< Лука 8 >

1 После тога иђаше Он по градовима и по селима учећи и проповедајући јеванђеље о царству Божијем, и дванаесторица с Њим.
ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,
2 И неке жене које беху исцељене од злих духова и болести: Марија, која се зваше Магдалина, из које седам ђавола изиђе,
ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,
3 И Јована, жена Хузе пристава Иродовог, и Сусана, и друге многе које служаху Њему имањем својим.
ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.
4 А кад се сабра народа много, и из свих градова долажаху к Њему, каза у причи:
ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ,
5 Изиђе сејач да сеје семе своје; и кад сејаше, једно паде крај пута, и погази се, и птице небеске позобаше га,
“ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.
6 А друго паде на камен, и изникавши осуши се, јер немаше влаге.
ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.
7 И друго паде у трње, и узрасте трње, и удави га.
ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.
8 А друго паде на земљу добру, и изникавши донесе род сто пута онолико. Говорећи ово повика: Ко има уши да чује нека чује.
ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು.
9 А ученици Његови питаху Га говорећи: Шта значи прича ова?
ಯೇಸುವಿನ ಶಿಷ್ಯರು ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ,
10 А Он рече: Вама је дано да знате тајне царства Божијег; а осталима у причама, да гледајући не виде, и чујући не разумеју.
೧೦ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.
11 А прича ова значи: Семе је реч Божија.
೧೧ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.
12 А које је крај пута то су они који слушају, али потом долази ђаво, и узима реч из срца њиховог, да не верују и да се не спасу.
೧೨ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.
13 А које је на камену то су они који кад чују с радости примају реч; и ови корена немају који за неко време верују, а кад дође време кушања отпадну.
೧೩ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.
14 А које у трње паде, то су они који слушају, и отишавши, од бриге и богатства и сласти овог живота загуше се, и род не сазри.
೧೪ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.
15 А које је на доброј земљи то су они који реч слушају, и у добром и чистом срцу држе, и род доносе у трпљењу. Ово говорећи повика: Ко има уши да чује нека чује.
೧೫ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.
16 Нико, пак, свеће не поклапа судом кад је запали, нити меће под одар, него је метне на свећњак да виде светлост који улазе.
೧೬“ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
17 Јер нема ништа тајно што неће бити јавно, ни сакривено што се неће дознати и на видело изићи.
೧೭ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು.
18 Гледајте, дакле, како слушате; јер ко има, даће му се, а ко нема, узеће се од њега и оно што мисли да има.
೧೮ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.
19 Дођоше пак к Њему мати и браћа Његова, и не могаху од народа да говоре с Њим.
೧೯ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
20 И јавише Му говорећи: Мати Твоја и браћа Твоја стоје напољу, хоће да Те виде.
೨೦ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ,
21 А Он одговарајући рече им: Мати моја и браћа моја они су који слушају реч Божију и извршују је.
೨೧ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.
22 И догоди се у један дан Он уђе с ученицима својим у лађу, и рече им: Да пређемо на оне стране језера. И пођоше.
೨೨ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.
23 А кад иђаху они Он заспа. И подиже се олуја на језеру, и топљаху се, и беху у великој невољи.
೨೩ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.
24 И приступивши пробудише Га говорећи: Учитељу! Учитељу! Изгибосмо. А Он устаде, и запрети ветру и валовима; и престадоше и поста тишина.
೨೪ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.
25 А њима рече: Где је вера ваша? А они се поплашише, и чуђаху се говорећи један другом: Ко је Овај што и ветровима и води заповеда, и слушају Га?
೨೫ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.
26 И дођоше у околину гадаринску која је према Галилеји.
೨೬ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು.
27 А кад изиђе Он на земљу, срете Га један човек из града у коме беху ђаволи од много година, и у хаљине не облачаше се, и не живљаше у кући, него у гробовима.
೨೭ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.
28 А кад виде Исуса, повика и припаде к Њему и рече здраво: Шта је теби до мене, Исусе, Сине Бога Највишег? Молим Те, не мучи ме.
೨೮ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.
29 Јер Исус заповеди духу нечистом да изиђе из човека: јер га мучаше одавно, и метаху га у вериге и у пута да га чувају, и искида свезе, и тераше га ђаво по пустињи.
೨೯ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.
30 А Исус га запита говорећи: Како ти је име? А он рече: Легеон; јер многи ђаволи беху ушли у њ.
