< Gênesis 15 >

1 Depois destas coisas a palavra do SENHOR veio a Abrão em visão, dizendo: Não temas, Abrão; eu sou o teu escudo; a tua recompensa será muito grande.
ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”
2 Abrão respondeu: Senhor DEUS, que me darás, sendo que não tenho filho, e o herdeiro da minha casa é Eliézer de Damasco?
ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.
3 Disse mais Abrão: Eis que não me deste descendência, e eis que meu herdeiro é um nascido em minha casa.
ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು.
4 E logo a palavra do SENHOR veio a ele dizendo: Não esse não herdará de ti, mas sim o que sairá de tuas entranhas será o que de ti herdará.
ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,
5 E tirou-lhe fora, e disse: Olha agora aos céus, e conta as estrelas, se as podes contar. E lhe disse: Assim será tua descendência.
“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.
6 E creu ao SENHOR, e contou-lhe por justiça.
ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು.
7 E disse-lhe: Eu sou o SENHOR, que te tirei de Ur dos caldeus, para dar-te a herdar esta terra.
ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.
8 E ele respondeu: Senhor DEUS, com que saberei que a vou herdar?
“ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು.
9 E lhe disse: Separa-me uma bezerra de três anos, e uma cabra de três anos, e um carneiro de três anos, uma rolinha também, e um pombinho.
ಅದಕ್ಕೆ ಆತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು.
10 E tomou ele todas estas coisas, e partiu-as pela metade, e pôs cada metade uma em frente de outra; mas não partiu as aves.
೧೦ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ.
11 E desciam aves sobre os corpos mortos, e enxotava-as Abrão.
೧೧ಆ ಪಶುಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.
12 Mas ao pôr do sol veio o sono a Abrão, e eis que o pavor de uma grande escuridão caiu sobre ele.
೧೨ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.
13 Então disse a Abrão: Tem certeza que a tua descendência será peregrina em terra que não é sua, e serão escravizados e afligidos por quatrocentos anos.
೧೩ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.
14 Mas também a nação a quem servirão, eu julgarei; e depois disto sairão com grande riqueza.
೧೪ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.
15 Tu, porém, virás aos teus pais em paz, e serás sepultado em boa velhice.
೧೫ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.
16 E na quarta geração voltarão para cá; porque ainda não está completa a maldade dos amorreus até aqui.
೧೬ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು.
17 E sucedeu que, depois de posto o sol, e já estando escuro, apareceu um fogo fumegando, e uma tocha de fogo que passou por entre os animais divididos.
೧೭ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.
18 Naquele dia fez o SENHOR um pacto com Abrão dizendo: À tua descendência darei esta terra desde o rio do Egito até o rio grande, o rio Eufrates;
೧೮ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
19 Os queneus, e os quenezeus, e os cadmoneus,
೧೯ಕೇನಿಯರೂ, ಕೆನಿಜೀಯರೂ, ಕದ್ಮೋನಿಯರೂ,
20 E os heteus, e os perizeus, e os refains,
೨೦ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ,
21 E os amorreus, e os cananeus, e os girgaseus, e os jebuseus.
೨೧ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು.

< Gênesis 15 >