczy Synaj, roku wtórego po wyjściu ich z ziemi Egipskiej, miesiąca pierwszego, mówiąc:
ಇಸ್ರಾಯೇಲರು ಐಗುಪ್ತ ದೇಶವನ್ನು ಬಿಟ್ಟುಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ, ಸೀನಾಯಿ ಅರಣ್ಯದಲ್ಲಿ ಯೆಹೋವನು ಮೋಶೆಗೆ,
2 Niech obchodzą synowie Izraelscy święto przejścia czasu naznaczonego.
“ಇಸ್ರಾಯೇಲರು ಪಸ್ಕಹಬ್ಬ ಆಚರಿಸಲು ನೇಮಕವಾದ ಕಾಲದಲ್ಲಿ ಆಚರಿಸಲು ಹೇಳು.
3 Czternastego dnia miesiąca tego, między dwoma wieczorami, obchodzić je będziecie czasu naznaczonego; według wszystkich obrzędów jego, i według wszystkich ceremonii jego, obchodzić je będziecie.
ನಾನು ನೇಮಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲಿಯೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು” ಎಂದು ಹೇಳಿದನು.
4 Mówił tedy Mojżesz do synów Izraelskich, aby obchodzili święto przejścia.
ಆದಕಾರಣ ಮೋಶೆ ಇಸ್ರಾಯೇಲರಿಗೆ, ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಿದನು.
5 I obchodzili święto przejścia, pierwszego miesiąca, czternastego dnia, między dwoma wieczorami, na puszczy Synaj; według wszystkiego, jak rozkazał Pan Mojżeszowi, tak uczynili synowie Izraelscy.
ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು.
6 I byli niektórzy ludzie, którzy się byli splugawili nad umarłym człowiekiem, i nie mogli obchodzić święta przejścia dnia onego; tedy przystąpili do Mojżesza i do Aarona w tenże dzień;
ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.
7 I rzekli oni ludzie do niego: Zmazaliśmy się nad umarłym: i nie będzież nam wolno oddać ofiary Panu czasu naznaczonego wespół z synami Izraelskimi?
ಈ ಜನರು ಮೋಶೆಗೆ “ಮನುಷ್ಯನ ಶವಸೋಂಕಿದರಿಂದ ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?” ಎಂದು ಕೇಳಿದರು.
8 Którym odpowiedział Mojżesz: Postójcie, aż usłyszę, co rozkaże Pan o was.
ಅದಕ್ಕೆ ಮೋಶೆ ಅವರಿಗೆ, “ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ” ಎಂದು ಹೇಳಿದನು.
9 Tedy rzekł Pan do Mojżesza, mówiąc:
ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
10 Powiedz synom Izraelskim i rzecz: Jeźliby się kto zmazał nad umarłym, alboby na drodze dalekiej był, tak z was, jako i z potomstwa waszego, przecię będzie odprawował święto przejścia Panu.
೧೦“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’
11 Miesiąca wtórego, czternastego dnia, między dwoma wieczorami, odprawować je będą; z przaśnemi chleby, i z gorzkiemi zioły jeść je będą:
೧೧ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.
12 Nie zostawią nic z niego do jutra, i kości nie złamią w nim; według wszystkiego postanowienia święta przejścia odprawować je będą:
೧೨ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿರುವ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.
13 Ale człowiek, któryby był czysty, a nie byłby w drodze, i nie obchodziłby święta przejścia, tedy dusza ona wykorzeniona będzie z ludu swego, bo ofiary Pańskiej nie odprawował czasu naznaczonego; grzech swój poniesie on człowiek.
೧೩ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.
14 A jeźliby przychodzień mieszkający między wami obchodził święto przejścia Panu, według ustawy święta przejścia i według obrzędów jego obchodzić je będzie; ustawa jedna będzie, wam i przychodniowi, i zrodzonemu w ziemi.
೧೪“ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.”
15 Dnia tedy onego, którego wystawiony był przybytek, obłok okrył przybytek nad namiotem świadectwa, a wieczór bywało nad przybytkiem jako widzenie ognia aż do poranku.
೧೫ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.
16 Tak bywało ustawicznie; we dnie okrywał go obłok, a jako widzenie ognia w nocy.
೧೬ನಿತ್ಯವೂ ಹಾಗೆಯೇ ಕಾಣಿಸುತ್ತಿತ್ತು; ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುತ್ತಿತ್ತು.
17 A gdy się podnaszał obłok od namiotu, tedy się ruszali synowie Izraelscy; a gdziekolwiek stawał obłok, tamże stanowili obóz synowie Izraelscy.
೧೭ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು. ಆ ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.
18 Na rozkazanie Pańskie ciągnęli synowie Izraelscy, i na rozkazanie Pańskie stanowili obóz; po wszystkie dni, których zostawał obłok nad przybytkiem, i oni leżeli obozem.
೧೮ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರು ಪ್ರಯಾಣಮಾಡುತ್ತಿದ್ದರು, ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು.
19 A gdy trwał obłok nad przybytkiem przez wiele dni, tedy odprawowali synowie Izraelscy straż Panu, a nie ruszali się.
೧೯ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.
20 Ale gdy nie długo trwał obłok nad przybytkiem, na rozkazanie Pańskie stanowili obóz, i na rozkazanie Pańskie ciągnęli.
೨೦ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿನಗಳು ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳಿದುಕೊಳ್ಳುತ್ತಿದ್ದರು. ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು.
21 A gdy bywał obłok od wieczora aż do poranku, a podnosił się zaś poranku, tedy ciągnęli; tak we dnie jako i w nocy, gdy się podniósł obłok, ciągnęli.
೨೧ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಬೆಳಗ್ಗಿನವರೆಗೆ ಇರುತ್ತಿತ್ತು. ಬೆಳಗ್ಗೆ ಅದು ಮೇಲಕ್ಕೆ ಏಳುವಾಗ ಜನರು ಪ್ರಯಾಣಮಾಡುತ್ತಿದ್ದರು. ಕೆಲವು ಸಮಯಗಳಲ್ಲಿ ಅದು ಹಗಲಿರುಳು ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು.
22 A jeźli przez dwa dni, albo przez miesiąc, albo też przez rok trwał obłok nad przybytkiem, zostawając nad nim, obozem leżeli synowie Izraelscy, i nie ruszali się; ale gdy się on podnosił, i oni się ruszali.
೨೨ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು.
23 Na rozkazanie Pańskie stanowili obóz, i na rozkazanie Pańskie ciągnęli, straż Pańską trzymając, jako im Pan rozkazał przez Mojżesza.
೨೩ಯೆಹೋವನ ಆಜ್ಞೆಯ ಪ್ರಕಾರ ಅವರು ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಯೆಹೋವನ ಆಜ್ಞೆಯ ಪ್ರಕಾರವೇ ಅವರು ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.

< Liczb 9 >