೩೦ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.
31 И мољаху Га да им не заповеди да иду у бездан. (Abyssos g12)
೩೧ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. (Abyssos g12)
32 А онде пасаше по гори велико крдо свиња, и мољаху Га да им допусти да у њих уђу. И допусти им.
೩೨ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,
33 Тада изиђоше ђаволи из човека и уђоше у свиње; и навали крдо с брега у језеро, и утопи се.
೩೩ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.
34 А кад видеше свињари шта би, побегоше и јавише у граду и по селима.
೩೪ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು,
35 И изиђоше људи да виде шта је било, и дођоше к Исусу, и нађоше човека из кога ђаволи беху изишли, а он седи обучен и паметан код ногу Исусових; и уплашише се.
೩೫ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.
36 А они што су видели казаше им како се исцели бесни.
೩೬ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು,
37 И моли Га сав народ из околине гадаринске да иде од њих; јер се беху врло уплашили. А Он уђе у лађу и отиде натраг.
೩೭ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.
38 Човек, пак, из кога изиђоше ђаволи мољаше да би с Њим био; али га Исус отпусти говорећи:
೩೮ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ,
39 Врати се кући својој, и казуј шта ти учини Бог. И отиде проповедајући по свему граду шта му Исус учини.
೩೯ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.
40 А кад се врати Исус, срете Га народ, јер Га сви очекиваху.
೪೦ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು.
41 И гле, дође човек по имену Јаир, који беше старешина у зборници, и паде пред ноге Исусове, и мољаше Га да уђе у кућу његову;
೪೧ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.
42 Јер у њега беше јединица кћи од дванаест година, и она умираше. А кад иђаше Исус, туркаше Га народ.
೪೨
43 И беше једна болесна жена од течења крви дванаест година, која је све своје имање потрошила на лекаре и ниједан је није могао излечити,
೪೩ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.
44 И приступивши састраг дотаче се скута од хаљине Његове, и одмах стаде течење крви њене.
೪೪ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.
45 И рече Исус: Ко је то што се дотаче мене? А кад се сви одговараху, рече Петар и који беху с њим: Учитељу! Народ Те опколио и турка Те, а Ти кажеш: Ко је то што се дотаче мене?
೪೫ಆಗ ಯೇಸುವು, “ನನ್ನನ್ನು ಮುಟ್ಟಿದವರಾರು?” ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, “ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರಲ್ಲಾ” ಅಂದನು.
46 А Исус рече: Неко се дотаче мене; јер ја осетих силу која изиђе из мене.
೪೬ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,
47 А кад виде жена да се није сакрила, приступи дрхћући, и паде пред Њим, и каза Му пред свим народом зашто Га се дотаче и како одмах оздрави.
೪೭ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು.
48 А Он јој рече: Не бој се, кћери! Вера твоја поможе ти; иди с миром.
೪೮ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.
49 Док Он још говораше, дође неко од куће старешине зборничког говорећи му: Умре кћи твоја, не труди учитеља.
೪೯ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, “ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ” ಅಂದನು.
50 А кад чу Исус, одговори му говорећи: Не бој се, само веруј, и оживеће.
೫೦ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು.
51 А кад дође у кућу, не даде ниједноме ући осим Петра и Јована и Јакова, и девојчиног оца и матере.
೫೧ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ.
52 А сви плакаху и јаукаху за њом; а Он рече: Не плачите, није умрла него спава.
೫೨ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, “ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಅನ್ನಲು,
53 И подсмеваху Му се знајући да је умрла.
೫೩ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು.
54 А Он изагнавши све узе је за руку, и зовну говорећи: Девојко! Устани!
೫೪ಆದರೆ ಆತನು ಆಕೆಯ ಕೈ ಹಿಡಿದು, “ಮಗಳೇ, ಎದ್ದೇಳು” ಎಂದು ಕೂಗಿ ಹೇಳಿದನು.
55 И поврати се дух њен, и устаде одмах; и заповеди да јој дају нека једе.
೫೫ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.
56 И дивише се родитељи њени. А Он им заповеди да никоме не казују шта је било.
೫೬ಆಕೆಯ ತಂದೆತಾಯಿಗಳು ಬೆರಗಾದರು. ಆತನು, ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಅವರಿಗೆ ಆಜ್ಞಾಪಿಸಿದನು.

< Лука 8 >