< 2 Књига Самуилова 8 >

1 После тога разби Давид Филистеје, и покори их, и узе Давид Метег-Аму из руку филистејских.
ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
2 Разби и Моавце, и измери их ужем поваљавши их по земљи, и измери их два ужа да се погубе а једно уже да се оставе у животу. И Моавци посташе слуге Давидове, и плаћаху му данак.
ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
3 Давид разби и Адад-Езера сина Реововог цара совског, изашав да рашири власт своју до реке Ефрата.
ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.
4 И зароби их Давид хиљаду и седам стотина коњаника и двадесет хиљада пешака, и подреза Давид жиле свим коњима колским, само остави за сто кола.
ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.
5 И беху дошли Сирци из Дамаска у помоћ Адад-Езеру цару совском, и Давид поби двадесет и две хиљаде Сираца.
ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
6 И намести Давид војску у Сирији што је под Дамаском, и Сирци посташе слуге Давидове плаћајући му данак. И Господ чуваше Давида куда год иђаше.
ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
7 И Давид узе златне штитове које имаху слуге Адад-Езерове, и донесе их у Јерусалим.
ಅವನು ಹದದೆಜೆರನ ಸೇವಕರ ಬಳಿ ಇದ್ದ ಬಂಗಾರದ ಗುರಾಣಿಗಳನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.
8 И из Ветаха и из Виротаја, градова Адад-Езерових, однесе цар Давид силну бронзу.
ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.
9 А кад чу Тоја, цар ематски, да је Давид побио сву војску Адад-Езерову,
ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
10 Посла Тоја Јорама сина свог к цару Давиду да га поздрави и да му честита што је војевао на Адад-Езера и убио га, јер Тоја имаше рат с Адад-Езером; и донесе Јорам закладе златне и сребрне и бронзане.
೧೦ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.
11 Па и то цар Давид посвети Господу са сребром и златом што беше посветио од свих народа које покори,
೧೧ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,
12 Од Сираца и од Моаваца и од синова Амонових и од Филистеја и од Амалика, и од плена Адад-Езера сина Реововог, цара совског.
೧೨ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.
13 И Давид стече име кад се врати побивши Сирце, осамнаест хиљада у сланој долини.
೧೩ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.
14 И намести војску по Идумеји, по свој Идумеји намести војску, и сви Едомци посташе слуге Давидове. И Господ чуваше Давида куда год иђаше.
೧೪ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.
15 Тако царова Давид над свим Израиљем, судећи и дајући правду свему народу свом.
೧೫ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.
16 И Јоав син Серујин беше над војском; а Јосафат син Ахилудов паметар;
೧೬ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.
17 А Садок син Ихитовов и Ахимелех син Авијатаров свештеници; а Сераја писар;
೧೭ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,
18 А Венаја син Јодајев беше над Херетејима и Фелетејима; а синови Давидови кнезови.
೧೮ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.

< 2 Књига Самуилова 8 >