< 1 Петрова 1 >

1 Од Петра, апостола Исуса Христа, избраним дошљацима, расејаним по Понту, Галатији, Кападокији, Азији и Витанији;
ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,
2 По провиђењу Бога Оца, светињом Духа доведеним у послушање и кропљење крви Исуса Христа: да вам се умножи благодат и мир.
ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.
3 Благословен Бог и Отац Господа нашег Исуса Христа, који нас по великој милости својој прероди за живу наду васкрсењем Исуса Христа из мртвих,
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
4 За наследство непропадљиво, које неће иструхнути ни увенути, сачувано на небесима за вас,
ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.
5 Које је сила Божија вером сачувала за спасење, приправљено да се јави у последње време;
ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
6 Коме радујте се, премда сте сад мало (где је потребно) жалосни у различним напастима,
ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
7 Да се кушање ваше вере много вредније од злата пропадљивог које се куша огњем нађе на хвалу и част и славу, кад се покаже Исус Христос;
ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
8 Ког не видевши љубите и ког сад не гледајући но верујући Га радујете се радошћу неисказаном и прослављеном.
ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
9 Примајући крај своје вере, спасење душама.
10 Које спасење тражише и испитиваше за њ пророци, који за вашу благодат прорекоше;
೧೦ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
11 Испитујући у какво или у које време јављаше Дух Христов у њима, напред сведочећи за Христове муке и за славе по томе;
೧೧ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.
12 Којима се откри да не самим себи него нама служаху овим што вам се сад јави по онима који вам проповедише јеванђеље посланим с неба Духом Светим, у које анђели желе завирити.
೧೨ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
13 Зато, љубазни, запрегнувши бедра свог ума будите трезни, и зацело се надајте благодати која ће вам се принети кад дође Исус Христос.
೧೩ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
14 Као послушна деца, не владајући се по првим жељама у свом незнању,
೧೪ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,
15 Него по Свецу који вас је позвао, и ви будите свети у свему живљењу.
೧೫ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.
16 Јер је писано: Будите свети, јер сам ја свет.
೧೬ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.
17 И ако зовете Оцем Оног који, не гледајући ко је ко, суди свакоме по делу, проводите време свог живљења са страхом,
೧೭ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.
18 Знајући да се пропадљивим сребром или златом не искуписте из сујетног свог живљења, које сте видели од отаца;
೧೮ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
19 Него скупоценом крвљу Христа, као безазленог и пречистог јагњета;
೧೯ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
20 Који је одређен још пре постања света, а јавио се у последња времена вас ради,
೨೦ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
21 Који кроз Њега верујете Бога који Га подиже из мртвих, и даде Му славу, да би ваша вера и надање било у Бога.
೨೧ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
22 Душе своје очистивши у послушању истине Духом за братољубље недволично, од чистог срца љубите добро један другог,
೨೨ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
23 Као прерођени не од семена које труне, него од оног које не труне, речју Живог Бога, која остаје довека. (aiōn g165)
೨೩ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. (aiōn g165)
24 Јер је свако тело као трава, и свака слава човечија као цвет травни: осуши се трава, и цвет њен отпаде;
೨೪ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
25 Али реч Господња осаје довека. А ово је реч што је објављена међу вама. (aiōn g165)
೨೫ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. (aiōn g165)

< 1 Петрова 1 >