< 1 Samuel 4 >

1 E Samuel falou a todo Israel. Por aquele tempo saiu Israel a encontrar em batalha aos filisteus, e assentou campo junto a Ebenézer, e os filisteus assentaram o seu em Afeque.
ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.
2 E os filisteus apresentaram a batalha a Israel; e travando-se o combate, Israel foi vencido diante dos filisteus, os quais feriram na batalha pelo campo como quatro mil homens.
ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು.
3 E voltado que houve o povo ao acampamento, os anciãos de Israel disseram: Por que nos feriu hoje o SENHOR diante dos filisteus? Tragamos a nós de Siló a arca do pacto do SENHOR, para que vindo entre nós nos salve da mão de nossos inimigos.
ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ
4 E enviou o povo a Siló, e trouxeram dali a arca do pacto do SENHOR dos exércitos, que estava assentado entre os querubins; e os dois filhos de Eli, Hofni e Fineias, estavam ali com a arca do pacto de Deus.
ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.
5 E aconteceu que, quando a arca do pacto do SENHOR veio ao campo, todo Israel deu grito com tão grande júbilo, que a terra tremeu.
ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
6 E quando os filisteus ouviram a voz de júbilo, disseram: Que voz de grande júbilo é esta no campo dos hebreus? E souberam que a arca do SENHOR havia vindo ao campo.
ಫಿಲಿಷ್ಟಿಯರು ಇದನ್ನು ಕೇಳಿ, “ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣ” ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು.
7 E os filisteus tiveram medo, porque diziam: Veio Deus ao campo. E disseram: Ai de nós! pois antes de agora não foi assim.
ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ.
8 Ai de nós! Quem nos livrará das mãos destes deuses fortes? Estes são os deuses que feriram ao Egito com toda praga no deserto.
ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!
9 Esforçai-vos, ó filisteus, e sede homens, porque não sirvais aos hebreus, como eles vos serviram a vós: sede homens, e lutai.
ಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ. ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು” ಎಂದು ಹೇಳಿಕೊಂಡು
10 Lutaram, pois, os filisteus, e Israel foi vencido, e fugiram cada qual a suas tendas; e foi feita muito grande mortandade, pois caíram de Israel trinta mil homens a pé.
೧೦ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
11 E a arca de Deus foi tomada, e morreram os dois filhos de Eli, Hofni e Fineias.
೧೧ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು.
12 E correndo da batalha um homem de Benjamim, veio naquele dia a Siló, com suas roupas rasgadas e com terra sobre sua cabeça:
೧೨ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು
13 E quando chegou, eis que Eli que estava sentado em uma cadeira vigiando junto ao caminho; porque seu coração estava tremendo por causa da arca de Deus. Chegado pois aquele homem à cidade, e dadas as novas, toda a cidade gritou.
೧೩ನಡೆದದ್ದನ್ನು ತಿಳಿಸಲಾಗಿ ಜನರೆಲ್ಲಾ ಗೋಳಾಡತೊಡಗಿದರು. ದೇವರ ಮಂಜೂಷವೇನಾಯಿತೋ ಎಂಬ ಚಿಂತೆಯಿಂದ ಮಂದಿರದ್ವಾರದ ಬಳಿಯಲ್ಲಿ ಆಸೀನನಾಗಿ ದಾರಿಯನ್ನು ನೋಡುತ್ತಿದ್ದ ಏಲಿಯು ಆ ದುಃಖದ ಧ್ವನಿಯನ್ನು ಕೇಳಿ
14 E quando Eli ouviu o estrondo da gritaria, disse: Que estrondo de alvoroço é este? E aquele homem veio depressa, e deu as novas a Eli.
೧೪ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ನಡೆದದ್ದೆಲ್ಲವನ್ನೂ ತಿಳಿಸಿದನು. ಏಲಿಯು ತೊಂಭತ್ತೆಂಟು ವರ್ಷದವನು;
15 Era já Eli de idade de noventa e oito anos, e seus olhos se haviam entenebrecido, de modo que não podia ver.
೧೫ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.
16 Disse, pois, aquele homem a Eli: Eu venho da batalha, eu escapei hoje do combate. E ele disse: Que aconteceu, filho meu?
೧೬ಆ ಮನುಷ್ಯನು ಏಲಿಗೆ, “ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು” ಅನ್ನಲು ಏಲಿಯು ಅವನನ್ನು, “ನನ್ನ ಮಗನೇ, ವರ್ತಮಾನವೇನು?” ಎಂದು ಕೇಳಿದನು.
17 E o mensageiro respondeu, e disse: Israel fugiu diante dos filisteus, e também foi feita grande mortandade no povo; e também teus dois filhos, Hofni e Fineias, são mortos, e a arca de Deus foi tomada.
೧೭ಅವನು ಏಲಿಗೆ, “ಇಸ್ರಾಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು” ಎಂದು ತಿಳಿಸಿದನು.
18 E aconteceu que quando ele fez menção da arca de Deus, Eli caiu até atrás da cadeira ao lado da porta, e o seu pescoço se quebrou, e ele morreu: porque era homem velho e pesado. E havia julgado a Israel quarenta anos.
೧೮ಮುದುಕನೂ, ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆಯೇ ಪೀಠದಿಂದ ಹಿಂದಕ್ಕೆ ಬಾಗಿಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲರನ್ನು ನಲ್ವತು ವರ್ಷ ಪಾಲಿಸಿದ್ದನು.
19 E sua nora, a mulher de Fineias, que estava grávida, próxima ao parto, ouvindo a notícia que a arca de Deus havia sido tomada, e mortos seu sogro e seu marido, encurvou-se e teve o parto; porque suas dores vieram sobre ela.
೧೯ಅವನ ಸೊಸೆಯಾದ ಫೀನೆಹಾಸನ ಹೆಂಡತಿ ದಿನತುಂಬಿದ ಗರ್ಭಿಣಿಯಾಗಿದ್ದಳು. ಅವಳು ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ, ತನ್ನ ಮಾವನೂ, ತನ್ನ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.
20 E ao tempo em que morria, diziam-lhe as que estavam junto a ela: Não tenhas medo, porque deste à luz um filho. Mas ela não respondeu, nem deu atenção.
೨೦ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ.
21 E chamou ao menino Icabode, dizendo: Passada foi a glória de Israel! Por causa arca de Deus que foi tomada, e porque era morto seu sogro, e seu marido.
೨೧ದೇವರ ಮಂಜೂಷವು ಶತ್ರುವಶವಾದ್ದರಿಂದಲೂ, ಮಾವನೂ, ಗಂಡನೂ ಮೃತರಾದ್ದರಿಂದಲೂ, “ಮಹಿಮೆಯು ಇಸ್ರಾಯೇಲರನ್ನು ಬಿಟ್ಟು ಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್” ಎಂದು ಹೆಸರಿಟ್ಟಳು.
22 Disse, pois: Passada foi a glória de Israel; porque a arca de Deus foi tomada.
೨೨“ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು” ಹೇಳಿದಳು.

< 1 Samuel 4 >