< Salmos 39 >

1 Salmo de Davi, para o regente, conforme “Jedutum”: Eu dizia: Vigiarei os meus caminhos, para eu não pecar com minha língua; vigiarei minha boca com freio, enquanto o perverso ainda estiver em frente a mim.
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದೂತೂನನ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಕೀರ್ತನೆ. “ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.
2 Eu fiquei calado, nada falei de bom; e minha dor se agravou.
ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು.
3 Meu coração se esquentou dentro de mim, fogo se acendeu em minha meditação; [então] eu disse com minha língua:
ನನ್ನ ಹೃದಯವು ಆತಂಕದಿಂದ ಕೂಡಿತ್ತು; ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. ಆಗ ನಾನು ಬಾಯಿ ಬಿಟ್ಟು,
4 Conta-me, SENHOR, o meu fim, e a duração dos meus dias, para que eu saiba como eu sou frágil.
“ಯೆಹೋವನೇ, ನನಗೆ ಅವಸಾನವುಂಟೆಂದೂ, ನನ್ನ ಜೀವಮಾನವು ಅತ್ಯಲ್ಪವೆಂದೂ, ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು.
5 Eis que a palmos tu ordenaste os meus dias, e o tempo de minha vida [é] como nada diante de ti; pois todo homem que existe [é] um nada. (Selá)
ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. (ಸೆಲಾ)
6 Certamente o homem anda pela aparência, certamente se inquietam em vão; ajuntam [bens], e não sabem que [os] levará.
ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.
7 E agora, SENHOR, o que eu espero? Minha esperança [está] em ti.
“ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ.
8 Livra-me de todas as minhas transgressões; não me ponhas como humilhado pelo tolo.
ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆಮಾಡು; ಮೂರ್ಖರ ನಿಂದೆಗೆ ಗುರಿಮಾಡಬೇಡ.
9 Eu estou calado, não abrirei a minha boca, porque tu fizeste [assim].
ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.
10 Tira teu tormento de sobre mim; estou consumido pelo golpe de tua mão.
೧೦ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.
11 Ao castigares alguém com repreensões pela maldade, logo tu desfaz o que lhe agrada como traça; certamente todo homem é um nada. (Selá)
೧೧ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. (ಸೆಲಾ)
12 Ouve a minha oração, SENHOR; e dá ouvidos ao meu clamor; não te cales de minhas lágrimas, porque eu sou [como] um peregrino para contigo; estrangeiro, como todos os meus pais.
೧೨ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.
13 Não prestes atenção em mim [em tua ira], antes que eu vá, e pereça.
೧೩ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”

< Salmos 39 >