< Ester 5 >

1 Aconteceu, pois, que ao terceiro dia Ester se vestiu de vestes reais, e se pôs no pátio de dentro da casa do rei, de frente ao aposento do rei; e o rei estava sentado em seu trono real no aposento real, em frente da porta do aposento.
ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.
2 E foi que, quando ele viu a rainha Ester, que estava no pátio, ela alcançou favor em seus olhos; e o rei apontou para Ester o cetro de ouro que tinha em sua mão. Então Ester se aproximou, e tocou a ponta do cetro.
ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು.
3 Então o rei disse: O que tens, rainha Ester? E qual é a tua petição? Até a metade do reino será dada a ti.
ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.
4 E Ester respondeu: Se for do agrado do rei, venha o rei hoje com Hamã ao banquete que lhe tenho preparado.
ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು.
5 Então o rei disse: Fazei Hamã se apressar a fazer o que Ester disse. Assim o rei veio com Hamã ao banquete que Ester havia preparado.
ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೆ ಹಾಮಾನನನ್ನು ಕರೆದುಕೊಂಡು ಬನ್ನಿರಿ” ಎಂದು ಅಪ್ಪಣೆಮಾಡಿ ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು.
6 O rei perguntou a Ester no banquete do vinho: Qual é a tua petição, para que te seja concedida? Qual é o teu pedido? Ainda que seja a metade do reino, será feito.
ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು.
7 Então Ester respondeu, dizendo: Minha petição e minha demanda é:
ಅದಕ್ಕೆ ಎಸ್ತೇರಳು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಕೇಳುವುದನ್ನು ಕೊಡುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಮನಸ್ಸುಳ್ಳವರಾಗಿದ್ದರೆ
8 Se tenho achado favor aos olhos do rei, e se agrada ao rei conceder minha petição e fazer cumprir o meu pedido, que o rei venha com Hamã ao banquete que lhes prepararei; e amanhã farei conforme o que o rei tem dito.
ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.
9 Então Hamã saiu naquele dia contente e alegre de coração; porém, quando viu a Mardoqueu à porta do rei, e que ele não se levantava nem se movia por ele, então Hamã se encheu de furor contra Mardoqueu.
ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.
10 Porém Hamã se conteve, e veio a sua casa, e mandou vir seus amigos, e a Zeres sua mulher.
೧೦ಆದರೂ ತನ್ನ ಕೋಪವನ್ನು ಬಿಗಿಹಿಡಿದುಕೊಂಡು ಮನೆಗೆ ಹೋಗಿ ತನ್ನ ಆಪ್ತರನ್ನೂ, ಪತ್ನಿಯಾದ ಜೆರೆಷಳನ್ನೂ ಕರೆದನು.
11 E Hamã lhes contou a glória de seus riquezas, e a multidão de seus filhos, e tudo em que o rei tinha lhe engrandecido e lhe exaltado sobre os príncipes e servos do rei.
೧೧ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,
12 Hamã também disse: Até a rainha Ester a ninguém fez vir com o rei ao banquete que ela preparou, a não ser a mim; e ainda amanhã sou convidado dela juntamente com o rei.
೧೨“ಇದಲ್ಲದೆ ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನ ಹೊರತಾಗಿ ಇನ್ನಾರನ್ನೂ ಆಹ್ವಾನಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ.
13 Porém tudo isto não me satisfaz, enquanto eu ver o judeu Mardoqueu sentado à porta do rei.
೧೩ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಅಂದನು.
14 Então sua mulher Zeres e todos os seus amigos lhe disseram: Seja feita uma forca de cinquenta côvados de altura, e amanhã dize ao rei para que nela enforquem a Mardoqueu; e então vai alegre com o rei ao banquete. E este conselho foi do agrado de Hamã, e ele mandou fazer a forca.
೧೪ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.

< Ester 5 >