< 1 Јованова 5 >

1 Који год верује да је Исус Христос, од Бога је рођен; и који год љуби Оног који је родио, љуби и Оног који је рођен од Њега.
ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.
2 По том знамо да љубимо децу Божију кад Бога љубимо и Његове заповести држимо.
ನಾವು ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
3 Јер је ово љубав Божија да заповести Његове држимо; и заповести Његове нису тешке.
ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ.
4 Јер сваки који је рођен од Бога побеђује свет; и вера је наша ова победа која победи свет.
ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.
5 Ко је који свет побеђује осим оног који верује да је Исус Син Божји?
ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು?
6 Ово је Исус Христос што дође водом и крвљу и Духом, не само водом него водом и крвљу; и Дух је који сведочи, јер је Дух истина,
ಕ್ರಿಸ್ತ ಯೇಸುವೇ ನೀರಿನಿಂದಲೂ ರಕ್ತದಿಂದಲೂ ಬಂದವರು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದರು, ಇದಕ್ಕೆ ಸಾಕ್ಷಿಕೊಡುವವರು ಪವಿತ್ರಾತ್ಮ ದೇವರೇ, ಏಕೆಂದರೆ ಪವಿತ್ರಾತ್ಮ ದೇವರು ಸತ್ಯವಾಗಿದ್ದಾರೆ.
7 Јер је троје што сведочи на небу: Отац, Реч, и Свети Дух; и ово је троје једно.
ಇದಲ್ಲದೆ ಸಾಕ್ಷಿಕೊಡುವವರು ಮೂವರಿದ್ದಾರೆ.
8 И троје је што сведочи на земљи: дух, и вода, и крв; и троје је заједно.
ಆತ್ಮ, ಜಲ, ರಕ್ತ ಎಂಬ ಮೂರು ಸಾಕ್ಷಿಗಳು ಇವೆ. ಇವು ಕೊಡುವ ಸಾಕ್ಷಿ ಒಂದೇ ಆಗಿರುತ್ತದೆ.
9 Кад примамо сведочанство човечије, сведочанство је Божије веће; јер је ово сведочанство Божије што сведочи за Сина свог.
ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವುದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಏಕೆಂದರೆ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
10 Који верује Сина Божијег има сведочанство у себи; који не верује Богу начинио Га је лажом, јер не верова сведочанству које сведочи Бог за Сина свог.
ದೇವಪುತ್ರ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟವರು ಆ ಸಾಕ್ಷಿಯನ್ನು ಸ್ವೀಕರಿಸುತ್ತಾರೆ. ದೇವರನ್ನು ನಂಬದವರು ದೇವರನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾರೆ. ಹೇಗೆಂದರೆ ದೇವರು ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅಂಥವರು ನಂಬಿಕೆಯಿಡಲಿಲ್ಲ.
11 И ово је сведочанство да нам је Бог дао живот вечни; и овај живот вечни у Сину је Његовом. (aiōnios g166)
ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ. (aiōnios g166)
12 Ко има Сина Божијег има живот; ко нема Сина Божијег нема живот.
ಯಾರು ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಹೊಂದಿದ್ದಾರೊ ಅವರಿಗೆ ಜೀವವಿದೆ. ಯಾರಲ್ಲಿ ದೇವರ ಪುತ್ರ ಆಗಿರುವ ಕ್ರಿಸ್ತ ಯೇಸು ಇರುವುದಿಲ್ಲವೋ ಅಂಥವರಿಗೆ ಜೀವವಿಲ್ಲ.
13 Ово писах вама који верујете у име Сина Божијег, да знате да имате живот вечни и да верујете у име Сина Божијег. (aiōnios g166)
ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ. (aiōnios g166)
14 И ово је слобода коју имамо к Њему да ако шта молимо по вољи Његовој послуша нас.
ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.
15 И кад знамо да нас слуша шта год молимо, знамо да ће нам дати шта тражимо од Њега.
ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.
16 Ако ко види брата свог где греши грех не к смрти, нека моли, и даће му живот, онима који греше не к смрти. Има грех к смрти: за тај не говорим да моли.
ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.
17 Свака је неправда грех; и има грех не к смрти.
ಅನೀತಿಯೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.
18 Знамо да ниједан који је рођен од Бога, не греши, него који је рођен од Бога чува се, и нечастиви не дохвата се до њега.
ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.
19 Знамо да смо од Бога и сав свет лежи у злу.
ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.
20 А знамо да Син Божји дође, и дао нам је разум да познамо Бога Истинитог, и да будемо у истинитом Сину Његовом Исусу Христу. Ово је Истинити Бог и Живот вечни. (aiōnios g166)
ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ. (aiōnios g166)
21 Дечице! Чувајте се од незнабоштва. Амин.
ಪ್ರಿಯ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.

< 1 Јованова 5 >