< Јеврејима 4 >

1 Да се бојимо, дакле, да како док је још остављено обећање да се улази у покој Његов, не закасни који од вас.
ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.
2 Јер је нама објављено као и онима; али онима не помаже чувена реч, јер не вероваше они који чуше.
ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
3 Јер ми који веровасмо улазимо у покој, као што рече: Зато се заклех у гневу свом да неће ући у покој мој, ако су дела и била готова од постања света.
ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.
4 Јер негде рече за седми дан овако: и почину Бог у дан седми од свих дела својих.
ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ.
5 И на овом месту опет: Неће ући у покој мој.
“ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು” ಎಂದು ಭಾಗದಲ್ಲಿ ಆತನು ಪುನಃ ಹೇಳಿದ್ದಾನೆ.
6 Будући, пак, да неки имају да уђу у њега, и они којима је најпре јављено не уђоше за непослушање;
ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು.
7 Опет одреди један дан, данас, говорећи у Давиду по толиком времену, као што се пре каза: Данас ако глас Његов чујете, не будите дрвенастих срца.
ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ.
8 Јер да је Исус оне довео у покој, не би за други дан говорио потом.
ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.
9 Дакле је остављено још почивање народу Божијем.
ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.
10 Јер који уђе у покој Његов, и он почива од дела својих, као и Бог од својих.
೧೦ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
11 Да се постарамо, дакле, ући у тај покој, да не упадне ко у ону исту гатку неверства.
೧೧ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
12 Јер је жива реч Божија, и јака, и оштрија од сваког мача оштрог с обе стране, и пролази тја до растављања и душе и духа, и зглавака и мозга, и суди мислима и помислима срца.
೧೨ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
13 И нема твари непознате пред Њиме, него је све голо и откривено пред очима Оног коме говоримо.
೧೩ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.
14 Имајући, дакле, великог Поглавара свештеничког, који је прошао небеса, Исуса сина Божијег, да се држимо признања.
೧೪ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.
15 Јер немамо Поглавара свештеничког који не може пострадати с нашим слабостима, него који је у свачему искушан као и ми, осим греха.
೧೫ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
16 Да приступимо, дакле, слободно к престолу благодати, да примимо милост и нађемо благодат за време кад нам затреба помоћ.
೧೬ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.

< Јеврејима 4 >