< Иисус Навин 1 >

1 По смерти Моисея, раба Господня, Господь сказал Иисусу, сыну Навину, служителю Моисееву:
ಯೆಹೋವ ದೇವರ ಸೇವಕನಾದ ಮೋಶೆಯ ಮರಣದ ತರುವಾಯ, ನೂನನ ಮಗ ಮತ್ತು ಮೋಶೆಯ ಸೇವಕ ಆಗಿರುವ ಯೆಹೋಶುವನಿಗೆ ಯೆಹೋವ ದೇವರು:
2 Моисей, раб Мой, умер; итак встань, перейди через Иордан сей, ты и весь народ сей, в землю, которую Я даю им, сынам Израилевым.
“ನನ್ನ ಸೇವಕನಾದ ಮೋಶೆಯು ಮರಣಹೊಂದಿದನು. ಈಗ ನೀನು ಇಸ್ರಾಯೇಲರಾದ ಈ ಜನರೆಲ್ಲರ ಸಹಿತವಾಗಿ ಎದ್ದು, ಯೊರ್ದನ್ ನದಿಯನ್ನು ದಾಟಿ, ಇಸ್ರಾಯೇಲರಿಗೆ ನಾನು ಕೊಡುವ ದೇಶಕ್ಕೆ ಹೋಗು.
3 Всякое место, на которое ступят стопы ног ваших, Я даю вам, как Я сказал Моисею:
ನಾನು ಮೋಶೆಗೆ ವಾಗ್ದಾನ ಮಾಡಿದ ಪ್ರಕಾರ ನೀವು ಪಾದವಿಡುವ ಎಲ್ಲಾ ಸ್ಥಳವನ್ನು ನಾನು ನಿಮಗೆ ಕೊಟ್ಟಿದ್ದೇನೆ.
4 от пустыни и Ливана сего до реки великой, реки Евфрата, всю землю Хеттеев; и до великого моря к западу солнца будут пределы ваши.
ಮರುಭೂಮಿಯೂ ಈ ಲೆಬನೋನ್ ಮೊದಲುಗೊಂಡು ಯೂಫ್ರೇಟೀಸ್ ಮಹಾ ನದಿಯವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಸೀಮೆ ಸೂರ್ಯನು ಅಸ್ತಮಿಸುವ ಮಹಾಸಾಗರದವರೆಗೂ ವಿಸ್ತರಿಸಿಕೊಳ್ಳುವುದು.
5 Никто не устоит пред тобою во все дни жизни твоей; и как Я был с Моисеем, так буду и с тобою: не отступлю от тебя и не оставлю тебя.
ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.
6 Будь тверд и мужествен; ибо ты народу сему передашь во владение землю, которую Я клялся отцам их дать им;
ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.
7 только будь тверд и очень мужествен, и тщательно храни и исполняй весь закон, который завещал тебе Моисей, раб Мой; не уклоняйся от него ни направо ни налево, дабы поступать благоразумно во всех предприятиях твоих.
“ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.
8 Да не отходит сия книга закона от уст твоих; но поучайся в ней день и ночь, дабы в точности исполнять все, что в ней написано: тогда ты будешь успешен в путях твоих и будешь поступать благоразумно.
ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.
9 Вот Я повелеваю тебе: будь тверд и мужествен, не страшись и не ужасайся; ибо с тобою Господь Бог твой везде, куда ни пойдешь.
ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.
10 И дал Иисус повеление надзирателям народа и сказал:
ಆಗ ಯೆಹೋಶುವನು ಅಧಿಕಾರಿಗಳಿಗೆ ಆಜ್ಞಾಪಿಸಿ:
11 пройдите по стану и дайте повеление народу и скажите: заготовляйте себе пищу для пути, потому что, спустя три дня, вы пойдете за Иордан сей, дабы прийти взять землю, которую Господь Бог отцов ваших дает вам в наследие.
“ನೀವು ಪಾಳೆಯದ ಮಧ್ಯದಲ್ಲಿ ನಡೆದುಹೋಗಿ ಜನರಿಗೆ, ‘ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನ್ ನದಿಯನ್ನು ದಾಟಿ ಹೋಗಬೇಕು,’ ಎಂದು ತಿಳಿಸಿರಿ,” ಎಂದನು.
12 А колену Рувимову, Гадову и половине колена Манассиина Иисус сказал:
ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ,
13 вспомните, что заповедал вам Моисей, раб Господень, говоря: Господь Бог ваш успокоил вас и дал вам землю сию;
“ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕಮಾಡಿಕೊಳ್ಳಿರಿ. ‘ನಿಮ್ಮ ದೇವರಾದ ಯೆಹೋವ ದೇವರು ಈ ದೇಶವನ್ನು ನಿಮಗೆ ಕೊಟ್ಟು ನಿಮ್ಮನ್ನು ವಿಶ್ರಾಂತಿಪಡಿಸಿದ್ದಾರೆ.’
14 жены ваши, дети ваши и скот ваш пусть останутся в земле, которую дал вам Моисей за Иорданом; а вы все, могущие сражаться, вооружившись идите пред братьями вашими и помогайте им,
ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳು ಮೋಶೆ ನಿಮಗೆ ಕೊಟ್ಟ ಯೊರ್ದನ್ ನದಿಯ ಈಚೆ ಇರುವ ದೇಶದಲ್ಲೇ ಇರಲಿ. ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು, ನದಿದಾಟಿ,
15 доколе Господь Бог ваш не успокоит братьев ваших, как и вас; доколе и они не получат в наследие землю, которую Господь Бог ваш дает им; тогда возвратитесь в наследие ваше и владейте землею, которую Моисей, раб Господень, дал вам за Иорданом к востоку солнца.
ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.
16 Они в ответ Иисусу сказали: все, что ни повелишь нам, сделаем, и куда ни пошлешь нас, пойдем;
ಆಗ ಅವರು ಯೆಹೋಶುವನಿಗೆ ಉತ್ತರವಾಗಿ, “ನೀನು ನಮಗೆ ಆಜ್ಞಾಪಿಸುವುದನ್ನೆಲ್ಲಾ ಮಾಡುವೆವು. ಎಲ್ಲಿಗೆ ಕಳುಹಿಸುತ್ತೀಯೋ, ಅಲ್ಲಿಗೆ ಹೋಗುವೆವು.
17 как слушали мы Моисея, так будем слушать и тебя: только Господь, Бог твой, да будет с тобою, как Он был с Моисеем;
ನಾವು ಮೋಶೆಯ ಎಲ್ಲಾ ಮಾತು ಕೇಳಿದ ಹಾಗೆಯೇ ನಿನ್ನ ಮಾತು ಕೇಳುವೆವು. ನಿನ್ನ ದೇವರಾದ ಯೆಹೋವ ದೇವರು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.
18 всякий, кто воспротивится повелению твоему и не послушает слов твоих во всем, что ты ни повелишь ему, будет предан смерти. Только будь тверд и мужествен!
ನೀನು ಆಜ್ಞಾಪಿಸುವ ಎಲ್ಲದರಲ್ಲಿ ಯಾರು ನಿನ್ನ ಮಾತುಗಳನ್ನು ಕೇಳದೆ, ನಿನ್ನ ಬಾಯಿ ಮಾತಿಗೆ ಎದುರು ಬೀಳುವರೋ ಅವರು ಮರಣಕ್ಕೆ ಗುರಿಯಾಗಬೇಕು. ಬಲಿಷ್ಠನಾಗಿರು, ಧೈರ್ಯದಿಂದಿರು,” ಎಂದರು.

< Иисус Навин 1 >